ತಮಿಳುನಾಡಲ್ಲಿ ಡಿಎಂಕೆ ಜೊತೆ ಕಾಂಗ್ರೆಸ್ ಮೈತ್ರಿ: 9 ಕ್ಷೇತ್ರಗಳಲ್ಲಿ ಸ್ಪರ್ಧೆ?

ಚೆನ್ನೈ, ಫೆಬ್ರವರಿ 20: ತಮಿಳುನಾಡಿನಲ್ಲಿ ಎಐಎಡಿಎಂಕೆ ಮತ್ತು ಬಿಜೆಪಿ ಮೈತ್ರಿ ಘೋಷಿಸಿದ ನಂತರ ಇದೀಗ ಕಾಂಗ್ರೆಸ್ ಮತ್ತು ಡಿಎಂಕೆ ಪಕ್ಷಗಳೂ ಲೋಕಸಭಾ ಚುನಾವಣೆಯಲ್ಲಿ ಕೈಜೋಡಿಸುವ ಕುರಿತು ಅಂತಿಮ ತೀರ್ಮಾನ ಘೋಷಿಸಲಿವೆ.

ಡಿಎಂಕೆ(ದ್ರಾವಿಡ ಮುನ್ನೇತ್ರ ಕಳಗಂ) ಯು ತಮಿಳುನಾಡಿನ 39 ಲೋಕಸಭಾ ಕ್ಷೇತ್ರಗಳಲ್ಲಿ 9 ಕ್ಷೇತ್ರಗಳನ್ನು ಕಾಂಗ್ರೆಸ್ ಗೆ ಬಿಟ್ಟುಕೊಡಲಿದೆ ಎಂದು ಮೂಲಗಳು ತಿಳಿಸಿವೆ.

ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ(ಎಐಎಡಿಎಂಕೆ), ಪಟ್ಟಾಳಿ ಮಕ್ಕಳ್ ಕಟ್ಚಿ(ಪಿಎಂಕೆ) ಮತ್ತು ಬಿಜೆಪಿ ಪಕ್ಷಗಳು ತಮಿಳುನಾಡಿನಲ್ಲಿ ಮೈತ್ರಿ ಘೋಷಿಸಿದ್ದು, 39 ಲೋಕಸಭಾ ಕ್ಷೇತ್ರಗಳ ಪೈಕಿ 5 ರಲ್ಲಿ ಬಿಜೆಪಿ ಕಣಕ್ಕಿಳಿಯಲಿದೆ.

Congress May Get 9 Seats In Tamil Nadu Alliance With DMK

ಡಿಎಂಕೆ 20-25 ಕ್ಷೇತ್ರಗಳಲ್ಲಿ ಕಣಕ್ಕಿಳಿಯಲಿದ್ದು, ಉಳಿದ ಕ್ಷೇತ್ರಗಳಲ್ಲಿ ಇತರ ಮೈತ್ರಿ ಪಕ್ಷಗಳ ಅಭ್ಯರ್ಥಿಯನ್ನು ಕಣಕ್ಕಿಳಿಸಲು ನಿರ್ಧರಿಸಿದೆ.

2014 ರ ಲೋಕಸಭಾ ಚುನಾವಣೆಯಲ್ಲಿ ಎಐಡಿಎಂಕೆ 37 ಕ್ಷೇತ್ರಗಳಲ್ಲಿ ಗೆದ್ದರೆ, ಬಿಜೆಪಿ 2 ಕ್ಷೇತ್ರಗಳಲ್ಲಿ ಜಯಗಳಿಸಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+