ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿದ ಎಐಎಡಿಎಂಕೆ

|
Google Oneindia Kannada News

ಚೆನ್ನೈ, ಅ.7: ತಮಿಳುನಾಡು ವಿಧಾನಸಭೆ ಚುನಾವಣೆ 2021ಕ್ಕೆ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಡಳಿತಾರೂಢ ಎಐಎಡಿಎಂಕೆ ಘೋಷಿಸಿದೆ. ಭಾರಿ ಕುತೂಹಲ ಕೆರಳಿಸಿದ್ದ ಸಿಎಂ ಅಭ್ಯರ್ಥಿ ಹೆಸರು ಪ್ರಕಟವಾಗಿದ್ದು, ಹಾಲಿ ಸಿಎಂ ಎಡಪ್ಪಾಡಿ ಪಳನಿಸ್ವಾಮಿ ಅವರೇ ಮುಂದಿನ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಸಿಎಂ ಅಭ್ಯರ್ಥಿಯಾಗಲಿದ್ದಾರೆ ಎಂದು ಘೋಷಿಸಲಾಗಿದೆ.

ಕಳೆದ ಒಂದು ವಾರದಿಂದ ಇ ಪಳನಿಸ್ವಾಮಿ(ಇಪಿಎಸ್) ಹಾಗೂ ಓ ಪನ್ನೀರ್ ಸೆಲ್ವಂ(ಒಪಿಎಸ್) ನಡುವೆ ಸಿಎಂ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬುದರ ಬಗ್ಗೆ ಭಾರಿ ಚರ್ಚೆ ನಡೆದಿತ್ತು.

ಜಯಲಲಿತಾ ಪರಮಾಪ್ತೆ ಶಶಿಕಲಾ ನಟರಾಜನ್ ಬಿಡುಗಡೆ ದಿನಾಂಕ ಬಹಿರಂಗಜಯಲಲಿತಾ ಪರಮಾಪ್ತೆ ಶಶಿಕಲಾ ನಟರಾಜನ್ ಬಿಡುಗಡೆ ದಿನಾಂಕ ಬಹಿರಂಗ

2016ರಲ್ಲಿ ಪಕ್ಷದ ಅಧಿನಾಯಕಿ ಜೆ ಜಯಲಲಿತಾ ಮೃತರಾದ ಬಳಿಕ ಅಧಿಕಾರ ವಹಿಸಿಕೊಂಡಿದ್ದ ಪನ್ನೀರ್ ಸೆಲ್ವಂ ಅವರು ಸಮೂಹ ನಾಯಕತ್ವಕ್ಕೆ 11 ಸದಸ್ಯರ ಸಮಿತಿ ಬೆಲೆ ನೀಡುವುದು ಎಂಬ ಭರವಸೆ ಹೊಂದಿದ್ದರು. ಆದರೆ, ಇಪಿಎಸ್ ಅವರಿಗೆ ಸಿಎಂ ಅಭ್ಯರ್ಥಿ ಪಟ್ಟ ಹಾಗೂ ಒಪಿಎಸ್ ಅವರಿಗೆ ಪಕ್ಷ ಸಂಘಟನೆಯ ಜವಾಬ್ದಾರಿಯನ್ನು ನೀಡಲು ನಿರ್ಧರಿಸಲಾಗಿದೆ.

E Palaniswami Is Chief Minister Candidate of ruling AIADMK

AIADMK ವಿಲೀನ: ಪಳನಿಸ್ವಾಮಿ ಸಿಎಂ, ಪನ್ನೀರ್ ಸೆಲ್ವಂಗೆ ಪಕ್ಷದ ಹೊಣೆAIADMK ವಿಲೀನ: ಪಳನಿಸ್ವಾಮಿ ಸಿಎಂ, ಪನ್ನೀರ್ ಸೆಲ್ವಂಗೆ ಪಕ್ಷದ ಹೊಣೆ

ಭ್ರಷ್ಟಾಚಾರ ಪ್ರಕರಣದಲ್ಲಿ ಸಿಲುಕಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ವಿಕೆ ಶಶಿಕಲಾ ಅವರು ಮುಂದಿನ ವರ್ಷ ಜೈಲಿನಿಂದ ಬಿಡುಗಡೆ ಹೊಂದಲಿದ್ದಾರೆ. ಎಐಎಡಿಎಂಕೆಯಿಂದ ಶಶಿಕಲಾರನ್ನು ಹೊರಹಾಕಲಾಗಿದೆ. ಶಶಿಕಲಾ ಅವರು ಹೊರ ಬಂದ ಬಳಿಕ ಇನ್ನೇನು ಬದಲಾವಣೆಗಳಾಗಲಿವೆಯೋ ಕಾದು ನೋಡಬೇಕಿದೆ.

English summary
E Palaniswami will be the ruling AIADMK's Chief ministerial candidate for the Tamil Nadu election 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X