ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜೀವ್ ಗಾಂಧಿ ಹತ್ಯೆ ಪ್ರಕರಣ ತನಿಖೆ ನಡೆಸಿದ್ದ ಮಾಜಿ ಸಿಬಿಐ ಅಧಿಕಾರಿ ಕೊರೊನಾ ಸೋಂಕಿನಿಂದ ನಿಧನ

|
Google Oneindia Kannada News

ಚೆನ್ನೈ, ಮೇ 12: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ತನಿಖೆ ನಡೆಸಿದ್ದ ಸಿಬಿಐ ಮಾಜಿ ಅಧಿಕಾರಿ ಕೆ ರಗೋಥಮನ್ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ಸಿಬಿಐ ಮಾಜಿ ಅಧಿಕಾರಿ ಕೆ ರಗೋಥಮನ್ ಅವರಿಗೆ ನಾಲ್ಕು ಮಕ್ಕಳಿದ್ದು, ಅವರ ಪತ್ನಿ ಕೆಲವು ವರ್ಷಗಳ ಹಿಂದೆ ನಿಧನರಾಗಿದ್ದಾರೆ. ರಗೋಥಮನ್ ಅವರು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ತನಿಖೆ ನಡೆಸಿದ ವಿಶೇಷ ತನಿಖಾ ತಂಡದಲ್ಲಿದ್ದರು. ಅವರು ಹಲವಾರು ಪುಸ್ತಕಗಳನ್ನು ಬರೆದಿದ್ದು, ಸಿಬಿಐನಲ್ಲಿ ಪೊಲೀಸ್ ಅಧೀಕ್ಷಕರಾಗಿ ನಿವೃತ್ತರಾಗಿದ್ದರು.

ಅಪಾಯಕಾರಿ ಕೊರೊನಾ: ಭಾರತದಲ್ಲಿ ಒಂದೇ ದಿನ 4005 ಮಂದಿ ಸಾವು!ಅಪಾಯಕಾರಿ ಕೊರೊನಾ: ಭಾರತದಲ್ಲಿ ಒಂದೇ ದಿನ 4005 ಮಂದಿ ಸಾವು!

76 ವರ್ಷದ ರಗೋಥಮನ್ ಅವರಿಗೆ ಕೆಲವು ದಿನಗಳ ಹಿಂದೆ ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು. ಹೀಗಾಗಿ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.

 Ex-CBI Officer Who Probed Rajiv Gandhi Assassination Dies Of COVID-19 In Chennai

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಯು ಯಮಸ್ವರೂಪಿ ಆಗಿದೆ. ಭಾರತದಲ್ಲಿ ಮೊದಲ ಬಾರಿಗೆ ಒಂದೇ ದಿನ 4,000ಕ್ಕೂ ಅಧಿಕ ಮಂದಿ ಕೊವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ.

ಕಳೆದ 24 ಗಂಟೆಗಳಲ್ಲಿ 3,48,421 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 4,005 ಜನರು ಕೊವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟಿದ್ದರೆ, ಒಂದೇ ದಿನ 3,55,338 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಈ ಪೈಕಿ ಇದುವರೆಗೂ 1,93,82,642 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಯಿಂದ ಒಟ್ಟು 2,54,197 ಜನರು ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ 37,04,099 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ ಎಂದು ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

English summary
Former CBI officer K Ragothaman who investigated the assassination of Rajiv Gandhi passed away on Wednesday. He was 76.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X