ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಂಡಮಾರುತ ಪ್ರಭಾವ: ತಮಿಳುನಾಡಿನಲ್ಲಿ ನ.30ರವರೆಗೆ ಭಾರಿ ಮಳೆ

|
Google Oneindia Kannada News

ಚೆನ್ನೈ, ನವೆಂಬರ್ 26: ಚಂಡಮಾರುತ ಅಪ್ಪಳಿಸಲಿರುವ ಹಿನ್ನೆಲೆಯಲ್ಲಿ ನವೆಂಬರ್ 30ರವರೆಗೆ ತಮಿಳುನಾಡು, ಕರ್ನಾಟಕ ಹಾಗೂ ಆಂಧ್ರಪ್ರದೇಶದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ತಮಿಳುನಾಡು ಮತ್ತು ಕೇರಳದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಆಂಧ್ರಪ್ರದೇಶದಲ್ಲಿ ಶನಿವಾರ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಈ ಶನಿವಾರ ತಮಿಳುನಾಡಿನಲ್ಲಿ ಮತ್ತು ಆಂಧ್ರಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದು ತಮಿಳುನಾಡಿನಲ್ಲಿ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ರಾಜ್ಯಾದ್ಯಂತ ಮುಂದಿನ 4 ದಿನಗಳ ಕಾಲ ಮಳೆಯ ಮುನ್ಸೂಚನೆರಾಜ್ಯಾದ್ಯಂತ ಮುಂದಿನ 4 ದಿನಗಳ ಕಾಲ ಮಳೆಯ ಮುನ್ಸೂಚನೆ

ಇಂದು ತಮಿಳುನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಆಂಧ್ರಪ್ರದೇಶ ಮತ್ತು ಕೇರಳದ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ತಮಿಳುನಾಡಿನಲ್ಲಿ ವ್ಯಾಪಕ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

Cyclonic Circulation To Bring Heavy Rain In Tamil Nadu Till Month-End

ಕೇರಳ, ಲಕ್ಷದ್ವೀಪ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ವ್ಯಾಪಕವಾದ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಆಂಧ್ರಪ್ರದೇಶದಲ್ಲಿ ಅಲ್ಲಲ್ಲಿ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಸಿಕ್ಕಿಂನಲ್ಲಿ ಹಿಮ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದಾದ್ಯಂತ ಇಂದು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಇಂದಿನಿಂದ ಡಿಸೆಂಬರ್ 15ರವರೆಗೆ ರಾಜ್ಯಾದ್ಯಂತ ಭಾರೀ ಮಳೆಯಾಗುವ ಮುನ್ಸೂಚನೆಯಿದೆ. ತಮಿಳು‌ನಾಡು, ಆಂಧ್ರಪ್ರದೇಶದಲ್ಲಿ‌ ಭಾರೀ ಮಳೆಯಾಗಲಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತವಾಗಿ ಬದಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತಮಿಳುನಾಡು, ಕೇರಳ, ಆಂಧ್ರ ಕರಾವಳಿಯಲ್ಲಿ ಹೆಚ್ಚು ಮಳೆಯಾಗಲಿದ್ದು ಪುದುಚೆರಿ, ಚೆನ್ನೈ, ನೆಲ್ಲೂರಿನಲ್ಲಿ‌ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ನೆರೆ ರಾಜ್ಯಗಳಲ್ಲಿ ಮಳೆ ಹಿನ್ನೆಲೆ ಇಂದಿನಿಂದ ಕರ್ನಾಟಕದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ.

ಇಂದಿನಿಂದ ಮೂರು ದಿನ ಆಂಧ್ರಪ್ರದೇಶದ ಕರಾವಳಿ, ಯಾನಂ, ರಾಯಲಸೀಮಾ, ಕರ್ನಾಟಕದ ದಕ್ಷಿಣ ಒಳನಾಡು, ಕೇರಳ, ಮಾಹೆ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆಯಲಿದ್ದು, ಇನ್ನೂ 3 ದಿನ ಕೆಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯಾದ್ಯಂತ ನವೆಂಬರ್ 30ರವರೆಗೂ ಭಾರೀ ಮಳೆ ಸುರಿಯುವ ನಿರೀಕ್ಷೆಯಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರ್ಗಿ, ಹಾವೇರಿಯಲ್ಲಿ ಮಳೆ ಹೆಚ್ಚಾಗಲಿದೆ.

