ಕಾವೇರಿ ಜಲಮಂಡಳಿಗಾಗಿ ರಸ್ತೆಯಲ್ಲೇ ಮಲಗಿದ ಡಿಎಂಕೆ ಕಾರ್ಯಕರ್ತರು!
ಚೆನ್ನೈ, ಏಪ್ರಿಲ್ 03: ಕಾವೇರಿ ಜಲ ನಿರ್ವಹಣ ಮಂಡಳಿ ರಚಿಸುವಲ್ಲಿ ಕೇಂದ್ರ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿರುವುದನ್ನು ಖಂಡಿಸಿ, ಡಿಎಂಕೆ ಕಾರ್ಯಕರ್ತರು ತಮಿಳುನಾಡಿನ ಚೆನ್ನೈನಲ್ಲಿ ಪ್ರತಿಭಟನೆ ನಡೆಸಿದರು.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | 2018ರ ನಿಮ್ಮ ಕನಸಿನ ಸಂಪುಟವನ್ನು ಆಯ್ಕೆ ಮಾಡಿ
ಪ್ರತಿಭಟನಕಾರರು ರಸ್ತೆ ತಡೆ ನಡೆಸಿದ್ದಲ್ಲದೆ, ಹೆದ್ದಾರಿಯಲ್ಲಿ ಮಲಗಿ ಪ್ರತಿಭಟನೆ ನಡೆಸಿದ್ದರಿಂದ ಸಂಚಾರ ಅಸ್ತವ್ಯಸ್ತವಾಗಿತ್ತು.
#Chennai: DMK workers protest over #CauveryWaterManagement issue. #TamilNadu pic.twitter.com/9IwBS5sNPn
— ANI (@ANI) April 3, 2018
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಫೆ.16 ರಂದು ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪಿನಲ್ಲಿ, ತೀರ್ಪು ಬಂದ ಆರುವಾರಗಳ ಒಳಗೆ ಕಾವೇರಿ ಜಲ ನಿರ್ವಹಣ ಮಂಡಳಿ ರಚಿಸುವಂತೆ ಆದೇಶ ನೀಡಿತ್ತು. ಅಲ್ಲದೆ, ಜಲ ನಿರ್ವಹಣ ಮಂಡಳಿ ರಚಿಸಬೇಕೋ ಬೇಡವೋ ಎಂಬುದು ಸಹ ಕೇಂದ್ರ ಸರ್ಕಾರಕ್ಕೆ ಬಿಟ್ಟ ವಿಚಾರ ಎಂದು ಅದು ಹೇಳಿತ್ತು. ಆದರೆ ಇದುವರೆಗೂ ಕಾವೇರಿ ನಿರ್ವಹಣ ಮಂಡಳಿಯನ್ನು ಕುರಿತಂತೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟಿಗೆ ಯಾವುದೇ ಮಾಹಿತಿ ನೀಡಿಲ್ಲ. ಈ ಮೂಲಕ ಕೇಂದ್ರ ಸರ್ಕಾರ ನ್ಯಾಯಾಂಗ ನಿಂದನೆ ಮಾಡಿದೆ ಎಂದು ತಮಿಳುನಾಡು ದೂರಿದೆ.
ಈ ಸಂಬಂಧ ತಮಿಳುನಾಡು ಸುಪ್ರೀಂ ಕೋರ್ಟಿನಲ್ಲಿ ಹೂಡಿರುವ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ಏ.9 ರಂದು ನಡೆಯಲಿದೆ.
ಇಂದು ಬೆಳಿಗ್ಗೆಯಷ್ಟೇ ತಮಿಳುನಾಡು ಮುಖ್ಯಮಂತ್ರಿ ಇ.ಕೆ.ಪಳನೀಸ್ವಾಮಿ ಮತ್ತು ಒ.ಪನ್ನೀರ್ ಸೆಲ್ವಂ ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು.












Click it and Unblock the Notifications