ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚೆನ್ನೈ ಮಳೆ: ಮಳೆ ಮೇಲ್ವಿಚಾರಣೆಗೆ ವಾರ್ ರೂಮ್ ಸ್ಥಾಪನೆ

|
Google Oneindia Kannada News

ಚೆನ್ನೈ, ನವೆಂಬರ್ 18: ನಿರಂತರ ಮಳೆಯಿಂದಾಗಿ ಚೆನ್ನೈ ತತ್ತರಿಸಿ ಹೋಗಿದೆ. ನಗರದಲ್ಲಿ ಮುಂದಿನ ವಾರದವರೆಗೆ ಭಾರಿ ಮಳೆಯಾಗುವ ನಿರೀಕ್ಷೆಯಿರುವುದರಿಂದ ಭಾರತೀಯ ಹವಾಮಾನ ಇಲಾಖೆಯು ಗುರುವಾರದಂದು ಚೆನ್ನೈ ಮತ್ತು ಅದರ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ನೀಡಲಾದ ರೆಡ್ ಅಲರ್ಟ್ ಅನ್ನು ಕಾಯ್ದುಕೊಂಡಿದೆ. ಜೊತೆಗೆ ಮಳೆಯ ಮೇಲ್ವಿಚಾಋಣೆಗೆ ವಾರ್‌ರೂಮ್ ಸಹ ಸ್ಥಾಪಿಸಲಾಗಿದೆ. ಕೆಲ ದಿನಗಳಿಂದ ಬೆಂಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ತಮಿಳುನಾಡಿನ ಹಲವು ಜಿಲ್ಲೆಗಳು ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿವೆ.

ಗುರುವಾರ ರಾತ್ರಿಯವರೆಗೂ ತಮಿಳುನಾಡಿನ ಈ ಭಾಗಗಳಲ್ಲಿ ಭಾರೀ ಮಳೆ ಮುಂದುವರೆಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಇಂದು ಮತ್ತು ನಾಳೆ ಚೆನ್ನೈ ಮತ್ತು ಪಕ್ಕದ ಜಿಲ್ಲೆಗಳಲ್ಲಿ ಪ್ರತ್ಯೇಕ ಪ್ರದೇಶಗಳಲ್ಲಿ ಮಳೆಯಾಗಬಹುದು ಎಂದು ತಜ್ಞರು ಹೇಳಿದ್ದಾರೆ. ಈ ಪ್ರದೇಶಗಳಲ್ಲಿ ಇಂದು ಸುಮಾರು 20 ಮಿಮೀ ಮಳೆಯಾಗುವ ನಿರೀಕ್ಷೆಯಿದೆ. ಇಂದು ಮತ್ತು ನಾಳೆ ಮಳೆಯು ಆಂಧ್ರಪ್ರದೇಶದ ದಕ್ಷಿಣ ಭಾಗ ಮತ್ತು ತಮಿಳುನಾಡು ಕರಾವಳಿಯನ್ನು ತಲುಪಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚೆನ್ನೈ, ತಿರುವಳ್ಳೂರು, ಕಾಂಚೀಪುರಂ, ರಾಣಿಪೇಟ್, ದಿಂಡುಗಲ್, ಪುದುಕೊಟ್ಟೈ, ತೇಣಿ, ವೆಲ್ಲೂರು, ಅರಿಯಲ್ಲೂರು, ನಾಗಪಟ್ಟಣಂ, ವಿಲ್ಲುಪುರ, ತಿರುವಾರೂರ್, ಮೈಲಾಡುಧುರೈ, ಕಲ್ಲಕುರಿಚಿ, ಕಡಲೂರು, ವಿಲ್ಲಿಪುರಂ, ತಂಜಾವೂರು ಮತ್ತು ಧರ್ಮಪುರಿಯಲ್ಲಿ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರಲಿದೆ. ಚೆನ್ನೈ ಕಾರ್ಪೊರೇಷನ್‌ನಲ್ಲಿ ವಾರ್ ರೂಮ್ ಅನ್ನು ಸಹ ಸ್ಥಾಪಿಸಲಾಗಿದ್ದು, ಭಾರೀ ಮಳೆಯ ಕಾರಣ ನಾಗರಿಕ ಸಂಸ್ಥೆಯ ಅಧಿಕಾರಿಗಳು ರೆಡ್ ಅಲರ್ಟ್ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ.

