ಚೆನ್ನೈ: ಕನ್ನಡಿಗರಿಗೆ ಧಿಕ್ಕಾರ ಕೂಗಿ, ಬೆಂಕಿ ಹಚ್ಚಿಕೊಂಡ ಪ್ರಜೆ!

Posted By:
Subscribe to Oneindia Kannada

ಚೆನ್ನೈ, ಸೆ. 15: ಕರ್ನಾಟಕದಲ್ಲಿ ಕಾವೇರಿ ವಿವಾದ ತಾರಕಕ್ಕೇರಿದ ಸಮಯದಲ್ಲಿ ತಮಿಳರ ಮೇಲೆ ಕನ್ನಡಿಗರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ನಾಮ್ ತಮಿಳರ್ ಪಕ್ಷದ ಕಾರ್ಯಕರ್ತನೊಬ್ಬ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗುರುವಾರ ನಡೆದಿದೆ.

ಆತ್ಮಹತ್ಯೆಗೆ ಯತ್ನಿಸಿದವನನ್ನು ವಿಘ್ನೇಶ್ ಎಂದು ಗುರುತಿಸಲಾಗಿದ್ದು, ತಂಜಾವೂರು ಬಳಿಯ ಮಣ್ಣಾರ್ ಗುಡಿ ಎಂಬ ಊರಿನ ನಿವಾಸಿ ಎಂದು ತಿಳಿದು ಬಂದಿದೆ.

Cauvery row: Naam Tamilar activist sets himself ablaze

ನಟ ಕಮ್ ರಾಜಕಾರಣಿ ಸೀಮಾನ್ ನಾಯಕತ್ವದ ನಾಮ್ ತಮಿಳರ್ ಕಚ್ಚಿಯ ಕಾರ್ಯಕರ್ತನಾದ ವಿಘ್ನೇಶ್ ಸ್ಥಿತಿ ಗಂಭೀರವಾಗಿದ್ದು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಗುರುವಾರ ಪಕ್ಷದ ವತಿಯಿಂದ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಫೇಸ್ ಬುಕ್ಕಿನಲ್ಲಿ ಮುಂಚಿತವಾಗಿ ಪ್ರಕಟಿಸಿದ್ದ ಎನ್ನಲಾಗಿದೆ. ಈ ಘಟನೆಯನ್ನು ನೇರವಾಗಿ ಟೆಲಿಕಾಸ್ಟ್ ಮಾಡಿದರೆ ನಿಮ್ಮ ವಾಹಿನಿಯ ಟಿಆರ್ ಪಿ ಹೆಚ್ಚುತ್ತದೆ ಎಂದು ಮಾಧ್ಯಮಗಳಿಗೆ ಹೇಳಿದ್ದನಂತೆ. ಆದರೆ, ಯಾರೂ ಈ ಬಗ್ಗೆ ಗಮನಹರಿಸಿರಲಿಲ್ಲ. ಆದರೆ, ಈ ಘಟನೆ ನಂತರ ಆತನ ಫೇಸ್ ಬುಕ್ ಪೋಸ್ಟ್ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ.

Cauvery row: Naam Tamilar activist sets himself ablaze

ಶುಕ್ರವಾರದಂದು ತಮಿಳುನಾಡು ಬಂದ್ ಗೆ ರೈತ ಸಂಘಟನೆಗಳು ಕರೆ ನೀಡಿದ್ದು, ನಾಮ್ ತಮಿಳರ್ ಕಚ್ಚಿ ಸೇರಿದಂತೆ ಅನೇಕ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.

ಗುರುವಾರದಂದು ಪುದುಪೇಟ್ ನಿಂದ ಎಗ್ಮೋರ್ ತನಕ ಪ್ರತಿಭಟನಾ ಮೆರವಣಿಗೆ ನಡೆದ ಸಂದರ್ಭದಲ್ಲಿ ಕನ್ನಡಿಗರ ವಿರುದ್ಧ ಘೋಷಣೆ ಕೂಗುತ್ತಾ ವಿಘ್ನೇಶ್ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ತಕ್ಷಣ ಆತನನ್ನು ಕಿಲ್ಪಾಕ್ ಆಸ್ಪತ್ರೆಗೆ ಸೇರಿಸಲಾಗಿದೆ.

Cauvery row: Naam Tamilar activist sets himself ablaze

ತಮಿಳುನಾಡು ಬಂದ್ ವೇಳೆ ಕನ್ನಡಿಗರ ಸುರಕ್ಷತೆ ಕಾಪಾಡುವಂತೆ ಕರ್ನಾಟಕದ ಸಿಎಂ ಸಿದ್ದರಾಮಯ್ಯ ಅವರು ತಮಿಳು ನಾಡು ಸಿಎಂ ಜಯಲಲಿತಾ ಅವರಿಗೆ ಪತ್ರ ಬರೆದಿದ್ದಾರೆ. ಆದರೆ, ಜಯಲಲಿತಾ ಅವರು ಇನ್ನೂ ಉತ್ತರ ಕೊಟ್ಟಿಲ್ಲ.(ಒನ್ಇಂಡಿಯಾ ಸುದ್ದಿ)

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Cauvery row: Naam Tamilar activist sets Vignesh himself ablaze during anti-Karnataka protest in Chennai, hospitalised
Please Wait while comments are loading...