ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾವೇರಿಗಾಗಿ ತಮಿಳುನಾಡು ಸಿಎಂ, ಡಿಸಿಎಂ ಉಪವಾಸ ಸತ್ಯಾಗ್ರಹ!

|
Google Oneindia Kannada News

Recommended Video

ಕಾವೇರಿಗಾಗಿ ತಮಿಳುನಾಡು ಸಿಎಂ, ಡಿಸಿಎಂ ಉಪವಾಸ ಸತ್ಯಾಗ್ರಹ! | Oneindia Kannada

ಚೆನೈ, ಏಪ್ರಿಲ್ 03: ಕಾವೇರಿ ಜಲ ನಿರ್ವಹಣ ಮಂಡಳಿ ರಚಿಸುವಂತೆ ಆಗ್ರಹಿಸಿ ಚೆನ್ನೈನಲ್ಲಿ ಇಂದಿನಿಂದ ತಮಿಳು ನಾಡು ಮುಖ್ಯಮಂತ್ರಿ ಇ.ಕೆ.ಪಳನೀಸ್ವಾಮಿ ಮತ್ತು ಉಪಮುಖ್ಯಮಂತ್ರಿ ಒ.ಪನ್ನೀರ್ ಸೆಲ್ವಂ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು

ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಫೆ.16 ರಂದು ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪಿನಲ್ಲಿ, ತೀರ್ಪು ಬಂದ ಆರುವಾರಗಳ ಒಳಗೆ ಕಾವೇರಿ ಜಲ ನಿರ್ವಹಣ ಮಂಡಳಿ ರಚಿಸುವಂತೆ ಆದೇಶ ನೀಡಿತ್ತು. ಅಲ್ಲದೆ, ಜಲ ನಿರ್ವಹಣ ಮಂಡಳಿ ರಚಿಸಬೇಕೋ ಬೇಡವೋ ಎಂಬುದು ಸಹ ಕೇಂದ್ರ ಸರ್ಕಾರಕ್ಕೆ ಬಿಟ್ಟ ವಿಚಾರ ಎಂದು ಅದು ಹೇಳಿತ್ತು.

ಕಾವೇರಿ ನಿರ್ವಹಣಾ ಮಂಡಳಿ ರಚಿಸದಿದ್ದರೆ ಆತ್ಮಹತ್ಯೆ:ಸಂಸದನಿಂದ ಬೆದರಿಕೆಕಾವೇರಿ ನಿರ್ವಹಣಾ ಮಂಡಳಿ ರಚಿಸದಿದ್ದರೆ ಆತ್ಮಹತ್ಯೆ:ಸಂಸದನಿಂದ ಬೆದರಿಕೆ

ಆದರೆ ನಿರ್ವಹಣ ಮಂಡಳಿ ರಚಿಸುವಲ್ಲಿ ಕೇಂದ್ರ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ದೂರಿ ಇದೀಗ ಉಪವಾಸ ಸತ್ಯಾಗ್ರಹ ಕೈಗೊಳ್ಳಲಾಗಿದೆ ಎಂದು ಪಳನೀಸ್ವಾಮಿ ತಿಳಿಸಿದ್ದಾರೆ.

2018ರ ನಿಮ್ಮ ಕನಸಿನ ಸಂಪುಟವನ್ನು ಆಯ್ಕೆ ಮಾಡಿ

ಇತ್ತೀಚೆಗಷ್ಟೇ ಜಲ ಮಂಡಳಿ ರಚನೆಗೆ ಒತ್ತಾಯಿಸಿ ಎಐಎಡಿಎಂಕೆ ಸಂಸದರು ಸಂಸತ್ ಎದುರು ಪ್ರತಿಭಟನೆ ನಡೆಸಿದ್ದರು. ಅಷ್ಟೇ ಅಲ್ಲ, ಎಐಎಡಿಎಂಕೆ ಸಂಸದ ನವನೀತಕೃಷ್ಣನ್ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ಜಲ ಮಂಡಳಿ ರಚಿಸದಿದ್ದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಒಡ್ಡಿದ್ದರು.

English summary
Chennai: Tamil Nadu CM Edappadi K. Palaniswami & Deputy CM O. Panneerselvam start hunger hunger strike over Cauvery Mangement Board issue.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X