ತಮಿಳುನಾಡಿಗೆ ಭೇಟಿ ನೀಡಲು ಇ-ಪಾಸು ಕಡ್ಡಾಯ
ಚೆನ್ನೈ, ಅಕ್ಟೋಬರ್ 14 : ಕೋವಿಡ್ ಭೀತಿ ಹಿನ್ನಲೆಯಲ್ಲಿ ಬೇರೆ ರಾಜ್ಯಗಳಿಂದ ತಮಿಳುನಾಡಿಗೆ ಆಗಮಿಸುವ ಜನರಿಗೆ ಇ-ಪಾಸ್ ಕಡ್ಡಾಯಗೊಳಿಸಲಾಗುತ್ತದೆ ಎಂದು ತಮಿಳುನಾಡು ಸರ್ಕಾರ ಹೇಳಿದೆ. ರಾಜ್ಯದಲ್ಲಿನ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 6,65,930.
ಮದ್ರಾಸ್ ಹೈಕೋರ್ಟ್‌ಗೆ ತಮಿಳುನಾಡು ಸರ್ಕಾರ ಈ ಕುರಿತು ಮಾಹಿತಿ ನೀಡಿದೆ. ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ವಿಭಾಗೀಯ ಪೀಠಕ್ಕೆ ಅಡ್ವೋಕೇಟ್ ಜನರಲ್ ವಿಜಯ್ ನಾರಾಯಣ್ ಈ ಕುರಿತು ಮಾಹಿತಿಯನ್ನು ನೀಡಿದ್ದಾರೆ.
ಹೊಸ ನಿಯಮಗಳ ಪ್ರಕಾರ ರಾಜ್ಯಕ್ಕೆ ಆಗಮಿಸುವ ಜನರು ಇ-ಪಾಸ್ ಪಡೆಯಲು ಮೂಲ ಮಾಹಿತಿಗಳನ್ನು ಭರ್ತಿ ಮಾಡಬೇಕು. ಕೋವಿಡ್ ಸೋಂಕಿತರ ಜೊತೆ ಸಂಪರ್ಕ ಹೊಂದಿವರನ್ನು ಪತ್ತೆ ಹಚ್ಚಲು ಈ ಕ್ರಮ ಕೈಗೊಳ್ಳಲಾಗಿದೆ.

ರಾಜ್ಯದ ಘಟ್ಟ ಪ್ರದೇಶಗಳಿಗೆ ಪ್ರಯಾಣ ಮಾಡುವಾಗ ಇ-ಪಾಸ್ ಹಾಜರುಪಡಿಸುವುದು ಕಡ್ಡಾಯವಾಗಿದೆ. ಘಟ್ಟ ಪ್ರದೇಶದಲ್ಲಿ ಖಾಯಂ ವಿಳಾಸ ಹೊಂದಿರುವವರಿಗೆ ಮಾತ್ರ ಇ-ಪಾಸ್ ನೀಡಲಾಗುತ್ತದೆ. ಪ್ರವಾಸಿಗರಿಗೆ ಪಾಸು ನೀಡುವುದಿಲ್ಲ ಎಂದು ಸರ್ಕಾರ ಹೇಳಿದೆ.
ಘಟ್ಟ ಪ್ರದೇಶದಲ್ಲಿ ವೈದ್ಯಕೀಯ ಸೌಲಭ್ಯಗಳು ಕಡಿಮೆ ಇರುವ ಕಾರಣ ಇಂತಹ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರ ಮದ್ರಾಸ್ ಹೈಕೋರ್ಟ್‌ಗೆ ಮಾಹಿತಿ ನೀಡಿದೆ. ಪ್ರಸ್ತುತ ಇದೇ ಮಾದರಿಯನ್ನು ಅನುಸರಿಸಲಾಗುತ್ತಿದೆ.
ಕೇಂದ್ರ ಗೃಹ ಇಲಾಖೆ ಅನ್ ಲಾಕ್ 3.0 ಮಾರ್ಗಸೂಚಿ ಪ್ರಕಟಿಸುವಾಗ ರಾಜ್ಯಗಳ ನಡುವೆ ಸಂಚಾರ ನಡೆಸಲು ಯಾವುದೇ ಪಾಸು ಕಡ್ಡಾಯಗೊಳಿಸಬಾರದು ಎಂದು ಹೇಳಿತ್ತು. ಆದ್ದರಿಂದ, ಸರ್ಕಾರ ಕೇಂದ್ರಕ್ಕೆ ಪತ್ರ ಬರೆದು ಮಾಹಿತಿ ನೀಡಬೇಕು ಎಂದು ಮುಖ್ಯ ನ್ಯಾಯಮೂರ್ತಿಗಳು ಸೂಚನೆ ನೀಡಿದರು.
ಅಕ್ಟೋಬರ್ 13ರಂದು ಆರೋಗ್ಯ ಇಲಾಖೆ ನೀಡಿರುವ ಮಾಹಿತಿಯಂತೆ ತಮಿಳುನಾಡಿನಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 43,239. ಇದುವರೆಗೂ ರಾಜ್ಯದಲ್ಲಿ 6 ಲಕ್ಷ ಜನರು ಗುಣಮುಖರಾಗಿದ್ದಾರೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು












Click it and Unblock the Notifications