ಜಲ್ಲಿಕಟ್ಟು ಸ್ಪರ್ಧೆಯಲ್ಲಿ ಭಾಗವಹಿಸಲು ಮೆಡಿಕಲ್ ಸರ್ಟಿಫಿಕೇಟ್ ಕಡ್ಡಾಯ
ಚೆನ್ನೈ, ಜನವರಿ.09: ತಮಿಳುನಾಡಿನಲ್ಲಿ ಸಾಂಪ್ರಾದಾಯಕ ಹಬ್ಬಕ್ಕೆ ದಿನಗಣನೆ ಶುರುವಾಗಿದೆ. ಕರ್ನಾಟಕದಲ್ಲಿ ಸಂಕ್ರಾಂತಿ ಹಬ್ಬವನ್ನೇ ತಮಿಳುನಾಡಿನಲ್ಲಿ ಪೊಂಗಲ್ ಎಂದು ಆಚರಿಸಲಾಗುತ್ತದೆ. ಈ ದಿನ ನಡೆಯುವ ಜಲ್ಲಿಕಟ್ಟು ಸ್ಪರ್ಧೆಯೇ ಹಬ್ಬದ ಕೇಂದ್ರ ಬಿಂದು ಆಗಿರುತ್ತದೆ.
Recommended Video
ಚೆನ್ನೈ ಸೇರಿದಂತೆ ತಮಿಳುನಾಡಿನ ಹಲವೆಡೆ ಪೊಂಗಲ್ ಹಬ್ಬದ ಪ್ರಯುಕ್ತ ಜಲ್ಲಿಕಟ್ಟು ಸ್ಪರ್ಧೆಯನ್ನು ಆಯೋಜನೆ ಮಾಡಲಾಗುತ್ತದೆ. ಜಲ್ಲಿಕಟ್ಟು ಎಂದರೆ ಕೋಣಗಳನ್ನು ಎದುರಿಸುವ ಸ್ಪರ್ಧೆಯಾಗಿದ್ದು, ಈ ಹಬ್ಬಕ್ಕೆ ತಮಿಳುನಾಡಿನಲ್ಲಿ ವಿಶೇಷ ಪ್ರಾಧಾನ್ಯತೆಯನ್ನು ನೀಡಲಾಗುತ್ತದೆ.
ಮಧುರೈನಲ್ಲಿ ನಡೆಯುವ ಜಲ್ಲಿಕಟ್ಟು ಸ್ಪರ್ಧೆಯಲ್ಲಿ ಭಾಗವಹಿಸಬೇಕಾದರೆ ವಿಶೇಷ ಷರತ್ತುನ್ನು ವಿಧಿಸಲಾಗಿದೆ. ಈ ಬಾರಿ ಜಲ್ಲಿಕಟ್ಟು ಸ್ಪರ್ಧೆಯಲ್ಲಿ ನಡೆಯುವ ಅನಾಹುತಗಳನ್ನು ತಪ್ಪಿಸಲೆಂದೇ ಜಿಲ್ಲಾಡಳಿತ ಕಠಿಣ ಕ್ರಮಗಳನ್ನು ತೆಗೆದುಕೊಂಡಿದೆ.

