ತಮಿಳುನಾಡಿನಲ್ಲಿ ಕೊರೊನಾ ವೈರಸ್‌ಗೆ ಮೊದಲ ಬಲಿ

ಚೆನ್ನೈ, ಮಾರ್ಚ್ 25: ತಮಿಳುನಾಡಿನಲ್ಲಿ ಕೊರೊನಾಗೆ ಓರ್ವ ವ್ಯಕ್ತಿ ಬಲಿಯಾಗಿದ್ದು, ದೇಶದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 11ಕ್ಕೇರಿದೆ.

ತಮಿಳುನಾಡಿನ 54 ವರ್ಷದ ವ್ಯಕ್ತಿಯೊಬ್ಬರು ಮಧುರೈನ ರಾಜಾಜಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಸೋಮವಾರ ಅವರಿಗೆ ಕೊರೋನಾ ಸೋಂಕು ತಗಲಿರುವುದು ಪತ್ತೆಯಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಅವರು ಮೃತಪಟ್ಟಿರುವುದಾಗಿ ತಮಿಳುನಾಡಿನ ಆರೋಗ್ಯ ಸಚಿವ ಡಾ. ಸಿ. ವಿಜಯಭಾಸ್ಕರ್ ಟ್ವೀಟ್ ಮಾಡಿದ್ದಾರೆ.

ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ಪಶ್ಚಿಮ ಬಂಗಾಳ ಮತ್ತು ಮಹಾರಾಷ್ಟ್ರದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದರು.

COVID-19 Patient Dies In Tamil Nadu

ಇದೀಗ ತಮಿಳುನಾಡಿನಲ್ಲಿ ಮತ್ತೋರ್ವ ವ್ಯಕ್ತಿ ಮೃತಪಡುವ ಮೂಲಕ ದೇಶದಲ್ಲಿ ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 500ರ ಗಡಿ ದಾಟಿದೆ. ಭಾರತದಲ್ಲಿ ಒಂದೇ ದಿನ 3 ಮಂದಿ ಬಲಿಯಾಗುವ ಮೂಲಕ ಸಾವಿನ ಸಂಖ್ಯೆ 10ಕ್ಕೇರಿತ್ತು. ಮಾರ್ಚ್ 15ರಂದು ಅಮೆರಿಕದಿಂದ ಹಿಮಾಚಲ ಪ್ರದೇಶಕ್ಕೆ ಆಗಮಿಸಿದ್ದ 69 ವರ್ಷದ ವ್ಯಕ್ತಿಯೊಬ್ಬರಿಗೆ ಟಂಡಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ದಕ್ಷಿಣ ಭಾರತದಲ್ಲಿ ಕೊರೋನಾ ವೈರಸ್​ಗೆ ಮತ್ತೋರ್ವ ವ್ಯಕ್ತಿ ಸಾವನ್ನ್ಪಪ್ಪುವ ಮೂಲಕ ಮಾರಣಾಂತಿಕ ವೈರಸ್​ನ ಭೀತಿ ಮತ್ತಷ್ಟು ಹೆಚ್ಚಾಗಿದೆ. ದಿನದಿಂದ ದಿನಕ್ಕೆ ಕೊವಿಡ್ 19 ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+