• search

ರೈಲಿನಲ್ಲಿ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಬಿಜೆಪಿ ಸದಸ್ಯನ ಬಂಧನ

Subscribe to Oneindia Kannada
For Quick Alerts
ALLOW NOTIFICATIONS
For Daily Alerts

  ಚೆನ್ನೈ, ಏಪ್ರಿಲ್ 23: ರೈಲಿನಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಚೆನ್ನೈನ ಬಿಜೆಪಿ ಕಾರ್ಯಕರ್ತರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

  ಕೇರಳದ ತಿರುವನಂತಪುರಂನಿಂದ ತಮಿಳುನಾಡಿನ ಚೆನ್ನೈಗೆ ರೈಲಿನಲ್ಲಿ ಚಲಿಸುತ್ತಿದ್ದ ಬಿಜೆಪಿ ಸದಸ್ಯ ಪ್ರೇಮ್ ಆನಂದ್ ರೈಲಿನಲ್ಲಿ ಸಹಪ್ರಯಾಣ ಮಾಡುತ್ತಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ನೀಡಿದ್ದರು. ಈ ಕುರಿತು ಅಪ್ರಾಪ್ತೆ ನೀಡಿದ ದೂರಿನನ್ವಯ ಪೋಕ್ಸೋ(Protection of Children from Sexual Offences Act) ಕಾಯ್ದೆಯಡಿ ದೂರು ದಾಖಲಿಸಲಾಗಿದೆ.

  12 ವರ್ಷದೊಳಗಿನ ಮಕ್ಕಳ ಮೇಲಿನ ಅತ್ಯಾಚಾರಕ್ಕೆ ಗಲ್ಲುಶಿಕ್ಷೆ

  ಬಾಲಕಿಗೆ ಅವರು ಲೈಂಗಿಕ ಕಿರುಕುಳ ನೀಡುತ್ತಿದ್ದಂತೆಯೇ ಬಾಲಕಿ ಜೋರಾಗಿ ಕೂಗಿದ್ದರಿಂದ ಮಲಗಿದ್ದ ತಂದೆ, ತಾಯಿ ಎಚ್ಚರಗೊಂಡು ಪ್ರೇಮ್ ಆನಂದ್ ಅವರಿಗೆ ದಬಾಯಿಸಿದ್ದಾರೆ. ಆ ಸಂದರ್ಭದಲ್ಲಿ ಪ್ರೇಮ್ ಆನಂದ್, 'ನಾನು ಬಿಜೆಪಿ ಸದಸ್ಯ. ನನಗೆ ದೊಡ್ಡ ದೊಡ್ಡ ರಾಜಕಾರಣಿಗಳೊಂದಿಗೆ ಸಂಪರ್ಕವಿದೆ' ಎಂದು ಹೆದರಿಸಿದ್ದಾರೆ ಎಂದು ಪೊಲೀಸರಿಗೆ ದೂರು ನೀಡುವ ಸಮಯದಲ್ಲಿ ಬಾಲಕಿಯ ತಂದೆ-ತಾಯಿ ಆರೋಪಿಸಿದ್ದಾರೆ.

  BJP man held for sexually assaulting a minor girl in train in Chennai

  2006 ರಲ್ಲಿ ಉತ್ತರ ಚೆನ್ನೈನ ಆರ್ ಕೆ ನಗರ ಕ್ಷೇತ್ರದಿಂದ ಇವರು ಬಿಜೆಪಿ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದರು.

  ಅಪ್ರಾಪ್ತೆಯರಿಗೆ ಲೈಂಗಿಕ ಕಿರುಕುಳ ನೀಡುವ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದ್ದು, ಉತ್ತರ ಪ್ರದೇಶದ ಉನ್ನಾವೋ ದಲ್ಲಿ ಅಪ್ರಾಪ್ತೆಯ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಕುಲ್ದೀಪ್ ಸಿಂಗ್ ಸೆನ್ಗಾರ್ ಅವರನ್ನು ಬಂಧಿಸಿರುವುದನ್ನು ಈ ಸಂದರ್ಭದಲ್ಲಿ ಸ್ಮರಿಸಬಹುದು.

  ನಿರ್ಧಾರ ಸ್ವಾಗತಾರ್ಹ, ಆದರೂ... ಎಲ್ಲಾ ಅತ್ಯಾಚಾರಿಗಳೂ ಗಲ್ಲಿಗೇರಲಿ!

  12 ವರ್ಷ ಅಥವಾ ಅದಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ಅತ್ಯಾಚಾರ ಎಸಗುವವರಿಗೆ ಮರಣದಂಡನೆ ನೀಡುವ ಮಹತ್ವದ ತಿದ್ದುಪಡಿಯನ್ನು ಪೋಕ್ಸೋ ಕಾಯ್ದೆಯಲ್ಲಿ ಕೇಂದ್ರ ಸರ್ಕಾರ ತಂದಿರುವುದನ್ನು ಈ ಸಂದರ್ಭದಲ್ಲಿ ನೆನೆಯಬಹುದು.

  ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

  English summary
  A man who is an BJP activist and contested as BJP candidate in 2006 from RK Nagara constituency in Tamil Nadu was arrested by police for sexually assaulting a minor girl in train running between Thiruvananthapuram and Chennai

  Oneindia ಬ್ರೇಕಿಂಗ್ ನ್ಯೂಸ್,
  ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

  X
  We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more