 ಪ್ರಾದೇಶಿಕ ಹವಾಮಾನ ಕೇಂದ್ರದ ಮುನ್ಸೂಚನೆ

ಪ್ರಾದೇಶಿಕ ಹವಾಮಾನ ಕೇಂದ್ರದ ಮುನ್ಸೂಚನೆ

ಪ್ರಾದೇಶಿಕ ಹವಾಮಾನ ಕೇಂದ್ರದ ಮುನ್ಸೂಚನೆಯ ಪ್ರಕಾರ ಗುರುವಾರ ತಮಿಳುನಾಡಿನ ತಿರುವಳ್ಳೂರು, ಚೆನ್ನೈ, ಕಾಂಚೀಪುರಂ ಮತ್ತು ರಾಣಿಪೆಟ್ಟೈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ದಿನ, ತಿರುವಣ್ಣಾಮಲೈ, ವಿಲ್ಲುಪುರಂ, ಕಡಲೂರು, ಚೆಂಗಲ್ಪಟ್ಟು, ತಿರುಪತ್ತೂರು ಮತ್ತು ವೆಲ್ಲೂರು ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

 ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕ್ರಮ

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕ್ರಮ

ಎಲ್ಲಾ ಹೆಚ್ಚಿನ ಅಪಾಯದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕ್ರಮಗಳನ್ನು ತ್ವರಿತಗೊಳಿಸಲು ಪ್ರತಿ ವಲಯಕ್ಕೆ ನಿಗಮದ ಎಂಜಿನಿಯರ್‌ಗಳನ್ನು ನೇಮಿಸಲಾಗಿದೆ. ಇದರೊಂದಿಗೆ ನೀರನ್ನು ಹೊರಹಾಕಲು ಪಾಲಿಕೆಯ ಒಡೆತನದ 448, ಬಾಡಿಗೆಗೆ ಪಡೆದ 199 ಮೋಟಾರ್ ಪಂಪ್‌ಗಳು ಮತ್ತು ಇತರ ಸಂಘಗಳ 37 ಸೇರಿದಂತೆ ಒಟ್ಟು 689 ಮೋಟಾರ್ ಪಂಪ್‌ಗಳನ್ನು ನಗರದಾದ್ಯಂತ ನಿಯೋಜಿಸಲಾಗಿದೆ ಎಂದು ನಾಗರಿಕ ಅಧಿಕಾರಿಗಳು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ. ಇವುಗಳಲ್ಲಿ 22 ಮೋಟಾರ್ ಪಂಪ್‌ಗಳು 100 ಕ್ಕಿಂತ ಹೆಚ್ಚು ಹೆಚ್ಚುಶಕ್ತಿಯನ್ನು ಹೊಂದಿವೆ ಮತ್ತು 28 ಪಂಪ್‌ಗಳು 50 HP ಗಿಂತ ಹೆಚ್ಚು ಸಾಮಾರ್ಥ ಹೊಂದಿದ್ದು ಹೆಚ್ಚು ನೀರನ್ನು ವೇಗವಾಗಿ ಹೊರಹಾಕುತ್ತವೆ.

 ಚೆನ್ನೈನ ಪರಿಹಾರ ಶಿಬಿರಗಳಿಗೆ ಶಿಫ್ಟ್

ಚೆನ್ನೈನ ಪರಿಹಾರ ಶಿಬಿರಗಳಿಗೆ ಶಿಫ್ಟ್

ತಮಿಳುನಾಡಿನಲ್ಲಿ 800ಕ್ಕೂ ಹೆಚ್ಚು ಜನರನ್ನು ಚೆನ್ನೈನ ಪರಿಹಾರ ಶಿಬಿರಗಳಿಗೆ ಶಿಫ್ಟ್ ಮಾಡಲಾಗಿದೆ. ಚೆನ್ನೈನ 16ಕ್ಕೂ ಹೆಚ್ಚು ಏರಿಯಾದ ರಸ್ತೆಗಳು ಜಲಾವೃತವಾಗಿದ್ದು, ಚೆನ್ನೈನಲ್ಲಿ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿರುವುದರಿಂದ ಸ್ಥಳೀಯರಿಗೆ ಸುರಕ್ಷಿತ ಪ್ರದೇಶಗಳಲ್ಲಿರಲು ಎಚ್ಚರಿಕೆ ನೀಡಲಾಗಿದೆ.

 ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ

ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ

ಇದೇ ವೇಳೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಸಾರ್ವಜನಿಕರು ಸುರಕ್ಷತಾ ಕ್ರಮಗಳನ್ನು ಅನುಸರಿಸಲು ಮತ್ತು ಅನಗತ್ಯವಾಗಿ ಹೊರಗೆ ಹೋಗದಂತೆ ಸೂಚಿಸಲಾಗಿದೆ. ಕುಡಿಯುವ ನೀರನ್ನು ಸಮರ್ಪಕವಾಗಿ ಸಂಗ್ರಹಿಸಿಟ್ಟುಕೊಳ್ಳುವಂತೆ ಹವಾಮಾನ ಇಲಾಖೆ ಜನರಿಗೆ ಸೂಚಿಸಿದೆ. ಭಾರೀ ಮಳೆಗೆ ತಮಿಳುನಾಡಿನಲ್ಲಿ 14 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರ್ ಜಯಂತ್ ಅವರು ನ.11ರಂದು ತಿಳಿಸಿದ್ದಾರೆ.

Recommended Video

600 ವರ್ಷಗಳ ನಂತರ ನಾಳೆ ಸಂಭವಿಸಲಿದೆ ಸುದೀರ್ಘ ಚಂದ್ರಗ್ರಹಣ | Oneindia Kannada

English summary
India Meteorological Department has maintained the red alert issued in Chennai and its surrounding districts for Thursday as the city is expected to receive extremely heavy rains.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X