ಸರ್ಕಾರಿ ಶಾಲೆಯಲ್ಲಿ ಓದಿದರೆ ವೈದ್ಯಕೀಯ ಕೋರ್ಸ್‌ನಲ್ಲಿ ಮೀಸಲಾತಿ

ಚೆನ್ನೈ, ಜೂನ್ 15 : ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ಕೋರ್ಸ್‌ಗಳ ಪ್ರವೇಶದಲ್ಲಿ ಶೇ 10ರಷ್ಟು ಮೀಸಲಾತಿ ದೊರೆಯಲಿದೆ. ಈ ಕುರಿತು ತಿದ್ದುಪಡಿ ತರಲು ಸುಗ್ರೀವಾಜ್ಞೆ ಹೊರಡಿಸಲಾಗುತ್ತದೆ.

Recommended Video

      ಮೈಮುಲ್ ಅಕ್ರಮದ ಬಗ್ಗೆ ದಾಖಲೆ ಬಿಡುಗಡೆ ಮಾಡಿದ‌ ಸಾರಾ ಮಹೇಶ್ | Oneindia Kannada

      ತಮಿಳುನಾಡು ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆ ಜಾರಿಗೊಳಿಸಲು ಸೋಮವಾರ ತೀರ್ಮಾನ ಕೈಗೊಳ್ಳಲಾಗಿದೆ. ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿ ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಎಂಬಿಬಿಎಸ್‌ ಕೋರ್ಸ್‌ ಸೇರಲು ಶೇ 10ರ ಮೀಸಲಾತಿ ದೊರೆಯಲಿದೆ.

      ಕೆ. ಪಳನಿಸ್ವಾಮಿ ನಿವೃತ್ತ ನ್ಯಾಯಮೂರ್ತಿಗಳ ಸಮಿತಿಯೊಂದನ್ನು ರಚನೆ ಮಾಡಿದ್ದರು. ಸರ್ಕಾರಿ ಶಾಲೆಯಲ್ಲಿ ಓದಿದವರು ವೈದ್ಯಕೀಯ ಕೋರ್ಸ್‌ಗಳಿಗೆ ಸೇರುವ ಸಂಖ್ಯೆ ಕಡಿಮೆ ಆಗಲು ಕಾರಣವೇನು? ಎಂದು ಅಧ್ಯಯನ ನಡೆಸಲು ಸಮಿತಿ ರಚನೆ ಮಾಡಲಾಗಿತ್ತು.

      Government School Students To Get Reservation In Medical Admissions

      ಈ ಸಮಿತಿಯು ನೀಡಿದ ಅಧ್ಯಯನ ವರದಿ, ಶಿಫಾರಸಿನ ಆಧಾರದ ಮೇಲೆ ಶೇ 10ರಷ್ಟು ಮೀಸಲಾತಿ ನೀಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಈಗಿರುವ ಮೀಸಲಾತಿಗಳ ಜೊತೆಗೆ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿದವರಿಗೆ ಶೇ 10ರ ಮೀಸಲಾತಿ ನೀಡಲಾಗುತ್ತದೆ.

      ನೀಟ್ ಪರೀಕ್ಷೆಗಳು ಆರಂಭವಾದ ಬಳಿಕ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿದವರು ವೈದ್ಯಕೀಯ ಕೋರ್ಸ್‌ಗಳಿಗೆ ಸೇರುವುದು ಕಡಿಮೆಯಾಗಿತ್ತು. ಆದ್ದರಿಂದ, ಮೀಸಲಾತಿ ಜಾರಿಗೆ ತರಲಾಗುತ್ತದೆ ಎಂದು ಕೆ. ಪಳನಿಸ್ವಾಮಿ ಹೇಳಿದ್ದರು. ಈಗ ಸಂಪುಟ ಸಭೆಯಲ್ಲಿ ಇದಕ್ಕೆ ಅನುಮೋದನೆ ನೀಡಲಾಗಿದೆ.

      ಕಳೆದ ಕೆಲವು ವರ್ಷಗಳಿಂದ ಸರ್ಕಾರಿ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣ ಕೋರ್ಸ್‌ಗೆ ಸೇರುವುದು ಕಡಿಮೆ ಆಗಿತ್ತು. 2016ರಲ್ಲಿ 34 ವಿದ್ಯಾರ್ಥಿಗಳು, 2017ರಲ್ಲಿ 7 ಮತ್ತು 2018ರಲ್ಲಿ 5 ವಿದ್ಯಾರ್ಥಿಗಳು ಸೇರಿದ್ದರು. 2019ರಲ್ಲಿ ಕೇವಲ ಇಬ್ಬರು ಸೇರಿದ್ದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+