ಇಂದಿನಿಂದ 3 ದಿನಗಳ ಕಾಲ ಕರ್ನಾಟಕ, ಕೇರಳ, ಮಾಹೆ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಾಲ್‌ನಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ. ಈ ಅವಧಿಯಲ್ಲಿ ಕರಾವಳಿ ಕರ್ನಾಟಕದಲ್ಲಿಯೂ ಭಾರೀ ಮಳೆಯಾಗಲಿದೆ. ಇಂದು ಬೆಂಗಳೂರಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ 3 ದಿನ ತಮಿಳುನಾಡು, ಪುದುಚೇರಿ ಮತ್ತು ಕಾರೈಕಾಲ್​ನಲ್ಲಿ ಮಳೆಯಾಗಲಿದೆ. ಇಂದು ಕೇರಳ ಮತ್ತು ಮಾಹೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕ, ಕೇರಳ ಮತ್ತು ಅಕ್ಕಪಕ್ಕದ ಪ್ರದೇಶಗಳು ಸಾಕ್ಷಿಯಾಗಿವೆ. ಮಳೆ-ಸಂಬಂಧಿತ ಘಟನೆಗಳಿಂದಾಗಿ ಪ್ರವಾಹದಂತಹ ಪರಿಸ್ಥಿತಿಗಳು ಮತ್ತು ಸಾವು-ನೋವುಗಳು ಉಂಟಾಗಲಿವೆ.

ಇನ್ನು ಶುಕ್ರವಾರ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್​ನ ಕರಾವಳಿ ತೀರಗಳಲ್ಲಿ ಗುಡುಗಿನೊಂದಿಗೆ ಭಾರಿ ಮಳೆಯಾಗಲಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ತಮಿಳುನಾಡಿನಲ್ಲಿ ವಿಪರೀತ ಮಳೆ ಸುರಿಯಲು ಪ್ರಾರಂಭಿಸಿ ಅದಾಗಲೇ ವಾರದ ಮೇಲಾಯಿತು. ಅದರೊಂದಿಗೆ ಆಂಧ್ರಪ್ರದೇಶ, ಕೇರಳ, ಪುದುಚೇರಿಯಲ್ಲೂ ಒಂದೇಸಮ ಮಳೆಯಾಗುತ್ತಿದೆ. ಐಎಂಡಿ ದಕ್ಷಿಣ ತಮಿಳುನಾಡು, ಪುದುಕೊಟ್ಟೈ ಮತ್ತು ಡೆಲ್ಟಾ ಜಿಲ್ಲೆಗಳಲ್ಲಿ ಅಲ್ಲಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹಳದಿ ಅಲರ್ಟ್​ ಘೋಷಿಸಲಾಗಿದೆ.

ಇನ್ನು ಮುಂದಿನ ಐದು ದಿನಗಳ ಕಾಲ ತಮಿಳುನಾಡಿನ ಎರೋಡ್​, ನಮಕ್ಕಲ್​, ಕಲ್ಲಕುರಿಚಿ ಮತ್ತು ಪೆರಂಬಲೂರ್​​ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ. ಅದರಲ್ಲೂ ಇಂದು ತಿರುನೇಲ್ವೇಲಿ, ತೂತುಕುಡಿ, ಮಧುರೈ ಮತ್ತು ರಾಮನಾಥಪುರಂ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆ ಬೀಳಲಿದೆ ಎಂದು ಐಎಂಡಿ ಊಹಿಸಿದೆ.

English summary
The India Meteorological Department announced on Thursday that the cyclonic circulation over the south-west Bay of Bengal off the south Sri Lanka coast may not intensify into a low-pressure area.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X