ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೆಮ್‌ಡೆವಿರ್, ಆಕ್ಸಿಜನ್ ಸಿಲಿಂಡರ್ ಅಕ್ರಮವಾಗಿ ಸಂಗ್ರಹಿಸುವವರ ವಿರುದ್ಧ ಗೂಂಡಾ ಕೇಸ್: ಸ್ಟಾಲಿನ್

|
Google Oneindia Kannada News

ಚೆನ್ನೈ, ಮೇ 15: ರೆಮ್‌ಡೆಸಿವಿರ್ ಹಾಗೂ ಆಕ್ಸಿಜನ್ ಸಿಲಿಂಡರ್ ಅಕ್ರಮವಾಗಿ ಸಂಗ್ರಹಿಸುವವರ ವಿರುದ್ಧ ಗೂಂಡಾ ಕಾಯ್ದೆಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಹೇಳಿದ್ದಾರೆ.

ರೆಮ್‌ಡೆಸಿವಿರ್ ಮತ್ತು ಆಕ್ಸಿಜನ್ ಸಿಲಿಂಡರ್‌ ಗಳನ್ನು ಅಕ್ರಮವಾಗಿ ಸಂಗ್ರಹಿಸಲಾಗುತ್ತಿದೆ ಎಂಬ ವ್ಯಕ್ತಿಗಳ ವರದಿಗಳ ಮಧ್ಯೆ, ರೆಮ್‌ಡೆಸಿವಿರ್, ಆಕ್ಸಿಜನ್ ಸಿಲಿಂಡರ್‌ಗಳನ್ನು ಸಂಗ್ರಹಿಸಿಟ್ಟುಕೊಂಡವರ ವಿರುದ್ಧ ಗೂಂಡಾ ಕಾಯ್ದೆಯಡಿ ಕೇಸ್ ದಾಖಲಿಸುವಂತೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಶನಿವಾರ ಪೊಲೀಸ್ ಇಲಾಖೆಗೆ ಆದೇಶಿಸಿದ್ದಾರೆ.

ಬ್ಲ್ಯಾಕ್ ಫಂಗಸ್ ಪತ್ತೆ, ಚಿಕಿತ್ಸೆ, ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಐಸಿಎಂಆರ್ ಸಲಹೆಬ್ಲ್ಯಾಕ್ ಫಂಗಸ್ ಪತ್ತೆ, ಚಿಕಿತ್ಸೆ, ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಐಸಿಎಂಆರ್ ಸಲಹೆ

ಸರ್ಕಾರದ ಉದ್ದೇಶಕ್ಕೆ ವಿರುದ್ಧವಾಗಿ ವರ್ತಿಸುವವರ ಚಟುವಟಿಕೆಗಳನ್ನು ನಿಯಂತ್ರಿಸುವ ಅವಶ್ಯಕತೆ ಇದೆ ಎಂದಿರುವ ಸಿಎಂ, ದೇಶಾದ್ಯಂತ ಬಿಕ್ಕಟ್ಟನ್ನು ಸೃಷ್ಟಿಸಿರುವ ಕೋವಿಡ್‌ನ ಎರಡನೇ ಅಲೆಯ ಪ್ರಭಾವದಿಂದ ತಮಿಳುನಾಡು ಹೊರತಾಗಿಲ್ಲ ಎಂದು ಹೇಳಿದ್ದಾರೆ.

Goondas Act For Hoarders Of Remdesivir, Oxygen Cylinders: Tamil Nadu CM Stalin

ಈ ಸಮಯದಲ್ಲಿ ಕೆಲವು ಸಾಮಾಜ ವಿರೋಧಿ ಶಕ್ತಿಗಳು ರೆಮ್‌ಡೆಸಿವಿರ್ ಔಷಧಿ ಸಂಗ್ರಹಿಸಿ ಅದನ್ನು ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿವೆ. ಅಂತೆಯೇ, ಆಮ್ಲಜನಕ ಸಿಲಿಂಡರ್‌ಗಳನ್ನು ಅತಿಯಾದ ಬೆಲೆಗೆ ಮಾರಾಟ ಮಾಡುವ ಬಗ್ಗೆ ದೂರುಗಳಿವೆ.

ರಾಜ್ಯವು ಸಾಂಕ್ರಾಮಿಕ ರೋಗವನ್ನು ಎದುರಿಸುತ್ತಿರುವಾಗ ಇವು ಗಂಭೀರ ಸ್ವಭಾವದ ಅಪರಾಧಗಳಾಗಿದ್ದು, ರೆಮ್‌ಡೆಸಿವಿರ್ ಇಂಜೆಕ್ಷನ್ ಮತ್ತು ಆಕ್ಸಿಜನ್ ಸಿಲಿಂಡರ್‌ಗಳನ್ನು ಸಂಗ್ರಹಿಸುವವರನ್ನು ಗೂಂಡಾ ಕಾಯ್ದೆಯಡಿ ಕೇಸ್ ದಾಖಲಿಸಲು ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಿದ್ದೇನೆ ಎಂದು ಸ್ಟಾಲಿನ್ ತಿಳಿಸಿದ್ದಾರೆ.

ಈ ಕುರಿತು ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಿರುವ ಮುಖ್ಯಮಂತ್ರಿ ಸ್ಟಾಲಿನ್ ಅವರು, ಕೊರೊನಾ ವೈರಸ್ ಸೋಂಕಿನಿಂದ ಜನರ ಪ್ರಾಣ ರಕ್ಷಿಸುವುದು ರಾಜ್ಯ ಸರ್ಕಾರದ ಮೊದಲ ಜವಾಬ್ದಾರಿಯಾಗಿದ್ದು, ರೆಮ್‌ಡೆಸಿವಿರ್, ಆಮ್ಲಜನಕ ಸಿಲಿಂಡರ್‌ ಸಂಗ್ರಹಿಸಿ ಅದನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವವರ ವಿರುದ್ಧ ಗೂಂಡಾ ಕಾಯ್ದೆ ಅಡಿ ಕೇಸ್ ದಾಖಲಿಸುವಂತೆ ಸೂಚಿಸಿದ್ದಾರೆ.

English summary
Amidst reports about individuals hoarding Remdesivir injection, Chief Minister MK Stalin on Saturday directed police department to book those who hoard Remdesivir, oxygen cylinders and sell them at exorbitant prices under the Goondas Act.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X