ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೊದಲ ಉಗ್ರ ಹಿಂದು: ಕಮಲ್ ಹಾಸನ್ ಹೇಳಿಕೆಗೆ ಪಕ್ಷದ ಸ್ಪಷ್ಟನೆ

|
Google Oneindia Kannada News

ಚೆನ್ನೈ, ಮೇ 15: "ಸ್ವತಂತ್ರ ಭಾರತದ ಮೊದಲ ಉಗ್ರ ಒಬ್ಬ ಹಿಂದು, ಆತನ ಹೆಸರು ನಾಥೂರಾಮ್ ಗೋಡ್ಸೆ" ಎಂದ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ ನಟ, ಮತ್ತು ಮಕ್ಕಳ ನೀಧಿ ಮಯ್ಯಮ್(ಎಂಎನ್ ಎಂ) ಪಕ್ಷದ ಸ್ಥಾಪಕ ಕಮಲ್ ಹಾಸನ್ ಅವರ ಹೇಳಿಕೆಗೆ ಪಕ್ಷ ಸ್ಪಷ್ಟನೆ ನೀಡಿದೆ.

ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ

"ಆ ಹೇಳಿಕೆಯನ್ನು ಕಮಲ್ ಹಾಸನ್ ನೀಡಿದ ಸನ್ನಿವೇಶ ಹಾಗಿತ್ತು. ಅವರು ಯಾವುದೇ ಧರ್ಮದಲ್ಲಾಗಲೀ, ಭಯೋತ್ಪಾದನೆ ಒಳಿತಲ್ಲ. ಅದಕ್ಕೆ ಹಿಂದು, ಮುಸ್ಲಿಂ ಎಂಬ ಭೇದವಿಲ್ಲ ಎಂಬ ಅರ್ಥದಲ್ಲಿ ಹೇಳಿದ್ದರು. ಆ ಸಂದರ್ಭದಲ್ಲಿ ಸ್ವತಂತ್ರ ಭಾರತದ ಮೊದಲ ಉಗ್ರ ಹಿಂದು. ಆತನ ಹೆಸರು ನಾಥೂರಾಮ್ ಗೋಡ್ಸೆ ಎಂದು ಹಾಸನ್ ಹೇಳಿದ್ದರು. ಅವರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ" ಎಂದು ಎಂಎನ್ ಎಂ ಉಪಾಧ್ಯಕ್ಷ ಆರ್ ಮಹೇಂದ್ರನ್ ಹೇಳಿದ್ದಾರೆ.

ಸ್ವತಂತ್ರ ಭಾರತದ ಮೊತ್ತಮೊದಲ ಉಗ್ರ ಒಬ್ಬ ಹಿಂದು: ಕಮಲ್ ಹಾಸನ್ ಸ್ವತಂತ್ರ ಭಾರತದ ಮೊತ್ತಮೊದಲ ಉಗ್ರ ಒಬ್ಬ ಹಿಂದು: ಕಮಲ್ ಹಾಸನ್

"ಕಮಲ್ ಹಾಸನ್ ಅವರ ಹೇಳಿಕೆಯನ್ನು ಕೆಲವರು ತಪ್ಪಾಗಿ ಅರ್ಥಮಾಡಿಕೊಂಡು, ಅವರನ್ನು ಹಿಂದು-ವಿರೋಧಿ ಎಂದು ಕರೆದರು. ಇದು ಜನರಲ್ಲೂ ಗೊಂದಲ ಮೂಡಿಸಿತು" ಎಂದು ಅವರು ಹೇಳಿದರು.

First terrorist is a Hindu, MNM gives clarification to Kamal Haasans statement

ತಮಿಳುನಾಡಿನ ಅರವಕುರಿಚಿಯಲ್ಲಿ ಮೇ 19 ರಂದು ನಡೆಯಲಿರುವ ವಿಧಾನಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದ ಕಮಲ್ ಹಾಸನ್ ಮೇ 13 ರಂದು ಮಾತನಾಡುತ್ತ, "ಇದು ಮುಸ್ಲಿಂ ಜನರೇ ಹೆಚ್ಚಿರುವ ಪ್ರದೇಶ ಎಂಬ ಕಾರಣಕ್ಕಾಗಿ ನಾನು ಈ ಮಾತನ್ನು ಹೇಳುತ್ತಿಲ್ಲ. ಬದಲಿಗೆ ನಾನು ಗಾಂಧಿಜೀ ಅವರ ವಿಗ್ರಹದ ಮುಂದೆ ನಿಂತಿರುವ ಕಾರಣಕ್ಕೆ ಹೀಗೆ ಹೇಳುತ್ತಿದ್ದೇನೆ. ಸ್ವತಂತ್ರ ಭಾರತದ ಮೊದಲ ಉಗ್ರ ಒಬ್ಬ ಹಿಂದು, ಅವನ ಹೆಸರು ನಾಥುರಾಮ್ ಗೋಡ್ಸೆ. ಅಲ್ಲಿಂದ ಭಯೋತ್ಪಾದನೆ ಶುರುವಾಯಿತು" ಎಂದಿದ್ದರು. ಇದು ಭಾರೀ ವಿವಾದ ಸೃಷ್ಟಿಸಿತ್ತು.

English summary
Kamla Haasan's Makkal Needhi Maiam (MNM) on Wednesday issued a clarification on its chief Kamal Haasan's statement that 'first terrorist in independent India was a Hindu," saying 'it has been taken out of context.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X