ಚೆನ್ನೈ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್

ಚೆನ್ನೈ, ಮಾರ್ಚ್ 16: ಚೆನ್ನೈ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಏರ್ ಲೈನ್ ಗೆ ಬಾಂಬ್ ಬೆದರಿಕೆ ಬಂದಿರುವ ಹಿನ್ನಲೆಯಲ್ಲಿ ಈ ಕ್ರಮ ಜರುಗಿಸಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಹೇಳಿದ್ದಾರೆ.

ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಹಾಗೂ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಚೆನ್ನೈಗೆ ಶುಕ್ರವಾರ ಬೆಳಗ್ಗೆ ಆಗಮಿಸುವ ಕಾರ್ಯಕ್ರಮ ನಿಗದಿಯಾಗಿದೆ. ಇದಕ್ಕೂ ಮುನ್ನ ಈ ರೀತಿ ಬೆದರಿಕೆ ಕರೆ ಬಂದಿದೆ.

Chennai airport put on high alert after bomb threat call

ಚೆನ್ನೈ ಹಾಗೂ ಹೈದರಾಬಾದ್ ನಡುವಿನ ವಿಮಾನ ಸಂಚಾರಕ್ಕೆ ಬೆದರಿಕೆ ಕರೆ ಬಂದಿದೆ. ದಿನವೊಂದರಲ್ಲಿ ಎರಡು ನಗರಗಳ ನಡುವೆ ಸುಮಾರು 22 ವಿಮಾನಗಳು ಸಂಚರಿಸುತ್ತವೆ.

ಬಾಂಬ್ ಬೆದರಿಕೆ ಹಿನ್ನಲೆಯಲ್ಲಿ ವಿಮಾನ ನಿಲ್ದಾಣಕ್ಕೆ ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ ಆಗಮಿಸಿದ್ದು ಪರಿಶೀಲಿಸುತ್ತಿದ್ದಾರೆ. ಬೆದರಿಕೆ ಕರೆ ಬಗ್ಗೆ ತನಿಖೆ ಆರಂಭವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+