ಚೆನ್ನೈನ ಅಪಾರ್ಟ್ಮೆಂಟ್ ನಲ್ಲಿ ಬೆಂಕಿ, ನಾಲ್ವರು ಸಾವು

ಚೆನ್ನೈನ ವಡಪಳನಿಯಲ್ಲಿ ಸೋಮವಾರ ಮುಂಜಾನೆ ಅಗ್ನಿ ದುರಂತ ಸಂಭವಿಸಿದೆ. ಅಪಾರ್ಟ್ಮಂಟ್ ವೊಂದರಲ್ಲಿ ಕಾಣಿಸಿಕೊಂಡ ಬೆಂಕಿಗೆ ನಾಲ್ವರು ಬಲಿಯಾಗಿದ್ದಾರೆ. ಮೃತರಲ್ಲಿ ಇಬ್ಬರು ಮಕ್ಕಳು ಸೇರಿದ್ದಾರೆ.

ಚೆನ್ನೈ, ಮೇ 08: ಚೆನ್ನೈನ ವಡಪಳನಿಯಲ್ಲಿ ಸೋಮವಾರ ಮುಂಜಾನೆ ಅಗ್ನಿ ದುರಂತ ಸಂಭವಿಸಿದೆ. ಅಪಾರ್ಟ್ಮಂಟ್ ವೊಂದರಲ್ಲಿ ಕಾಣಿಸಿಕೊಂಡ ಬೆಂಕಿಗೆ ನಾಲ್ವರು ಬಲಿಯಾಗಿದ್ದಾರೆ. ಮೃತರಲ್ಲಿ ಇಬ್ಬರು ಮಕ್ಕಳು ಸೇರಿದ್ದಾರೆ.

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಧಾವಿಸಿ ಬಂದಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Fire at Chennai Apartment Vadapalani many Killed

ಅಪಾರ್ಟ್​ಮೆಂಟ್​ನ ಪಾರ್ಕಿಂಗ್ ಪ್ರದೇಶದಲ್ಲಿ ಮೊದಲಿಗೆ ಬೆಂಕಿ ಕಾಣಿಸಿಕೊಂಡು, ನಂತರ ಮನೆಗಳಿಗೆ ಹಬ್ಬಿದೆ. ಬೆಂಕಿಯ ತೀವ್ರತೆಗೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ 15 ಕ್ಕೂ ಹೆಚ್ಚು ವಾಹನಗಳು ಸುಟ್ಟು ಕರಕಲಾಗಿವೆ.


ಸೋಮವಾರ ಬೆಳಗ್ಗೆ 5.30ರ ವೇಳೆಯಲ್ಲಿ ಅಗ್ನಿ ಅವಘಡ ಸಂಭವಿಸಿರುವ ಸಾಧ್ಯತೆಯಿದೆ. ಘಟನಾ ಸ್ಥಳಕ್ಕೆ ಆಗಮಿಸಿ, ಅಪಾಯದಲ್ಲಿ ಸಿಲುಕಿದ್ದವರ ರಕ್ಷಣೆ ಮಾಡಲಾಯಿತು. ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದ 7 ಜನರಲ್ಲಿ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂದು ಅಗ್ನಿ ಶಾಮಕದಳದ ಅಧಿಕಾರಿಗಳು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+