ಡಿಎಂಕೆ ಅಧ್ಯಕ್ಷ ಕರುಣಾನಿಧಿ ಆಸ್ಪತ್ರೆಗೆ ದಾಖಲು

By: ವಿಕಾಸ್ ನಂಜಪ್ಪ
Subscribe to Oneindia Kannada

ಚೆನ್ನೈ, ಡಿಸೆಂಬರ್ 1: ಡಿಎಂಕೆ ಅಧ್ಯಕ್ಷ ಎಂ.ಕರುಣಾನಿಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಲರ್ಜಿ ಇತರ ವಯೋಸಹಜ ಅನಾರೋಗ್ಯ ಸಮಸ್ಯೆಯಿಂದ ಚೆನ್ನೈನ ಖಾಸಗಿ ಆಸ್ಪತ್ರೆಗೆ ಗುರುವಾರ ಅವರು ದಾಖಲಾಗಿದ್ದಾರೆ. ಕಳೆದ ಒಂದು ತಿಂಗಳಿಂದ ಅನಾರೋಗ್ಯ ಕಾರಣಗಳಿಗಾಗಿ ಕರುಣಾನಿಧಿ ಅವರಿಗೆ ಮನೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿತ್ತು.

ಆದರೆ, ಅಲರ್ಜಿ ಕಾಣಿಸಿಕೊಂಡಿದ್ದರಿಂದ ಚೆನ್ನೈನ ಕಾವೇರಿ ಆಸ್ಪತ್ರೆಗೆ ಗುರುವಾರ ಅವರನ್ನು ದಾಖಲಿಸಲಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಕಾವೇರಿ ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಅರವಿಂದನ್ ಸೆಲ್ವರಾಜ್, ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.[ಜಯಲಲಿತಾ ಆರೋಗ್ಯ ಪರಿಸ್ಥಿತಿ ಮುಚ್ಚಿಡುವ ಅಗತ್ಯವೇನು: ಡಿಎಂಕೆ ಪ್ರಶ್ನೆ]

Karunanidhi

ನಮ್ಮ ಆಸ್ಪತ್ರೆಯ ವೈದ್ಯರ ತಂಡವು ಅವರ ಆರೋಗ್ಯದ ನಿಗಾ ವಹಿಸುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ ಇನ್ನೂ ಕೆಲವು ದಿನಗಳ ಕಾಲ ಕರುಣಾನಿಧಿ ಅವರು ಆಸ್ಪತ್ರೆಯಲ್ಲಿ ಇರಬೇಕಾಗುತ್ತದೆ ಎಂದು ಅರವಿಂದನ್ ಸೆಲ್ವರಾಜ್ ಅವರು ತಿಳಿಸಿದ್ದಾರೆ. ಸೆಪ್ಟೆಂಬರ್ ನಿಂದ ಅನಾರೋಗ್ಯ ಕಾರಣಕ್ಕೇ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಚಿಕಿತ್ಸೆ ಪಡೆಯುತ್ತಿರುವುದನ್ನು ಸ್ಮರಿಸಬಹುದು.

ಕರುಣಾನಿಧಿ ಅವರ ಮಗ ಎಂ.ಕೆ.ಸ್ಟಾಲಿನ್ ಮತ್ತಿತರರು ಆಸ್ಪತ್ರೆಯಲ್ಲಿ ಇದ್ದಾರೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
DMK president Karunanidhi is admitted in hospital on Thursday, after illness. He wasaffected with allergy few weeks ago, treated at home and then recovered.
Please Wait while comments are loading...