Video: ತಮಿಳುನಾಡಿನಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ದಾಂಡಿಯಾ ಡ್ಯಾನ್ಸ್!

ಚೆನ್ನೈ, ಮಾರ್ಚ್ 27: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣ ಕೊಯಮತ್ತೂರು ಕ್ಷೇತ್ರವು ತೀವ್ರ ಕುತೂಹಲ ಕೆರಳಿಸಿದೆ. ರಾಜ್ಯದ ಐದು ಕ್ಷೇತ್ರಗಳಲ್ಲಿ ಭಾರತೀಯ ಜನತಾ ಪಕ್ಷ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ನಡೆಯುತ್ತಿದೆ.

ದಕ್ಷಿಣ ಕೊಯಮತ್ತೂರು ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವನಿಥಿ ಶ್ರೀನಿವಾಸನ್ ಪರ ಕೇಂದ್ರ ಸಚಿವ ಸ್ಮೃತಿ ಇರಾನಿ ಪ್ರಚಾರ ನಡೆಸಿದರು. ಬಿಜೆಪಿ ಕಾರ್ಯಕರ್ತರ ಜೊತೆ ಸಾಂಪ್ರದಾಯಕ ದಾಂಡಿಯಾ ನೃತ್ಯ ಮಾಡಿ ಗಮನ ಸೆಳೆದರು.

ರಾಜ್ಯದ ವಿಧಾನಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಯಪ್ರಕಾಶ್ ನಡ್ಡಾ ಅವರು ಹಾರ್ಬರ್ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ವಿನೋಜ್ ಸೆಲ್ವಂ ಪರವಾಗಿ ಚೆನ್ನೈನಲ್ಲಿ ಶುಕ್ರವಾರವಷ್ಟೇ ಭರ್ಜರಿ ಪ್ರಚಾರ ನಡೆಸಿದ್ದರು.

Central Minister Smriti Irani Performs Dandiya With BJP Workers In Coimbatore

ತಮಿಳುನಾಡಿನಲ್ಲಿ 20 ಕಡೆ ಬಿಜೆಪಿ ಅಭ್ಯರ್ಥಿಗಳು:

ತಮಿಳುನಾಡು ವಿಧಾನಸಭೆಯ 234 ಕ್ಷೇತ್ರಗಳ ಚುನಾವಣೆಗೆ ಪ್ರಾದೇಶಿಕ ಎಐಎಡಿಎಂಕೆ ಪಕ್ಷದ ಜೊತೆಗೆ ಭಾರತೀಯ ಜನತಾ ಪಕ್ಷವು ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದೆ. ರಾಜ್ಯ ಚುನಾವಣಾ ಅಖಾಡದಲ್ಲಿ ಬಿಜೆಪಿಯು 20 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ರಾಜ್ಯದಲ್ಲಿ ಏಪ್ರಿಲ್ 6ರಂದು ಒಂದೇ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದ್ದು, ಮೇ 2ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+