ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತಮಿಳುನಾಡಿನಲ್ಲಿ ವೈದ್ಯರ ನಿವೃತ್ತಿ ಅವಧಿ ಎರಡು ತಿಂಗಳು ವಿಸ್ತರಣೆ

|
Google Oneindia Kannada News

ಚೆನ್ನೈ, ಮಾರ್ಚ್.31: ಕೊರೊನಾ ವೈರಸ್ ಸೋಂಕಿತರಿಗೆ ಚಿಕಿತ್ಸೆ ನೀಡಲು ವೈದ್ಯರು ಮತ್ತು ಸಿಬ್ಬಂದಿ ಅವಶ್ಯಕವಾಗಿರುವ ಹಿನ್ನೆಲೆ ತಮಿಳುನಾಡಿನಲ್ಲಿ ವೈದ್ಯರ ನಿವೃತ್ತಿ ಅವಧಿಯನ್ನು ಎರಡು ತಿಂಗಳ ಅವಧಿಗೆ ವಿಸ್ತರಣೆ ಮಾಡಲಾಗಿದೆ.

ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಈ ಕುರಿತು ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕನ್ನು ನಿಯಂತ್ರಿಸುವ ಮತ್ತು ಸೋಂಕಿತರಿಗೆ ಚಿಕಿತ್ಸೆ ನೀಡುವ ದೃಷ್ಟಿಯಿಂದ ಅಗತ್ಯವಾಗಿ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಅಗತ್ಯವಿದೆ ಎಂದು ತಿಳಿಸಿದ್ದಾರೆ.

ತಮಿಳುನಾಡಿನಲ್ಲಿ ಕೊರೊನಾ ವೈರಸ್‌ಗೆ ಮೊದಲ ಬಲಿತಮಿಳುನಾಡಿನಲ್ಲಿ ಕೊರೊನಾ ವೈರಸ್‌ಗೆ ಮೊದಲ ಬಲಿ

ಮಾರ್ಚ್.31ರ ಅವಧಿಗೆ ಸೇವಾ ಅವಧಿ ಪೂರ್ಣಗೊಳಿಸಿದ ವೈದ್ಯರನ್ನು ಮುಂದಿನ ಎರಡು ತಿಂಗಳು ಕಾಲ ಗುತ್ತಿಗೆ ಆಧಾರದ ಮೇಲೆ ಸೇವೆಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಇದರಿಂದ ವೈದ್ಯರ ಕೊರತೆ ನೀಗಿಸಲು ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

Coronavirus Effect: Tamilnadu Government Extend Retirement Period Of Doctors And Nurses

ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಿದರೆ ಡಬಲ್ ಸ್ಯಾಲರಿ:

ಈ ಹಿಂದೆ ತಮಿಳುನಾಡು ಸರ್ಕಾರವು ಕೊರೊನಾ ವೈರಸ್ ಸೋಂಕಿತರಿಗೆ ಚಿಕಿತ್ಸೆ ನೀಡುವ ವೈದ್ಯರು ಮತ್ತು ಸಿಬ್ಬಂದಿಗೆ ಒಂದು ತಿಂಗಳ ಹೆಚ್ಚುವರಿ ಸಂಬಳವನ್ನು ನೀಡಲಾಗುತ್ತದೆ ಎಂದು ಘೋಷಣೆ ಮಾಡಿತ್ತು. ಇದರ ಬೆನ್ನಲ್ಲೇ ವೈದ್ಯರ ಸೇವಾವಧಿಯನ್ನು ವಿಸ್ತರಣೆ ಮಾಡಲಾಗಿದೆ. ಇದುವರೆಗೂ ರಾಜ್ಯದಲ್ಲಿ 74 ಮಂದಿಗೆ ಕೊರೊನಾ ವೈರಸ್ ಸೋಂಕು ಪಾಸಿಟಿವ್ ಬಂದಿರುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸ್ಪಷ್ಟಪಡಿಸಿದೆ.

English summary
Coronavirus Effect: Tamilnadu Government Extend Retirement Period Of Doctors And Nurses.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X