ಬಹು ಅಂಗಾಂಗ ವೈಫಲ್ಯದಿಂದ ಶಶಿಕಲಾ ಪತಿ ನಟರಾಜನ್ ನಿಧನ
Recommended Video

ಬಹು ಅಂಗಾಂಗ ವೈಫಲ್ಯದಿಂದ ಶಶಿಕಲಾ ಪತಿ ನಟರಾಜನ್ ನಿಧನ | Oneindia Kannada
ಚೆನ್ನೈ, ಮಾರ್ಚ್ 20: ಜೈಲಿನಲ್ಲಿರುವ ಎಐಎಡಿಎಂಕೆ ನಾಯಕಿ ವಿ ಕೆ ಶಶಿಕಲಾ ಅವರ ಪತಿ ಎಂ.ನಟರಾಜನ್ ಮಾರುತಪ್ಪ(75) ನಿಧನರಾಗಿದ್ದಾರೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ಚೆನ್ನೈನ ಗ್ಲೆನಿಗ್ಲಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು.
ಇಂದು(ಮಾ.20) ಬೆಳಗ್ಗಿನ ಜಾವ ಸುಮಾರು 1:35 ಕ್ಕೆ ಅವರು ಕೊನೆಯುಸಿರೆಳೆದರು. ಕಳೆದ ವರ್ಷವಷ್ಟೇ ಕಿಡ್ನಿ ಮತ್ತು ಲಿವರ್ ಜೋಡಣೆ ಚಿಕಿತ್ಸೆಗೊಳಗಾಗಿದ್ದ ಅವರು ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.

ಅಕ್ರಮ ಆಸ್ತಿ ಪ್ರಕರಣದಲ್ಲಿ ದೋಷಿಯಾಗಿರುವ ಅವರ ಪತ್ನಿ ಶಶಿಕಲಾ ನಟರಾಜನ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಾಲ್ಕು ವರ್ಷಗಳ ಕಾರಾಗ್ರಹ ಶಿಕ್ಷೆ ಅನುಭವಿಸುತ್ತಿದ್ದಾರೆ.












Click it and Unblock the Notifications