ಬಿಜೆಪಿ ಸೇರಿದ ಕೆ. ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲು

ಚೆನ್ನೈ, ಆಗಸ್ಟ್ 28 : ಬಿಜೆಪಿ ಸೇರಿರುವ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲಾಗಿದೆ. ಲಾಕ್ ಡೌನ್ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ದೂರು ದಾಖಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Recommended Video

      ಕರ್ನಾಟಕದಲ್ಲಿ ಪ್ರತಿಮೆ ರಾಜಕಾರಣ ನಡೆಯಬಾರದು‘ - MLA Laxmi hebbalkar | Oneindia Kannada

      ತಮಿಳುನಾಡಿನ ಕೊಯಮತ್ತೂರಿನಲ್ಲಿ ನಿಯಮಗಳನ್ನು ಉಲ್ಲಂಘನೆ ಮಾಡಿ ಗುರುವಾರ ಕೆ. ಅಣ್ಣಾಮಲೈ ಸಭೆ ನಡೆಸಿದ್ದಾರೆ ಎಂಬುದು ಆರೋಪ. ಕೊಯಮತ್ತೂರು ನಗರ ಠಾಣೆ ಪೊಲೀಸರು ದೂರಿನ ಅನ್ವಯ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

      ಬಿಜೆಪಿ ಸೇರಿದ ಬಳಿಕ ವಿಕೆಕೆ ಮೆನನ್ ರಸ್ತೆಯಲ್ಲಿರುವ ಬಿಜೆಪಿ ಕಚೇರಿಗೆ ಗುರುವಾರ ಅಣ್ಣಾಮಲೈ ಭೇಟಿ ನೀಡಿದ್ದರು. ಬಹಳಷ್ಟು ಕಾರ್ಯಕರ್ತರು ಕಚೇರಿಯಲ್ಲಿ ಸೇರಿ ಅವರನ್ನು ಸ್ವಾಗತಿಸಿದ್ದರು.

      Coimbatore Police Register Case Against K Annamalai For Violating Lockdown Rules

      ಕೋವಿಡ್ 19 ಹರಡದಂತೆ ಇರುವ ಲಾಕ್ ಡೌನ್ ನಿಯಮಗಳನ್ನು ಉಲ್ಲಂಘಿಸಿ ಕಚೇರಿಯಲ್ಲಿ ಬಹಳಷ್ಟು ಜನರು ಸೇರಿದ್ದರು. ಪಟಾಕಿ ಸಿಡಿಸಿ ಸಂಭ್ರಮಿಸಿದ್ದರು. ಅಣ್ಣಾಮಲೈ ವಾಹನದಿಂದಲೇ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದರು.

      ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸುಗನ್ಯಾ ಅವರು ಈ ಕುರಿತು ದೂರು ನೀಡಿದ್ದರು. ಕೆ. ಅಣ್ಣಾಮಲೈ, ಬಿಜೆಪಿ ಜಿಲ್ಲಾಧ್ಯಕ್ಷ ಆರ್. ನಂದಕುಮಾರ್, ಬಿಜೆಪಿ ನಾಯಕರಾದ ಜಿಕೆಎಸ್ ಸೆಲ್ವಕುಮಾರ್ ಮುಂತಾದವರ ವಿರುದ್ಧ ಪ್ರಕರಣ ದಾಖಲಾಗಿದೆ.

      ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ದೆಹಲಿಯಲ್ಲಿ ಬುಧವಾರ ಬಿಜೆಪಿ ಸೇರಿದ್ದರು. ಬಳಿಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಭೇಟಿಯಾಗಿದ್ದರು. ಗುರುವಾರ ಅವರು ತಮಿಳುನಾಡಿಗೆ ವಾಪಸ್ ಆಗಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+