ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ರಾಜಕೀಯಕ್ಕೆ!

|
Google Oneindia Kannada News

ಚೆನ್ನೈ, ನವೆಂಬರ್ 08: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಬಿಜೆಪಿ ಸೇರಿ ರಾಜಕೀಯಕ್ಕೆ ಧುಮುಕಿದ್ದಾರೆ. ಕರ್ನಾಟಕದಲ್ಲಿ ಸೇವೆ ಸಲ್ಲಿಸಿದ್ದ ತಮಿಳುನಾಡು ಮೂಲದ ಐಎಎಸ್ ಅಧಿಕಾರಿಯೊಬ್ಬರು ಈಗ ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ.

ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಸೋಮವಾರ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು, ಬಳಿಕ ಅದು ಅಂಗೀಕಾರಗೊಂಡಿತ್ತು.

ಬಿಜೆಪಿ ಸೇರಿದ ಕೆ. ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲು ಬಿಜೆಪಿ ಸೇರಿದ ಕೆ. ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲು

"ನಾನು ರಾಜಕೀಯ ಬರಲು ತೀರ್ಮಾನಿಸಿದ್ದೇನೆ. ಕಾಂಗ್ರೆಸ್ ಪಕ್ಷವನ್ನು ಸೇರಲಿದ್ದೇನೆ" ಎಂದು ಇಂಗ್ಲಿಶ್ ಪತ್ರಿಕೆಯೊಂದಕ್ಕೆ ಸಸಿಕಾಂತ್ ಸೆಂಥಿಲ್ ಹೇಳಿಕೆ ನೀಡಿದ್ದಾರೆ. ಸೋಮವಾರ ಅವರು ಕಾಂಗ್ರೆಸ್ ಸೇರಲಿದ್ದಾರೆ.

ಮಂಗಳೂರಲ್ಲಿ ಗೋಲಿಬಾರ್; ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ಏನಂತಾರೆ? ಮಂಗಳೂರಲ್ಲಿ ಗೋಲಿಬಾರ್; ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ಏನಂತಾರೆ?

2009ನೇ ಬ್ಯಾಚ್ ಕರ್ನಾಟಕ ಕೇಡರ್‌ನ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ 2017ರ ಅಕ್ಟೋಬರ್ 10ರಿಂದ 2019ರ ಸೆಪ್ಟೆಂಬರ್ 6ರ ತನಕ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದರು. ಜಿಲ್ಲಾಧಿಕಾರಿಯಾಗಿದ್ದಾಗಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

ಎಸ್. ಸಸಿಕಾಂತ್ ಸೆಂಥಿಲ್ ರಾಜೀನಾಮೆ : ಯಾರು, ಏನು ಹೇಳಿದರು? ಎಸ್. ಸಸಿಕಾಂತ್ ಸೆಂಥಿಲ್ ರಾಜೀನಾಮೆ : ಯಾರು, ಏನು ಹೇಳಿದರು?

ಸಸಿಕಾಂತ್ ಸೆಂಥಿಲ್ ಕಾಂಗ್ರೆಸ್ ಸೇರ್ಪಡೆ

ಸಸಿಕಾಂತ್ ಸೆಂಥಿಲ್ ಕಾಂಗ್ರೆಸ್ ಸೇರ್ಪಡೆ

ಎಸ್. ಸಸಿಕಾಂತ್ ಸೆಂಥಿಲ್ ಸೋಮವಾರ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ. ತಮಿಳುನಾಡು ಕಾಂಗ್ರೆಸ್ ಉಸ್ತುವಾರಿ ದಿನೇಶ್ ಗುಂಡೂರಾವ್ ಸಮ್ಮುಖದಲ್ಲಿ ಅವರು ಪಕ್ಷ ಸೇರಲಿದ್ದಾರೆ ಎಂಬ ಮಾಹಿತಿ ಇದೆ. ಪಕ್ಷ ಸೇರ್ಪಡೆ ಬಳಿಕ ಅವರು ಪ್ರಾಥಮಿಕ ಸದಸ್ಯತ್ವವನ್ನು ಪಡೆಯಲಿದ್ದಾರೆ.

ತಮಿಳುನಾಡು ವಿಧಾನಸಭೆ ಚುನಾವಣೆ

ತಮಿಳುನಾಡು ವಿಧಾನಸಭೆ ಚುನಾವಣೆ

ತಮಿಳುನಾಡು ವಿಧಾನಸಭೆ ಚುನಾವಣೆಗೆ ಏಳು ತಿಂಗಳು ಬಾಕಿ ಇದೆ. ಇಂತಹ ಸಂದರ್ಭದಲ್ಲಿ ಸಸಿಕಾಂತ್ ಸೆಂಥಿಲ್ ಕಾಂಗ್ರೆಸ್ ಪಕ್ಷ ಸೇರಿ ರಾಜಕೀಯಕ್ಕೆ ಬರುವ ತೀರ್ಮಾನ ಪ್ರಕಟಿಸಿದ್ದಾರೆ. ಜಿಲ್ಲಾಧಿಕಾರಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಬಳಿಕ ಸೆಂಥಿಲ್ ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಸಿಎಎ, ಎನ್‌ಆರ್‌ಸಿ ವಿರೋಧಿ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು.

ರಾಜೀನಾಮೆ ಪತ್ರದಲ್ಲಿ ಏನಿತ್ತು?

ರಾಜೀನಾಮೆ ಪತ್ರದಲ್ಲಿ ಏನಿತ್ತು?

ಐಎಎಸ್ ಅಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ರಾಜೀನಾಮೆ ಪತ್ರದಲ್ಲಿ, 'ಪ್ರಜಾಪ್ರಭುತ್ವದ ಮೂಲ ಆಧಾರ ಸ್ತಂಭಗಳು ಹಿಂದೆಂದೂ ಕಾರಣ ರೀತಿಯಲ್ಲಿ ರಾಜಿ ಮಾಡಿಕೊಳ್ಳುತ್ತಿವೆ. ದೇಶದ ಬಹುತ್ವದ ಏಳಿಗೆಗೆ ಭವಿಷ್ಯದಲ್ಲಿ ಹೆಚ್ಚು ಅಪಾಯ ಇದ್ದಂತೆ ಭಾಸವಾಗುತ್ತಿದೆ. ಭಾರತೀಯ ಆಡಳಿತ ಸೇವೆಯಿಂದ ಹೊರಗಿರುವುದು ಲೇಸು ಎನಿಸುತ್ತಿದೆ. ಸೇವೆಯಿಂದ ಹೊರಗಿದ್ದು, ಜನರ ಒಳಿತಿಗಾಗಿ ದುಡಿಯುತ್ತೇನೆ" ಎಂದು ಹೇಳಿದ್ದರು.

ಅಣ್ಣಾಮಲೈ ಬಿಜೆಪಿಯಲ್ಲಿ

ಅಣ್ಣಾಮಲೈ ಬಿಜೆಪಿಯಲ್ಲಿ

ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಈಗಾಗಲೇ ಬಿಜೆಪಿ ಸೇರಿದ್ದಾರೆ. ಪಕ್ಷ ಅವರನ್ನು ತಮಿಳುನಾಡು ಬಿಜೆಪಿ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಅಣ್ಣಾಮಲೈ ಅವರು ಸಹ ಕರ್ನಾಟಕದಲ್ಲಿ ಸೇವೆ ಸಲ್ಲಿಸುವಾಗಲೇ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು.

English summary
Former IAS officer S. Sasikanth Senthil ti join Congress party. 2009 Karnataka-cadre IAS officer Sasikanth Senthil who resigned from civil services in 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X