ತಮಿಳುನಾಡಿನ 34 ಜಿಲ್ಲೆಗಳಿಗೆ ಹರಡಿದ ಕೊರೊನಾ

ಚೆನ್ನೈ, ಏಪ್ರಿಲ್ 7: ಕೊರೊನಾ ವೈರಸ್ ತಮಿಳುನಾಡಿನ 34 ಜಿಲ್ಲೆಗಳಿಗೂ ಹರಡಿದೆ. ಒಟ್ಟು ಸೋಂಕಿತರ ಸಂಖ್ಯೆ 700ರ ಗಡಿ ದಾಟಿದೆ.

64 ವರ್ಷದ ವ್ಯಕ್ತಿ ಮಂಗಳವಾರ ಕೊರೊನಾ ವೈರಸ್‌ನಿಂದ ಮೃತಪಟ್ಟಿದ್ದಾರೆ. ಒಟ್ಟು ಇದುವರೆಗೆ ಏಳು ಮಂದಿ ತಮಿಳುನಾಡಿನಲ್ಲಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ.

ಇಂದು 69 ಹೊಸ ಪ್ರಕರಣಗಳು ದಾಖಲಾಗಿದೆ. ಇದೀಗ ತಮಿಳುನಾಡಿನ 38 ಜಿಲ್ಲೆಗಳ ಪೈಕಿ 34 ಜಿಲ್ಲೆಗಳನ್ನು ಆವರಿಸಿದೆ.ಮಹಿಳೆ ರಕ್ತದೊತ್ತಡ, ಮಧುಮೇಹ ಹೆಚ್ಚಾಗಿ ರಾಜೀವ್ ಗಾಂಧಿ ಜನರಲ್ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಮೃತಪಟ್ಟಿದ್ದಾರೆ.

Coronavirus Spreads To 34 Districts In Tamil Nadu

ನಿಜಾಮುದ್ದೀನ್‌ಗೆ ಹೋಗಿ ಬಂದಿರುವವರ ಪೈಕಿ 63 ಮಂದಿಗೆ ಕೊರೊನಾ ಇರುವುದು ದೃಢಪಟ್ಟಿದೆ.ಲಾಕ್‌ಡೌನ್‌ನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೆ ತರುವ ಅಗತ್ಯವಿದೆ.

ಅಗತ್ಯವಸ್ತುಗಳಿರುವ ಅಂಗಡಿಗಳು ಬೆಳಗ್ಗೆ 6ರಿಂದ ಮಧ್ಯಾಹ್ನ 1ರವರೆಗೆ ಮಾತ್ರ ತೆರೆದಿರುತ್ತದೆ ಎಂದು ಮುಖ್ಯಮಂತ್ರಿ ಇಕೆ ಪಳನಿಸ್ವಾಮಿ ತಿಳಿಸಿದ್ದಾರೆ.ಭಾರತದಲ್ಲಿ ಒಟ್ಟು 4421 ಕೊರೊನಾ ಪ್ರಕರಣಗಳಿವೆ. 114 ಮಂದಿ ಮೃತಪಟ್ಟಿದ್ದಾರೆ. ಕೇರಳದಲ್ಲಿ 327 ಮಂದಿ ಕೊರೊನಾ ಸೋಂಕಿತರಿದ್ದಾರೆ. ಅದರಲ್ಲಿ 58 ಮಂದಿ ಗುಣಮುಖರಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+