ಸಿಬಿಐ ದಾಳಿ ವೇಳೆ ಏನೂ ಸಿಕ್ಕಿಲ್ಲ: ಪಿ.ಚಿದಂಬರಂ
ಚೆನ್ನೈ, ಮೇ 17: 2011ರಲ್ಲಿ ಅಕ್ರಮವಾಗಿ 50 ಲಕ್ಷ ರೂಪಾಯಿ ಪಡೆದು 250 ಚೀನಿ ಪ್ರಜೆಗಳಿಗೆ ಸೌಲಭ್ಯ ಕಲ್ಪಿಸಿದ್ದಾರೆ ಎಂದು ಆರೋಪಿಸಿದ್ದು, ಚಿದಂಬರಂ ಪುತ್ರ ಕಾರ್ತಿ ವಿರುದ್ಧ ಸಿಬಿಐ ಹೊಸ ಪ್ರಕರಣ ದಾಖಲಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮಂಗಳವಾರ ಬೆಳಗ್ಗೆ ಪಿ. ಚಿದಂಬರಂ ಮತ್ತು ಪುತ್ರ ಕಾರ್ತಿ ಚಿದಂಬರಂಗೆ ಸೇರಿದ ಚೆನ್ನೈ ಮತ್ತು ದೆಹಲಿ ನಿವಾಸ, ಕಚೇರಿಗಳ ಮೇಲೆ ದಾಳಿ ನಡೆಸಿ ಶೋಧಕಾರ್ಯ ನಡೆಸಿದ್ದರು.
ಚೆನ್ನೈ ಮತ್ತು ದೆಹಲಿಯ ಕಚೇರಿ ಮತ್ತು ನಿವಾಸಗಳಲ್ಲಿ ಸಿಬಿಐ ಅಧಿಕಾರಿಗಳ ತಂಡ ಶೋಧಕಾರ್ಯ ನಡೆಸಿದ್ದು, ಸಿಬಿಐ ಅಧಿಕಾರಿಗಳಿಗೆ ಏನೂ ಸಿಕ್ಕಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಪಿ.ಚಿದಂಬರಂ ಸ್ಪಷ್ಟನೆ ನೀಡಿದ್ದಾರೆ.
This morning, a CBI team searched my residence at Chennai and my official residence at Delhi. The team showed me a FIR in which I am not named as an accused.
— P. Chidambaram (@PChidambaram_IN) May 17, 2022
The search team found nothing and seized nothing.
I may point out that the timing of the search is interesting.
ಸಿಬಿಐ ಶೋಧ ಕಾರ್ಯ ಕುರಿತಂತೆ ಟ್ವೀಟ್ ಮಾಡಿರುವ ಚಿದಂಬರಂ, "ಸಿಬಿಐ ಅಧಿಕಾರಿಗಳು ನನಗೆ ತೋರಿಸಿದ ಎಫ್ಐಆರ್ನಲ್ಲಿ ನನ್ನನ್ನು ಆರೋಪಿ ಎಂದು ಹೆಸರಿಸಿಲ್ಲ, ಶೋಧಕಾರ್ಯದ ವೇಳೆ ಅಧಿಕಾರಿಗಳಿಗೆ ಏನೂ ಸಿಕ್ಕಿಲ್ಲ, ಆದರೆ ಅಧಿಕಾರಿಗಳ ಶೋಧನೆಯ ಕಾರ್ಯಾಚರಣೆ ಆಸಕ್ತಿಕರವಾಗಿತ್ತು ಎಂದಷ್ಟೇ ಹೇಳಬಲ್ಲೆ" ಎಂದು ತಿಳಿಸಿದ್ದಾರೆ.

ಸಿಬಿಐ ದಾಳಿ ಕುರಿತಂತೆ ಕಾರ್ತಿ ಚಿದಂಬರ್ ಟ್ವೀಟ್ ಮಾಡಿದ್ದು "2015ರಲ್ಲಿ ಎರಡು ಬಾರಿ, 2017ರಲ್ಲಿ ಒಮ್ಮೆ, 2018ರಲ್ಲಿ ಎರಡು ಬಾರಿ ಮತ್ತು ಇಂದು, ಅದೆಷ್ಟು ಬಾರಿ ನನ್ನ ಮೇಲೆ ಸಿಬಿಐ ದಾಳಿ ಆಗಿದೆಯೋ? ನನಗೆ ಎಣಿಕೆಗೆ ಸಿಗುತ್ತಿಲ್ಲ, ಬಹುಶಃ ಇದು ದಾಖಲೆಯೇ ಇರಬೇಕು ಎಂದು" ಹೇಳಿದ್ದಾರೆ.

ಐಎನ್ಎಕ್ಸ್ ಮೀಡಿಯಾ ಮತ್ತು ಏರ್ಸೆಲ್ ಮ್ಯಾಕ್ಸಿಸ್ ಪ್ರಕರಣಗಳಲ್ಲಿ ಕಾರ್ತಿ ಚಿದಂಬರಂ ವಿರುದ್ಧ ತನಿಖೆ ನಡೆಸುತ್ತಿರುವ ಸಿಬಿಐಗೆ ಈ ಪ್ರಕರಣದ ಸುಳಿವು ಸಿಕ್ಕಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications