ಕರುಣಾನಿಧಿ ನಿಧನ: ಮುಗಿಲುಮುಟ್ಟಿದ ಜನತೆಯ ಆಕ್ರಂದನ (In Pics)
ಬೆಂಗಳೂರು, ಆಗಸ್ಟ್ 8: ಡಿಎಂಕೆ ವರಿಷ್ಠರಾಗಿದ್ದ ಬಹುಮುಖ ವ್ಯಕ್ತಿತ್ವದ ಎಂ.ಕರುಣಾನಿಧಿ ಮಂಗಳವಾರ ಸಂಜೆ ನಿಧನರಾಗಿದ್ದಾರೆ. ರಾಜಕೀಯ, ಸಿನಿಮಾ ಮತ್ತು ದ್ರಾವಿಡ ಹೋರಾಟಗಳಲ್ಲಿ ವಿಶಿಷ್ಟ ಛಾಪು ಮೂಡಿಸಿದವರು. ಐದು ಬಾರಿ ತಮಿಳುನಾಡಿನ ಮುಖ್ಯಮಂತ್ರಿಯಾಗಿ ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಹೊಸ ಇತಿಹಾಸವನ್ನು ಬರೆದಿದ್ದಾರೆ.
ರಾಷ್ಟ್ರ ರಾಜಕಾರಣದಲ್ಲಿ ಹಲವಾರು ವರ್ಷಗಳ ಕಾಲ ಕಿಂಗ್ ಮೇಕರ್ ಆಗಿ ಪಾತ್ರ ನಿರ್ವಹಿಸಿದ್ದ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆಯ ಪರಮೋಚ್ಚ ನಾಯಕ ಮತ್ತುವೇಲು ಕರುಣಾನಿಧಿ ವಿಧಿವಶರಾಗಿದ್ದು, ರಾಜಾಜಿ ಹಾಲ್ ನಲ್ಲಿ ಪಾರ್ಥೀವ ಶರೀರವನ್ನು ಇರಿಸಲಾಗಿದೆ.
ಜನತೆಯ ಆಕ್ರಂದನ ಮುಗಿಲುಮುಟ್ಟಿದೆ. 11 ದಿನಗಳಿಂದ ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕರುಣಾನಿಧಿಯವರು ನಿನ್ನೆ ಸಂಜೆ 6.10ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಕರುಣಾನಿಧಿಯವರ ಅಗಲಿಕೆ ಅಸಂಖ್ಯಾತ ಡಿಎಂಕೆ ಕಾರ್ಯಕರ್ತರನ್ನು ಶೋಕಸಾಗರದಲ್ಲಿ ದೂಡಿದೆ.
ಕಲೈನಾರ್ ಎಂದೇ ಖ್ಯಾತರಾದ ಎಂ. ಕರುಣಾನಿಧಿ ಅವರು 1924ರ ಜೂನ್ 3ರಲ್ಲಿ ಜನಿಸಿದರು. ಹೋರಾಟ ಮತ್ತು ರಾಜಕೀಯದಲ್ಲಿ ಚಿಕ್ಕಂದಿನಿಂದಲೇ ಆಸಕ್ತಿ ಹೊಂದಿದ್ದ ಕರುಣಾನಿಧಿ, 14ನೇ ವಯಸ್ಸಿನಲ್ಲೇ ರಾಜಕೀಯ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿದ್ದರು. ಆ ಹೊತ್ತಿನ ತಮಿಳುನಾಡಿನ ಪ್ರಭಾವಿ ನಾಯಕ, ಜಸ್ಟಿಸ್ ಪಾರ್ಟಿಯ ನಾಯಕ ಅಳಗಿರಿ ಸ್ವಾಮಿ ಅವರ ವಿಚಾರಧಾರೆಗಳಿಂದ ಪ್ರೇರಿತರಾಗಿದ್ದರು.

