ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚುನಾವಣೆ ನಡೆಯುವ ರಾಜ್ಯಗಳಲ್ಲಿ ಕೇಂದ್ರ ಪೊಲೀಸ್‌ ಪಡೆಯದ್ದು ಪ್ರಮುಖ ಪಾತ್ರ

|
Google Oneindia Kannada News

ಚೆನ್ನೈ,ಫೆಬ್ರವರಿ 20: ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಕೇಂದ್ರ ಪೊಲೀಸ್ ಪಡೆ ಪ್ರಮುಖ ಪಾತ್ರವಹಿಸಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ತಿಳಿಸಿದ್ದಾರೆ.

ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ನೆರೆಯ ಪುದುಚೇರಿಯ ಕೇಂದ್ರಾಡಳಿತ ಪ್ರದೇಶಗಳಲ್ಲಿ ಏಪ್ರಿಲ್ ಅಥವಾ ಮೇ ನಲ್ಲಿ ಚುನಾವಣೆ ನಡೆಸುವ ಸಾಧ್ಯೆತ ಇದೆ.

4 ರಾಜ್ಯ ಹಾಗೂ 1 ಕೇಂದ್ರಾಡಳಿತ ಪ್ರದೇಶದ ಚುನಾವಣೆ ಯಾವಾಗ?4 ರಾಜ್ಯ ಹಾಗೂ 1 ಕೇಂದ್ರಾಡಳಿತ ಪ್ರದೇಶದ ಚುನಾವಣೆ ಯಾವಾಗ?

ತಮಿಳುನಾಡು ಸೇರಿದಂತೆ ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ, ನ್ಯಾಯಯುತ ಮತದಾನ ನಡೆಸಲು ಮತ್ತು ಯಾರೂ ಯಾವುದೇ ಅನಗತ್ಯ ಲಾಭವನ್ನು ಪಡೆದುಕೊಳ್ಳದಂತೆ ನೋಡಿಕೊಳ್ಳುವ ಕಾರ್ಯದಲ್ಲಿ ಕೇಂದ್ರ ಪೊಲೀಸ್ ಪಡೆಗಳು ಹೆಚ್ಚಿನ ಪಾತ್ರವಹಿಸುತ್ತವೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ತಿಳಿಸಿದ್ದಾರೆ.

Election

ವಿಧಾನಸಭಾ ಚುನಾವಣೆಯೊಂದಿಗೆ ಕನ್ಯಾಕುಮಾರಿ ಲೋಕಸಭಾ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ. ಕಳೆದ ವರ್ಷ ಕೋವಿಡ್ ನಿಂದಾಗಿ ಕಾಂಗ್ರೆಸ್ ಸಂಸದ ಎಚ್ ವಸಂತಕುಮಾರ್ ಮೃತಪಟ್ಟಿದ್ದರು.

ಚುನಾವಣಾ ಆಯೋಗದ ಉನ್ನತ ಅಧಿಕಾರಿ, ಹಿರಿಯ ಅಧಿಕಾರಿಗಳು ಮತ್ತು ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ತಮ್ಮ ಸಹೋದ್ಯೋಗಿಗಳೊಂದಿಗೆ ಮುಕ್ತ, ನ್ಯಾಯಯುತ ಮತ್ತು ಪಾರದರ್ಶಕ ಚುನಾವಣೆ ನಡೆಸುವ ವಿಶ್ವಾಸ ವ್ಯಕ್ತಪಡಿಸಿದರು.

ಈ ಹಿಂದೆ ಮತದಾರರಿಗೆ ಆಮಿಷ ಒಡ್ಡಿದ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ತಮಿಳುನಾಡು ವಿಧಾನಸಭೆಗೆ ಪ್ರಚೋದನೆ ಮುಕ್ತ, ನ್ಯಾಯಯುತ ಚುನಾವಣೆಯನ್ನು ನಡೆಸಲು ಹಲವಾರು ಕ್ರಮಗಳನ್ನು ಆಲೋಚಿಸಲಾಗುತ್ತಿದೆ. ಇದೇ ವೇಳೆ ಇಬ್ಬರು ವಿಶೇಷ ವೀಕ್ಷಕರನ್ನು ಸಹ ನಿಯೋಜಿಸಲಾಗುವುದು ಎಂದು ಅರೋರಾ ಹೇಳಿದರು.

English summary
Tamil Nadu, the Central police forces would play a greater role as part of measures to ensure fair polls and to see that no one took any undue advantage, Chief Election Commissioner Sunil Arora said here on Thursday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X