ಅಬ್ಬಾ ಜೂನ್ 30 ರವರೆಗೆ ಲಾಕ್ಡೌನ್ ವಿಸ್ತರಿಸಿತು ಈ ರಾಜ್ಯ!
ಚೆನ್ನೈ, ಮೇ 31: ತಮಿಳುನಾಡು ಸರ್ಕಾರ ಕೊರೊನಾವೈರಸ್ ಸೋಂಕು ತಡೆಗಟ್ಟುವುದಕ್ಕಾಗಿ ಲಾಕ್ಡೌನ್ನ್ನು ಜೂನ್ 30 ರವರೆಗೆ ವಿಸ್ತರಿಸುವುದಾಗಿ ಘೋಷಿಸಿದೆ.
''ಕೆಲವು ಸಡಿಲತೆಗಳೊಂದಿಗೆ ಸಾರ್ವಜನಿಕ ಸಾರಿಗೆಯನ್ನು ಭಾಗಶಃ ತೆರೆಯಲಾಗುವುದು ಮತ್ತು ಹೆಚ್ಚಿನ ಉದ್ಯೋಗಿಗಳಿಗೆ ಕೆಲಸಕ್ಕೆ ಹೋಗಲು ಅವಕಾಶ ಕಲ್ಪಿಸಲಾಗುವುದು. ಧಾರ್ಮಿಕ ಸ್ಥಳಗಳು, ಅಂತಾರಾಜ್ಯ ಬಸ್ ಸಾರಿಗೆ, ಮತ್ತು ಮೆಟ್ರೋ ಮೇಲಿನ ನಿರ್ಬಂಧಗಳು ಮುಂದುವರಿಯಲಿವೆ. ಕರೋನವೈರಸ್ ಹರಡುವುದನ್ನು ತಡೆಗಟ್ಟಲು, ರಾಜ್ಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ಮತ್ತು ಕೇಂದ್ರ ಗೃಹ ಸಚಿವಾಲಯದ ಅಧಿಸೂಚನೆಯ ಪ್ರಕಾರ ಜೂನ್ 30 ರವರೆಗೆ ಕರ್ಫ್ಯೂ ವಿಸ್ತರಿಸಲಾಗುತ್ತಿದೆ'' ಎಂದು ತಮಿಳುನಾಡು ಮುಖ್ಯಮಂತ್ರಿ ಮುಖ್ಯಮಂತ್ರಿ ಕೆ ಪಳನಿಸ್ವಾಮಿ ಹೇಳಿದ್ದಾರೆ.
ಲಾಕ್ ಡೌನ್ 5.0; ವಿನಾಯಿತಿ ಇದ್ದರೂ ಇವುಗಳ ಪಾಲನೆ ಕಡ್ಡಾಯ
ತಮಿಳುನಾಡಿನಲ್ಲಿ ಅತಿ ಹೆಚ್ಚು ಕೋವಿಡ್ -19 ಪ್ರಕರಣಗಳನ್ನು ಹೊಂದಿರುವ ಚೆನ್ನೈ, ಕಾಂಚಿಪುರಂ, ತಿರುವಳ್ಳೂರು ಮತ್ತು ಚೆಂಗಲ್ಪೇಟೆ ಜಿಲ್ಲೆಗಳಲ್ಲಿ ಬಸ್ಸುಗಳು ಕಾರ್ಯನಿರ್ವಹಿಸುವುದಿಲ್ಲ ಎಂದು ಪಳನಿಸ್ವಾಮಿ ಹೇಳಿದ್ದಾರೆ.
ಕರೋನವೈರಸ್ನಿಂದ ಹೆಚ್ಚು ಹಾನಿಗೊಳಗಾದ ರಾಜ್ಯಗಳಲ್ಲಿ ತಮಿಳುನಾಡು ಕೂಡ ಸೇರಿದೆ. ತಮಿಳುನಾಡಿನಲ್ಲಿ ಸೋಂಕಿತರ ಸಂಖ್ಯೆ 21,184 ಕ್ಕೆ ಏರಿಕೆಯಾಗಿದೆ.