ಅಪ್ರಾಪ್ತರಿಗೆ ಜಲ್ಲಿಕಟ್ಟು ಸ್ಪರ್ಧೆಯಲ್ಲಿಲ್ಲ ಪ್ರವೇಶ
ಜಲ್ಲಿಕಟ್ಟು ಆಚರಣೆಯಲ್ಲಿ ಅಪ್ರಾಪ್ತರಿಗೆ ಮೊದಲಿನಿಂದಲೂ ಪ್ರವೇಶವನ್ನು ನಿಷೇಧಿಸಲಾಗಿತ್ತು. ಆದರೂ ಅದನ್ನು ಸರಿಯಾಗಿ ಆಚರಣೆಗೆ ತರಲು ಸಾಧ್ಯವಾಗಿರಲಿಲ್ಲ. ಈ ಬಾರಿ ಕಟ್ಟುನಿಟ್ಟಾಗಿ ಅಪ್ರಾಪ್ತರನ್ನು ಜಲ್ಲಿಕಟ್ಟಿನಿಂದ ದೂರ ಇರಿಸಲು ಜಿಲ್ಲಾಡಳಿತ ಕ್ರಮ ತೆಗೆದುಕೊಂಡಿದೆ. 21 ವರ್ಷದೊಳಗಿನ ಯುವಕರು ಜಲ್ಲಿಕಟ್ಟು ಸ್ಪರ್ಧೆಯಲ್ಲಿ ಭಾಗವಹಿಸುವಂತಿಲ್ಲ ಎಂದು ಮಧುರೈ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಫಿಟ್ ನೆಸ್ ಸರ್ಟಿಫಿಕೇಟ್ ಉಳ್ಳವರಿಗೆ ಮಾತ್ರ ಅವಕಾಶ
ಇನ್ನು, ಮಧುರೈ ಜಿಲ್ಲೆಯ ಪಲಮಾಡು ಮತ್ತು ಅಲಂಗನಲ್ಲೂರಿನಲ್ಲಿ ಈ ಬಾರಿ ಜಲ್ಲಿಕಟ್ಟು ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸುವವರು ಸ್ವತಃ ತಾವೇ ಹೋಗಿ ವೈದ್ಯರಿಂದ ಫಿಟ್ ನೆಸ್ ಸರ್ಟಿಫಿಕೇಟ್ ನ್ನು ಪಡೆದುಕೊಂಡಿರಬೇಕು. ಈ ಫಿಟ್ ನೆಸ್ ಸರ್ಟಿಫಿಕೇಟ್ ಉಳ್ಳವರಿಗೆ ಮಾತ್ರ ಅವಕಾಶ ನೀಡುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಮೂರು ಕಡೆಗಳಲ್ಲಿ ಒಂದೊಂದು ದಿನ ಆಚರಣೆ
ಪ್ರತಿವರ್ಷವು ಪೊಂಗಲ್ ಹಬ್ಬದ ಸಂಭ್ರಮವನ್ನು ಆಚರಿಸಲು ಮೂರು ದಿನಗಳ ಕಾಲ ಜಲ್ಲಿಕಟ್ಟು ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಜನವರಿ.15ರಂದು ಅವನಿಯಪುರಂ, ಜನವರಿ.16ರಂದು ಪಲಮೆಟ್ಟೆ, ಹಾಗೂ 17ರಂದು ಅಲಂಕನಲ್ಲೂರ ಗ್ರಾಮಗಳಲ್ಲಿ ಜಲ್ಲಿಕಟ್ಟು ಸ್ಪರ್ಧೆಯನ್ನು ಆಯೋಜಿಸಲಾಗುತ್ತದೆ.

ವಿಶೇಷ ಬಸ್ ಗಳ ವ್ಯವಸ್ಥೆ ಕಲ್ಪಿಸಿದ ಸರ್ಕಾರ
ಪೊಂಗಲ್ ಆಚರಣೆ ಜೊತೆಗೆ ಜಲ್ಲಿಕಟ್ಟು ಸ್ಪರ್ಧೆಯನ್ನು ಕಣ್ತುಂಬಿಕೊಳ್ಳಲು ಬಯಸುವ ಪ್ರವಾಸಿಗರಿಗೆ ವಿಶೇಷ ಬಸ್ ವ್ಯವಸ್ಥೆ ಜೊತೆಗೆ ಪ್ಯಾಕೇಜ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಎಸಿ ಕೋಚ್ ಬಸ್ ಹಾಗೂ ವಸತಿ ವ್ಯವಸ್ಥೆ ಒಬ್ಬರಿಗೆ 4,550 ರುಪಾಯಿ ನಿಗದಿಗೊಳಿಸಿದ್ದು, ಶೇರಿಂಗ್ ಆದರೆ 4300 ರೂಪಾಯಿ ಹಾಗೂ ಮಕ್ಕಳಿಗೆ 3450 ರುಪಾಯಿ ನಿಗದಿ ಮಾಡಲಾಗಿದೆ. ಎಸಿ ಬಸ್ ಹಾಗೂ ಎಸಿ ವಸತಿ ವ್ಯವಸ್ಥೆ ಕಲ್ಪಿಸಲು ಒಬ್ಬರಿಗೆ 4750 ರುಪಾಯಿ ನಿಗದಿಗೊಳಿಸಲಾಗಿದ್ದು, ಶೇರಿಂದ್ ಅದರೆ 4500 ಹಾಗೂ ಮಕ್ಕಳಿಗೆ 3600 ರುಪಾಯಿ ನಿಗದಿಗೊಳಿಸಲಾಗಿದೆ.
-
ಇಂದು ಸಂಜೆ 4 ಗಂಟೆಗೆ 5 ರಾಜ್ಯಗಳ ವಿಧಾನಸಭಾ ಚುನಾವಣಾ ವೇಳಾಪಟ್ಟಿ ಪ್ರಕಟಿಸಲು ಚುನಾವಣಾ ಆಯೋಗ ಸಜ್ಜು -
Tamil Nadu Assembly Election: ತಮಿಳುನಾಡು ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ: ಏಪ್ರಿಲ್ 23ಕ್ಕೆ ಮತದಾನ, ಬಲಾಬಲ ಹೇಗಿದೆ? -
Gold: ದುಬೈಯಿಂದ ಭಾರತಕ್ಕೆ ಚಿನ್ನದ ಪೂರೈಕೆ ಪುನರಾರಂಭ; ಗ್ರಾಹಕರ ನಿರ್ಧಾರದಿಂದ ಬೆದರಿದ ವ್ಯಾಪಾರಿಗಳು -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ












Click it and Unblock the Notifications