ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಾಂಡೌಸ್ ಚಂಡಮಾರುತ: ಚೈನ್ನೈನಲ್ಲಿ ಕನಿಷ್ಠ 10 ವಿಮಾನಗಳು ರದ್ದು

|
Google Oneindia Kannada News

ಚೆನ್ನೈ, ಡಿ. 09: ಮಾಂಡೂಸ್ ಚಂಡಮಾರುತದಿಂದ ಉಂಟಾಗಿರುವ ಪ್ರತಿಕೂಲ ಹವಾಮಾನದಿಂದಾಗಿ ಚೆನ್ನೈ ವಿಮಾನ ನಿಲ್ದಾಣದಲ್ಲಿ 10 ಕ್ಕೂ ಹೆಚ್ಚು ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ಇಂದು (ಡಿಸೆಂಬರ್ 9) ಮಾಹಿತಿ ನೀಡಿದ್ದಾರೆ.

ಪ್ರತಿಕೂಲ ಹವಾಮಾನದಿಂದಾಗಿ 10 ಕ್ಕೂ ಹೆಚ್ಚು ವಿಮಾನಗಳು ರದ್ದಾಗಿದ್ದು, ಶುಕ್ರವಾರ ರಾತ್ರಿ ಮಾಂಡೌಸ್ ಚಂಡಮಾರುತ ತಮಿಳುನಾಡಿಗೆ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ವಿವಿಧ ಸ್ಥಳಗಳಿಗೆ ಆಗಮಿಸುವ ಮತ್ತು ಹೊರಡುವ ಒಟ್ಟು 13 ವಿಮಾನಗಳನ್ನು ರದ್ದುಗೊಳಿಸಲಾಗಿದೆ.

ಹವಾಮಾನ ವೈಪರೀತ್ಯದಿಂದಾಗಿ ವಿಮಾನಗಳ ಮೇಲೆ ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ವಿಮಾನಯಾನ ಸಂಸ್ಥೆಗಳೊಂದಿಗೆ ಪರಿಶೀಲಿಸುವಂತೆ ಅಧಿಕಾರಿಗಳು ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ.

Cyclone Mandous: 10 Flights Cancelled In Chennai

"ಪ್ರತಿಕೂಲ ಹವಾಮಾನದ ಕಾರಣದಿಂದ 09.12.2022 ರಂದು ಚೆನ್ನೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ರದ್ದತಿಯನ್ನು ದಯವಿಟ್ಟು ಗಮನಿಸಿ. ಹೆಚ್ಚಿನ ವಿವರಣೆಗಾಗಿ ಪ್ರಯಾಣಿಕರು ಸಂಬಂಧಪಟ್ಟ ವಿಮಾನಯಾನ ಸಂಸ್ಥೆಗಳ ಜೊತೆ ಪರಿಶೀಲಿಸಲು ವಿನಂತಿಸಲಾಗಿದೆ" ಎಂದು ಚೆನ್ನೈ (MAA) ವಿಮಾನ ನಿಲ್ದಾಣದ ಅಧೀಕೃತ ಟ್ವಿಟ್ಟರ್‌ ಖಾತೆಯಿಂದ ವಿಷಯವನ್ನು ಹಂಚಿಕೊಳ್ಳಲಾಗಿದೆ.

ಪ್ರಾದೇಶಿಕ ಹವಾಮಾನ ಕೇಂದ್ರದ ಹವಾಮಾನ ಇಲಾಖೆಯ ಉಪ ಮಹಾನಿರ್ದೇಶಕ ಎಸ್ ಬಾಲಚಂದ್ರನ್ ಅವರು, "ಮಾಂಡೌಸ್ ಚಂಡಮಾರುತವು ವಾಯುವ್ಯ ದಿಕ್ಕಿನಲ್ಲಿ ಚಲಿಸುವ ನಿರೀಕ್ಷೆಯಿರುವುದರಿಂದ ಇಂದು ಮತ್ತು ನಾಳೆ ಚೆನ್ನೈನಲ್ಲಿ ಭಾರೀ ಮಳೆಯಾಗಲಿದೆ. ಇಂದು ರಾತ್ರಿ ಅಥವಾ ಮುಂಜಾನೆ ಪುದುಚೇರಿ ಮತ್ತು ಶ್ರೀಹರಿಕೋಟಾವನ್ನು ದಾಟುವ ನಿರೀಕ್ಷೆಯಿದೆ" ಎಂದಿದ್ದಾರೆ.

Cyclone Mandous: 10 Flights Cancelled In Chennai

ಇನ್ನು, ಚಂಡಮಾರುತದಿಂದ ಚೆನ್ನೈನಲ್ಲಿ ಭಾರೀ ಮಳೆಯಾಗಲಿದ್ದು, ಗ್ರೇಟರ್ ಚೆನ್ನೈ ಕಾರ್ಪೊರೇಷನ್ (ಜಿಸಿಸಿ) ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ಈಗಾಗಲೇ ಜನರಿಗೆ ಸಹಾಯ ಮಾಡಲು ಸಹಾಯವಾಣಿಗಳನ್ನು ತೆರೆಯಲಾಗಿದ್ದು, ಪುನರ್ವಸತಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಜನರು ಬೀಚ್‌ಗಳ ಬಳಿ ಹೋಗದಂತೆ ಚೆನ್ನೈ ಕಾರ್ಪೊರೇಷನ್ ಮನವಿ ಮಾಡಿದೆ.

English summary
Cyclone Mandous: More than 10 flights cancelled at Chennai airport due to bad weather. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X