ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಿವಾರ್ ಚಂಡಮಾರುತ: ಚೆನ್ನೈನ ಮೂರು ಬಂದರುಗಳು ಬಂದ್, ಹೈ ಅಲರ್ಟ್

|
Google Oneindia Kannada News

ಚೆನ್ನೈ, ನವೆಂಬರ್ 24:ಭೀಕರ ನಿವಾರ್ ಚಂಡ ಮಾರುತ ಬುಧವಾರ ಸಂಜೆ ವೇಳೆಗೆ ಚೆನ್ನೈ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇರುವ ಕಾರಣ ಮೂರು ಬಂದರುಗಳನ್ನು ಬಂದ್ ಮಾಡಲಾಗಿದೆ.

ನಿವಾರ್ ಚಂಡಮಾರುತವು ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗುತ್ತಿದ್ದು, ಪರಿಣಾಮ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶದ ಅನೇಕ ಕಡೆ ಭಾರಿ ಮಳೆ ಯಾಗಲಿದೆ.

'ನಿವಾರ್' ಚಂಡಮಾರುತ: ಬೆಂಗಳೂರಲ್ಲಿ 'ಯೆಲ್ಲೋ ಅಲರ್ಟ್' ಘೋಷಣೆ'ನಿವಾರ್' ಚಂಡಮಾರುತ: ಬೆಂಗಳೂರಲ್ಲಿ 'ಯೆಲ್ಲೋ ಅಲರ್ಟ್' ಘೋಷಣೆ

ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರದಲ್ಲಿ ಚಂಡಮಾರುತ ಸನ್ನದ್ಧತೆಯನ್ನು ಪರಿಶೀಲಿಸಿದ ನಂತರ ಮುಖ್ಯಮಂತ್ರಿ ಕೆ ಪಳನಿಸ್ವಾಮಿ, ನಾಳೆ ರಾಜ್ಯದಲ್ಲಿ ಎಲ್ಲ ಸರ್ಕಾರಿ ಕಚೇರಿಗಳಿಗೆ ರಜೆ ರಜೆ ನೀಡಲಾಗಿದೆ. ಪರಿಸ್ಥಿತಿಯನ್ನು ಅವಲೋಕಿಸಿ ರಜೆಯನ್ನು ಮುಂದುವರೆಸುವ ಕುರಿತು ನಾಳೆ ನಿರ್ಧರಿಸಲಾಗುವುದು ಎಂದರು.

Cyclone Nivar: All Three Ports In Chennai Shut Down

ಅಗತ್ಯ ಸೇವೆಗಳನ್ನು ಒದಗಿಸುವ ಪೊಲೀಸ್, ಅಗ್ನಿಶಾಮಕ ಸೇವೆ ಮತ್ತು ವಿದ್ಯುತ್ ಇಲಾಖೆಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ಸಿಎಂ ತಿಳಿಸಿದ್ದಾರೆ.

ನಿವಾರ್ ಸಂಕಷ್ಟ ನಿವಾರಣೆಗಾಗಿ ಪ್ರಧಾನಿ ನರೇಂದ್ರ ಮೋದಿಯವರು ತಮಿಳುನಾಡು ಮತ್ತು ಪುದುಚೇರಿ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಿದ್ದು, ಸಂಪೂರ್ಣ ಸಹಾಯ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

ಮುನ್ನೆಚ್ಚರಿಕೆ ಕ್ರಮವಾಗಿ ಚೆನ್ನೈ ಮತ್ತು ಸುತ್ತಮುತ್ತಲಿನ ಎಲ್ಲಾ ಮೂರು ಪ್ರಮುಖ ಬಂದರುಗಳನ್ನು ಬಂದ್ ಮಾಡಲಾಗಿದ್ದು, ವಿಮಾನ ನಿಲ್ದಾಣದಲ್ಲೂ ಹೈಅಲರ್ಟ್ ಘೋಷಿಸಲಾಗಿದೆ.

English summary
All three major ports in and around Chennai hoisted level 6 warning signals and shut their gates for operations as Chennai braces for Cyclone Nivar which is expected to make landfall on Wednesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X