ಚೆನ್ನೈ: ಕಟ್ಟಡ ಕುಸಿತ 11 ಬಲಿ, ಹಲವರಿಗೆ ಗಾಯ

ಚೆನ್ನೈ, ಜೂ.29: ಚೆನ್ನೈನ ಹೊರವಲಯದ ಪೊರೂರ್‌ನಲ್ಲಿ ನಿರ್ಮಾಣ ಹಂತದಲ್ಲಿದ್ದ 11 ಅಂತಸ್ತಿನ ಕಟ್ಟಡವೊಂದು ಶನಿವಾರ ಸಂಜೆ ಕುಸಿದು ಬಿದ್ದ ಘಟನೆ ನಡೆದಿದೆ. ಭಾರಿ ಮಳೆ, ಗಾಳಿ ಹೊಡೆತಕ್ಕೆ ಕಟ್ಟಡ ಕುಸಿದಿದೆ ಎಂದು ತಿಳಿದು ಬಂದಿದೆ. ಇತ್ತೀಚಿನ ವರದಿ ಪ್ರಕಾರ ಈ ದುರ್ಘಟನೆಯಲ್ಲಿ ಐವರು ಸಾವನ್ನಪ್ಪಿದ್ದು, 15ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. 50ಕ್ಕೂ ಅಧಿಕ ಮಂದಿ ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಪೊರೂರ್‌ನ ಮೌಲ್ವಿವಾಕ್ಕಂನಲ್ಲಿ ನಿರ್ಮಾಣ ಹಂತದಲ್ಲಿದ್ದ 11 ಅಂತಸ್ತಿನ ಕಟ್ಟಡವೊಂದು ಶನಿವಾರ ಸಂಜೆ ಕುಸಿದಿದ್ದು, ಸಾವು ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ ರಕ್ಷಿಸಲು ವಿವಿಧ ತಂಡಗಳು ಭಾರೀ ಕಾರ್ಯಾಚರಣೆ ಕೈಗೊಂಡಿವೆ. ಗಾಯಗೊಂಡವರಲ್ಲಿ ಐವರ ಸ್ಥಿತಿ ಚಿಂತಾಜನಕವಾಗಿದೆ.

ಘಟನಾ ಸ್ಥಳದಲ್ಲಿ 12ಕ್ಕೂ ಅಧಿಕ ಅಗ್ನಿಶಾಮಕ ಪಡೆ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಮತ್ತೂಂದೆಡೆ ಅರಕ್ಕೋಣಂನಿಂದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಸಿಬ್ಬಂದಿ ಕೂಡಾ ಘಟನಾ ಸ್ಥಳಕ್ಕೆ ತೆರಳಿದ್ದಾರೆ. ಕಟ್ಟಡದೊಳಗೆ ಸಿಕ್ಕಿಬಿದ್ದವರನ್ನು ಹೊರತೆಗೆಯಲು ಶ್ರಮ ಪಡುತ್ತಿದ್ದಾರೆ.

Building collapses in Chennai; 5 dead, 15 injured

ಘಟನಾ ಸ್ಥಳದಲ್ಲಿ ಬಿಡದಂತೆ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಕ್ಕೆ ಹಿನ್ನಡೆಯಾಗಿದೆ. ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸುವ ಮುಖ್ಯಮಂತ್ರಿ ಜಯಲಲಿತಾ ಅವರು 'ಕಾರ್ಯಾಚರಣೆಗೆ ಅನುಕೂಲವಾಗುವಂತೆ ವಿಶೇಷ ಬೆಳಕಿನ ವ್ಯವಸ್ಥೆ ಮಾಡಲು ಮತ್ತು ಗಾಯಾಳುಗಳಿಗೆ ಸಾಧ್ಯವಿರುವ ಅತ್ಯುತ್ತಮ ಚಿಕಿತ್ಸೆ ಕೊಡಿಸುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ಭಾರಿ ಮಳೆ, ಗುಡುಗು, ಸಿಡಿಲಿನ ಪ್ರಭಾವದಿಂದ ಘಟನೆ ಸಂಭವಿಸಿದೆ ಎಂದು ಯೋಜನೆಯನ್ನು ಕೈಗೆತ್ತಿಕೊಂಡಿದ್ದ ಕಟ್ಟಡ ನಿರ್ಮಾಣ ಸಂಸ್ಥೆ ಪ್ರೈಮ್ ಸೃಷ್ಟಿ ಹೇಳಿದೆ. ದುರಂತದ ಕಾರಣ ಭಾರಿ ಸಂಚಾರ ದಟ್ಟಣೆಯುಂಟಾಗಿತ್ತು.ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲು ವಿಶೇಷ ಆಂಬುಲೆನ್ಸ್ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ನಗರ ಪೊಲೀಸ್ ಕಮಿಶನರ್ ಎಸ್.ಜಾರ್ಜ್ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+