• search
  • Live TV
ಚೆನ್ನೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ನಟಿ ಖುಷ್ಬೂ ಕಾಂಗ್ರೆಸ್‌ಗೆ ಗುಡ್‌ಬೈ: ಬಿಜೆಪಿಗೆ ಸೇರ್ಪಡೆ ಸಾಧ್ಯತೆ

|

ಚೆನ್ನೈ, ಅಕ್ಟೋಬರ್ 12: ಹಿರಿಯ ನಟಿ ಹಾಗೂ ಕಾಂಗ್ರೆಸ್ ನಾಯಕಿ ಖುಷ್ಬೂ ಸುಂದರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ ಎನ್ನಲಾಗಿದ್ದು, ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ.

2014ರ ಸೆಪ್ಟೆಂಬರ್ ನಲ್ಲಿ ಡಿಎಂಕೆ ಪಕ್ಷ ತೊರೆದಿದ್ದ ಖುಷ್ಬೂ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಆದರೆ ಕಒಂದೆರೆಡು ತಿಂಗಳಿಂದ ಖುಷ್ಬೂ ಅವರು ಬಿಜೆಪಿಗೆ ಸೇರ್ಪಡೆಯಾಗುವ ಕುರಿತು ಊಹಾಪೋಹ ಎದ್ದಿದ್ದವು. ಕಳೆದವಾರ ಖುಷ್ಬೂ ಅವರು ಬಿಜೆಪಿ ಸೇರ್ಪಡೆ ವಿಚಾರವನ್ನು ತಳ್ಳಿ ಹಾಕಿದ್ದರು.

ಕಾಂಗ್ರೆಸ್ ಪ್ರಚಾರ ವೇಳೆ ನಟಿ ಖುಷ್ಬೂ ಜತೆ ಶಾಂತಿನಗರದಲ್ಲಿ ಯುವಕನ ಅಸಭ್ಯ ವರ್ತನೆ

ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರೆಯಾಗಿದ್ದ ಖುಷ್ಬೂ ಅವರು ಭಾನುವಾರ ರಾತ್ರಿ ಕಾಂಗ್ರೆಸ್ ಗೆ ವಿದಾಯ ಹೇಳಿದ್ದು, ನಾಳೆ ಬೆಳಿಗ್ಗೆ ಅವರು ಬಿಜೆಪಿಗೆ ಸೇರಲಿದ್ದಾರೆ.

ಈ ಬಗ್ಗೆ ಬಿಜೆಪಿ ಮೂಲಗಳು ಮಾಹಿತಿ ನೀಡಿದ್ದು, ಇಂದು ದೆಹಲಿಗೆ ತೆರಳಲಿರುವ ಖುಷ್ಬೂ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಇತರೆ ಹಿರಿಯ ನಾಯಕರನ್ನು ಭೇಟಿ ಮಾಡಿ ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗಿದೆ. ಖುಷ್ಬೂ ಅವರೊಂದಿಗೆ ಐಆರ್ ಎಸ್ ಅಧಿಕಾರಿ, ಖ್ಯಾತ ಯೂಟ್ಯೂಬರ್ ಒಬ್ಬರು ಕೂಡ ನಾಳೆ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.

ದಿಢೀರ್ ಬೆಳವಣಿಗೆಯಲ್ಲಿ ಇದೀಗ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ ಎನ್ನಲಾಗಿದೆ. ಈಗಾಗಲೇ ದೆಹಲಿಗೆ ತೆರಳಲು ವಿಮಾನ ನಿಲ್ದಾಣಕ್ಕೆ ತೆರಳಿಲಿರುವ ಖುಷ್ಬೂ ಅವರು ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

English summary
Popular southern actress-turned politician Khushbu Sundar is likely to join the BJP.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X