ತಮಿಳುನಾಡಿನಲ್ಲಿ ಕೊರೊನಾ ವೈರಸ್ಗೆ ಮೊದಲ ಬಲಿ
ಚೆನ್ನೈ, ಮಾರ್ಚ್ 25: ತಮಿಳುನಾಡಿನಲ್ಲಿ ಕೊರೊನಾಗೆ ಓರ್ವ ವ್ಯಕ್ತಿ ಬಲಿಯಾಗಿದ್ದು, ದೇಶದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 11ಕ್ಕೇರಿದೆ.
ತಮಿಳುನಾಡಿನ 54 ವರ್ಷದ ವ್ಯಕ್ತಿಯೊಬ್ಬರು ಮಧುರೈನ ರಾಜಾಜಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಸೋಮವಾರ ಅವರಿಗೆ ಕೊರೋನಾ ಸೋಂಕು ತಗಲಿರುವುದು ಪತ್ತೆಯಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಅವರು ಮೃತಪಟ್ಟಿರುವುದಾಗಿ ತಮಿಳುನಾಡಿನ ಆರೋಗ್ಯ ಸಚಿವ ಡಾ. ಸಿ. ವಿಜಯಭಾಸ್ಕರ್ ಟ್ವೀಟ್ ಮಾಡಿದ್ದಾರೆ.
Live Updates: ಭಾರತದಲ್ಲಿ 562ಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆ
ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ಪಶ್ಚಿಮ ಬಂಗಾಳ ಮತ್ತು ಮಹಾರಾಷ್ಟ್ರದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದರು.
ಇದೀಗ ತಮಿಳುನಾಡಿನಲ್ಲಿ ಮತ್ತೋರ್ವ ವ್ಯಕ್ತಿ ಮೃತಪಡುವ ಮೂಲಕ ದೇಶದಲ್ಲಿ ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.
#update: Despite our best efforts, the #COVID19 +ve Pt at MDU, #RajajiHospital, passed away few minutes back.He had medical history of prolonged illness with steroid dependent COPD, uncontrolled Diabetes with Hypertension.@MoHFW_INDIA @CMOTamilNadu #Vijayabaskar
— Dr C Vijayabaskar (@Vijayabaskarofl) March 24, 2020
ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 500ರ ಗಡಿ ದಾಟಿದೆ. ಭಾರತದಲ್ಲಿ ಒಂದೇ ದಿನ 3 ಮಂದಿ ಬಲಿಯಾಗುವ ಮೂಲಕ ಸಾವಿನ ಸಂಖ್ಯೆ 10ಕ್ಕೇರಿತ್ತು. ಮಾರ್ಚ್ 15ರಂದು ಅಮೆರಿಕದಿಂದ ಹಿಮಾಚಲ ಪ್ರದೇಶಕ್ಕೆ ಆಗಮಿಸಿದ್ದ 69 ವರ್ಷದ ವ್ಯಕ್ತಿಯೊಬ್ಬರಿಗೆ ಟಂಡಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ದಕ್ಷಿಣ ಭಾರತದಲ್ಲಿ ಕೊರೋನಾ ವೈರಸ್ಗೆ ಮತ್ತೋರ್ವ ವ್ಯಕ್ತಿ ಸಾವನ್ನ್ಪಪ್ಪುವ ಮೂಲಕ ಮಾರಣಾಂತಿಕ ವೈರಸ್ನ ಭೀತಿ ಮತ್ತಷ್ಟು ಹೆಚ್ಚಾಗಿದೆ. ದಿನದಿಂದ ದಿನಕ್ಕೆ ಕೊವಿಡ್ 19 ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ.