ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚೆನ್ನೈನ ಕಸ್ತೂರ್ ಬಾ ಸರ್ಕಾರಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ

|
Google Oneindia Kannada News

ಚೆನ್ನೈ, ಮೇ 27: ತಮಿಳುನಾಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಬುಧವಾರ ರಾತ್ರಿ ಅಗ್ನಿ ಅವಘಡವೊಂದು ಸಂಭವಿಸಿದೆ. ಚೆನ್ನೈನ ಮಹಿಳಾ ಮತ್ತು ಮಕ್ಕಳ ಸರ್ಕಾರಿ ಕಸ್ತೂರ್ ಬಾ ಗಾಂಧಿ ಆಸ್ಪತ್ರೆಯ ಎರಡನೇ ಮಹಡಿಯಲ್ಲಿ ಇರುವ ಹೆರಿಗೆ ವಾರ್ಡ್‌ನಲ್ಲಿ ವೈದ್ಯರು ಕರ್ತವ್ಯ ನಿರ್ವಹಿಸುತ್ತಿದ್ದ ಕೋಣೆಯಲ್ಲಿ ಸಣ್ಣದಾಗಿ ಬೆಂಕಿ ಕಾಣಿಸಿಕೊಂಡಿದೆ.

ಸಣ್ಣ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸ್ಥಳದಲ್ಲಿದ್ದ ವೈದ್ಯರು ಮತ್ತು ಆಸ್ಪತ್ರೆ ಸಿಬ್ಬಂದಿ ಎಚ್ಚಿತ್ತುಕೊಂಡಿದ್ದಾರೆ. ತಕ್ಷಣ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಗರ್ಭಿಯರು, ನವಜಾತ ಶಿಶುಗಳು ಹಾಗೂ ತಾಯಂದಿರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಯಿತು.

Chennai: Fire in Kasturba Gandhi Govt Hospital; Newborns and Mothers Shifted To Safer Place

24 ಗಂಟೆ ಲೆಕ್ಕ: ದೇಶದಲ್ಲೇ ಅತಿಹೆಚ್ಚು ಕೊರೊನಾ ಕೇಸ್ ದಾಖಲಿಸಿದ ರಾಜ್ಯ? 24 ಗಂಟೆ ಲೆಕ್ಕ: ದೇಶದಲ್ಲೇ ಅತಿಹೆಚ್ಚು ಕೊರೊನಾ ಕೇಸ್ ದಾಖಲಿಸಿದ ರಾಜ್ಯ?

ವೈದ್ಯರು ಮತ್ತು ಸಿಬ್ಬಂದಿ ತೋರಿದ ಸಮಯಪ್ರಜ್ಞೆಯಿಂದ ಭಾರಿ ದುರಂತವೊಂದು ತಪ್ಪಿದೆ. ಅಗ್ನಿ ಅವಘಡದಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳ ವಾಹನ ಸಿಬ್ಬಂದಿ ದೌಡಾಯಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

English summary
Chennai: Fire in Kasturba Gandhi Govt Hospital; Newborns and Mothers Shifted To Safer Place.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X