ತಮಿಳುನಾಡಿನ ಐದು ಮಹಾನಗರಗಳು ಸಂಪೂರ್ಣ ಲಾಕ್‌ಡೌನ್
ಚೆನ್ನೈ, ಏಪ್ರಿಲ್ 24: ತಮಿಳುನಾಡಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಚೆನ್ನೈ ಸೇರಿ ಐದು ಮಹಾನಗರಗಳನ್ನು ಸಂಪೂರ್ಣ ಲಾಕ್‌ಡೌನ್ ಮಾಡಲಾಗಿದೆ.
ಚೆನ್ನೈ, ಕೊಯಮತ್ತೂರು, ಮದುರೈ, ಸೇಲಂ ಮತ್ತು ತಿರುಪುರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಿಸಿ ಮುಖ್ಯಮಂತ್ರಿ ಇಕೆ ಪಳನಿಸ್ವಾಮಿ ತಿಳಿಸಿದ್ದಾರೆ.
ಕೊಯಂಬಿಡು ತರಕಾರಿ ಮಾರುಕಟ್ಟೆ, ತರಕಾರಿ ಗಾಡಿಗಳಿಗೆ ಮತ್ತು ಅಣ್ಣಿನ ಅಂಗಡಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಈ ಐದು ನಗರದಲ್ಲಿ ಯಾವುದೇ ಅಂಗಡಿ ತೆರೆಯಲು ಅವಕಾಶ ಇಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

ಎಂದಿನಂತೆ ಆಸ್ಪತ್ರೆ, ಮೆಡಿಕಲ್ ಶಾಪ್, ಪ್ರಯೋಗಾಲಗಳು ಮತ್ತು ಆಂಬ್ಯುಲೆನ್ಸ್ ಸೇವೆ ಲಭ್ಯವಿರಲಿದೆ. ಅಮ್ಮಾ ಕ್ಯಾಂಟೀನ್ ಮತ್ತು ಎಟಿಎಂಗಳು ಕಾರ್ಯನಿರ್ವಹಿಸಲಿವೆ ಎಂದು ಹೇಳಿದ್ದಾರೆ.
ಏಪ್ರಿಲ್ 26ರ ಬೆಳಗ್ಗೆ 6 ಗಂಟೆಯಿಂದ ಏಪ್ರಿಲ್ 29 ರ ರಾತ್ರಿ 9 ಗಂಟೆಯವರೆಗೆ ಈ ಐದು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿಗೆ ಬರಲಿದ್ದು, ಈ ಪ್ರದೇಶದಲ್ಲಿ ಕೆಲವು ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ಪಳನಿಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ನೌಕರರು ಮತ್ತು ಬ್ಯಾಂಕ್ ನೌಕರರು ಶೇ. 33ರಷ್ಟು ಸಿಬ್ಬಂದಿ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ತಮಿಳುನಾಡಿನಲ್ಲಿ 1629 ಕೊರೊನಾ ಸೋಂಕಿತರಿದ್ದಾರೆ, 18 ಮಂದಿ ಮೃತಪಟ್ಟಿದ್ದಾರೆ.












Click it and Unblock the Notifications