Breaking; ಅಸನಿ, 10 ವಿಮಾನ ರದ್ದುಗೊಳಿಸಿದ ಚೆನ್ನೈ ವಿಮಾನ ನಿಲ್ದಾಣ
ಚೆನ್ನೈ, ಮೇ 10; ಅಸನಿ ಚಂಡಮಾರುತದ ಪರಿಣಾಮ ಆಂಧ್ರ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಎರಡು ದಿನಗಳ ಕಾಲ ಮಳೆಯಾಗಲಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಚೆನ್ನೈನಿಂದ ಸಂಚಾರ ನಡೆಸುವ 10 ವಿಮಾನ ರದ್ದುಗೊಳಿಸಲಾಗಿದೆ.
ಹೈದರಾಬಾದ್, ವಿಶಾಖಪಟ್ಟಣಂ, ಜೈಪುರ, ಮುಂಬೈಗೆ ಸಂಚಾರ ನಡೆಸುವ 10 ವಿಮಾನಗಳನ್ನು ಚೆನ್ನೈ ವಿಮಾನ ನಿಲ್ದಾಣ ರದ್ದುಗೊಳಿಸಿದೆ. ಈ ಕುರಿತು ಪ್ರಯಾಣಿಕರಿಗೆ ಸಹ ಮಾಹಿತಿ ನೀಡಲಾಗಿದೆ.
ಮಂಗಳವಾರ ಮತ್ತು ಬುಧವಾರ ಅಸನಿ ಚಂಡಮಾರುತದ ಪ್ರಭಾವದಿಂದ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆಯಾಗಲಿದೆ. ಬುಧವಾರದ ನಂತರ ಚಂಡಮಾರುತದ ಅಬ್ಬರ ಕಡಿಮೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಸನಿ ಚಂಡಮಾರುತದ ಪರಿಣಾಮ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಮಂಗಳವಾರ ಮತ್ತು ಬುಧವಾರ ರಾಜ್ಯದ ಕೆಲವು ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.












Click it and Unblock the Notifications