ಬೋರ್‌ವೆಲ್‌ಗೆ ಬಿದ್ದಿದ್ದ ಬಾಲಕ ಮತ್ತೆ ಹೆತ್ತವರ ಮಡಿಲು ಸೇರಲಿಲ್ಲ

Recommended Video

      Trapped in a bore well, Sujith gives up after fighting for 80 hours straight | Oneindia Kannada

      ಚೆನ್ನೈ, ಅಕ್ಟೋಬರ್ 29: ಬೋರ್‌ವೆಲ್ ನಲ್ಲಿ ಬಿದಿದ್ದ ಬಾಲಕ ಮತ್ತೆ ಹೆತ್ತವರ ಮಡಿಲು ಸೇರಲೇ ಇಲ್ಲ, ಸತತ ನಾಲ್ಕು ದಿನಗಳ ಜೀವನ್ಮರಣ ನಡುವೆ ಹೋರಾಡುತ್ತಿದ್ದ ಬಾಲಕ ಮೃತಪಟ್ಟಿದ್ದಾನೆ.

      ಸುಜಿತ್(2) ಬೋರ್‌ವೆಲ್‌ಗೆ ಬಿದ್ದಿದ್ದು, ಕಳೆದ ನಾಲ್ಕು ದಿನಗಳಿಂದ ನಿರಂತರ ಕಾರ್ಯಾಚರಣೆ ನಡೆಯುತ್ತಿತ್ತು ಕೊನೆಗೂ ಬಾಲಕ ಬದುಕಿ ಬರಲೇ ಇಲ್ಲ.

      borewell

      ತಮಿಳುನಾಡಿನ ತಿರುಚ್ಚಿ ನಡಕಟ್ಟುಪಟ್ಟಿ ಸಮೀಪ ಬೋರ್‌ವೆಲ್‌ಗೆ ಶುಕ್ರವಾರ ಸಂಜೆ ಸುಜಿತ್ ಆಯಾತಪ್ಪಿ ಬಿದ್ದಿದ್ದನು. ಸುಮಾರು 600 ಅಡಿ ಆಳದ ಬೋರ್‌ವೆಲ್‌ನಲ್ಲಿ ಬಿದ್ದ ಸುಜಿತ್ 100 ಅಡಿ ಆಳದಲ್ಲಿ ಸಿಲುಕಿದ್ದನು.

      ಕಳೆದ ನಾಲ್ಕು ದಿನಗಳಿಂದ ಸುಜಿತ್ ನನ್ನು ರಕ್ಷಿಸಲು ಅಲ್ಲಿನ ಜಿಲ್ಲಾಡಳಿತ ಹರಸಾಹಸ ಪಟ್ಟರೂ ಬಾಲಕನ ಜೀವ ಉಳಿಸಲು ಆಗಲಿಲ್ಲ. ಜಿಲ್ಲಾಡಳಿತ ಮಾಡಿದ ಎಲ್ಲಾ ಪ್ರಯತ್ನಗಳು ವಿಫಲವಾಗಿದೆ.

      ಕೊಳವೆಬಾವಿಯಿಂದ ಮೃತದೇಹದ ಕೊಳೆತ ದುರ್ವಾಸನೆ ಬರುತ್ತಿದ್ದ ಕಾರಣ ಆತ ಮೃತಪಟ್ಟಿರುವುದು ಖಚಿತವಾಗಿದೆ. ಬಾಲಕನ ಮೃತದೇಹ ಹೆರತೆಗೆಯಲಾಗಿದ್ದು, ಅದನ್ನು ಮರಣೋತ್ತರ ಪರೀಕ್ಷೆಗೆಂದು ಕಳುಹಿಸಿದ್ದೇವೆ ಎಂದು ತಿಳಿಸಿದ್ದಾರೆ.

      ವಿಪರೀತ ದುರ್ವಾಸನೆ ಬರುತ್ತಿರುವ ಕಾರಣ ಅಧಿಕಾರಿಗಳು ಸಧ್ಯಕ್ಕೆ ಕಾರ್ಯಾಚರಣೆಯನ್ನು ನಿಲ್ಲಿಸಿದ್ದಾರೆ. ಈ ಕುರಿತು ಅಧಿಕಾರಿಯೊಬ್ಬರು ಮಾತನಾಡಿ, ನಾವು ಬಾಲಕನನ್ನು ರಕ್ಷಣೆ ಮಾಡಲು ಸಾಕಷ್ಟು ಕಷ್ಟಪಟ್ಟೆವು ಆದರೆ ನಮ್ಮಿಂದ ಆತನನ್ನು ಜೀವಂತವಾಗಿ ಕೊಳವೆಬಾವಿಯಿಂದ ಹೊರತೆಗೆಯಲು ಸಾಧ್ಯವಾಗಲಿಲ್ಲ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+