ಕರಿಣಾನಿಧಿ ನಿಧನಕ್ಕೆ ಜನರ ಆಕ್ರಂದನ
ಡಿಎಂಕೆ ನಾಯಕ ಎಂ ಕರುಣಾನಿಧಿ ನಿಧನದಿಂದ ಡಿಎಂಕೆ ನಾಯಕರೂ ಸೇರಿದಂತೆ ತಮಿಳುನಾಡು ಜನತೆ ಶೋಕ ಸಾಗರದಲ್ಲಿ ಮುಳುಗಿದೆ. ತಮ್ಮ ನೆಚ್ಚಿನ ನಾಯಕನನ್ನು ಕಳೆದುಕೊಂಡ ಹಿನ್ನಲೆಯಲ್ಲಿ ಡಿಎಂಕೆ ಕಾರ್ಯಕರ್ತರು ಹಿಂಸಾಚಾರಕ್ಕೆ ಇಳಿಯಬಹುದು ಎಂಬ ಕಾರಣಕ್ಕೆ ತಮಿಳುನಾಡಿನಾದ್ಯಂತ 2 ಲಕ್ಷಕ್ಕೂ ಅಧಿಕ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ಕರುಣಾನಿಧಿ ಹೋರಾಟದಲ್ಲೂ ಭಾಗಿ
ಸಿನಿಮಾ ಮತ್ತು ರಾಜಕೀಯ ರಂಗಕ್ಕೆ ಬರುವುದಕ್ಕೂ ಮೊದಲು ಹೋರಾಟಗಳಲ್ಲೇ ಹೆಚ್ಚು ಗುರುತಿಸಿಕೊಂಡಿದ್ದ ಕರುಣಾನಿಧಿ, ಯುವಕರ ಸಂಘ ಕಟ್ಟಿದ್ದರು. ಸಂಘದ ಸದಸ್ಯರಿಗಾಗಿ 'ಮನಾವರ್ ನೇಸನ್' ಎಂಬ ಪ್ರಕಟಣೆಯನ್ನು ಹೊರತರುತ್ತಿದ್ದರು. ಅಲ್ಲದೆ, ತಮಿಳ್ ಮನಾವರ್ ಮಂದರಮ್ ಎಂಬ ಸಂಘಟನೆಯನ್ನು ಸ್ಥಾಪಿಸುವ ಮೂಲಕ ದ್ರಾವಿಡ ಚಳವಳಿಗಳಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದರು.

ಪಾರ್ಥಿವ ಶರೀರ ರಾಜಾಜಿ ಹಾಲ್‌ನಲ್ಲಿ ಇರಿಸಲಾಗಿದೆ
ಕಾವೇರಿ ಆಸ್ಪತ್ರೆಯಲ್ಲಿ ನಿಧನರಾದ ಕರುಣಾನಿಧಿಯವರ ಪಾರ್ಥಿವ ಶರೀರವನ್ನು ರಾತ್ರಿ ಅವರ ಮನೆಗೆ ಕೊಂಡೊಯ್ಯಲಾಯಿತು. ಬಳಿಕ ಬುಧವಾರ ಬೆಳಗ್ಗೆ 4 ಗಂಟೆ ವೇಳೆಗೆ ದೇಹವನ್ನು ಸಾರ್ವಜನಿಕರ ದರ್ಶನಕ್ಕಾಗಿ ರಾಜಾಜಿ ಹಾಲ್ ಗೆ ತರಲಾಗಿದೆ.

ತಮಿಳರ ಕಣ್ಮಣಿಯ ನೆನಪು ಮಾತ್ರ
ಕರುಣಾನಿಧಿ ಬಾರದ ಲೋಕಕ್ಕೆ ಪ್ರಯಾಣ ಬೆಳೆಸಿದ್ದಾರೆ. 12 ಬಾರಿ ಶಾಸಕರಾಗಿ ತಮಿಳುನಾಡು ವಿಧಾನಸಭೆ ಪ್ರವೇಶಿಸಿದ್ದ ಕರುಣಾನಿಧಿ ಅತಿ ಹಿರಿಯ ಮುಖ್ಯಮಂತ್ರಿ ಎಂಬ ಶ್ರೇಯಸ್ಸನ್ನು ಪಡೆದುಕೊಂಡಿದ್ದರು.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications