• search
  • Live TV
ಚೆನ್ನೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

Explained: ಕೊರೊನಾ ನಿಯಂತ್ರಿಸಲು ಸರ್ಕಾರದಿಂದ ಹೊಸ ನಿರ್ಬಂಧ

|

ಚೆನ್ನೈ, ಏಪ್ರಿಲ್ 08: ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು ಭಾರತೀಯರಲ್ಲಿ ನಡುಕ ಹುಟ್ಟಿಸುವ ಮಟ್ಟಕ್ಕೆ ತಲುಪಿದೆ. ದೇಶದಲ್ಲಿ ಮತ್ತೊಂದು ಸುತ್ತಿನ ಲಾಕ್‌ಡೌನ್ ಜಾರಿಗೆ ಬರುತ್ತದೆಯೇ ಎಂಬ ಬಗ್ಗೆ ಚರ್ಚೆ ಶುರುವಾಗುತ್ತಿದೆ. ಇದರ ಮಧ್ಯೆ ಮನೆ ಮನೆಗೆ ತೆರಳಿ ಕೊವಿಡ್-19 ಸೋಂಕಿತ ತಪಾಸಣೆ ನಡೆಸಲಾಗುತ್ತಿದೆ.

ತಮಿಳುನಾಡು ಸರ್ಕಾರವು ಕೊವಿಡ್-19 ಸೋಂಕು ಹರಡುವಿಕೆಗೆ ಕಡಿವಾಣ ಹಾಕುವ ಉದ್ದೇಶದಿಂದ ನಿರ್ಬಂಧಗಳನ್ನು ಜಾರಿಗೊಳಿಸಿದೆ. ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. ಸಾರ್ವಜನಿಕ ಪ್ರದೇಶಗಳಲ್ಲಿ ಗುಂಪು ಸೇರುವುದಕ್ಕೆ ನಿರ್ಬಂಧ ವಿಧಿಸಲಾಗಿದೆ.

ಕೊರೊನಾ ಕರಾಳತೆ: ಇದು ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದ ಕಥೆ?

ತಮಿಳುನಾಡಿನಲ್ಲಿ 234 ವಿಧಾನಸಭಾ ಕ್ಷೇತ್ರಗಳಿಗೆ ಕಳೆದ ಏಪ್ರಿಲ್ 6ರಂದು ಒಂದೇ ಹಂತದಲ್ಲಿ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದೆ. ಇದರ ಬೆನ್ನಲ್ಲೇ ರಾಜ್ಯದಲ್ಲಿ ಕೊವಿಡ್-19 ನಿಯಂತ್ರಣಕ್ಕೆ ಸಾಕಷ್ಟು ನಿಯಮ ಮತ್ತು ನಿರ್ಬಂಧಗಳನ್ನು ವಿಧಿಸಿದೆ. ರಾಜ್ಯ ಸರ್ಕಾರದ ವಿಧಿಸಿರುವ ನಿರ್ಬಂಧಗಳೇನು, ಯಾವ ಯಾವ ವಲಯಗಳ ಮೇಲೆ ಯಾವ ಯಾವ ನಿರ್ಬಂಧಗಳನ್ನು ಹಾಕಲಾಗಿದೆ. ರಾಜ್ಯ ಮತ್ತು ದೇಶದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಏರಿಳಿತ ಹೇಗಿದೆ ಎನ್ನುವುದರ ಕುರಿತು ಒಂದು ವರದಿಗಾಗಿ ಮುಂದೆ ಓದಿ.

ತಮಿಳುನಾಡು ಸರ್ಕಾರದ ನಿರ್ಬಂಧಗಳ ಪಟ್ಟಿಯಲ್ಲಿ ಏನೇನಿದೆ?

ತಮಿಳುನಾಡು ಸರ್ಕಾರದ ನಿರ್ಬಂಧಗಳ ಪಟ್ಟಿಯಲ್ಲಿ ಏನೇನಿದೆ?

- ಹಬ್ಬ ಹರಿದಿನ ಮತ್ತು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಜನರು ಸೇರುವಂತಿಲ್ಲ

- ಚೆನ್ನೈನ ಕೊಯಂಬೇಡು ಮಾರುಕಟ್ಟೆಯಲ್ಲಿ ಹಣ್ಣು, ತರಕಾರಿಗಳ ಚಿಲ್ಲರೇ ವ್ಯಾಪಾರ ಸಂಪೂರ್ಣ ಸ್ಥಗಿತ

- ತಮಿಳುನಾಡಿನಲ್ಲಿ ಚೆನ್ನೈ ನಗರ ಸಾರಿಗೆ ಸೇರಿದಂತೆ ರಾಜ್ಯ ಸಾರಿಗೆ ಬಸ್ ಗಳಲ್ಲಿ ನಿಂತು ಪ್ರಯಾಣಿಸುವ ಪ್ರಯಾಣಿಕರಿಗೆ ಅವಕಾಶವಿಲ್ಲ

- ನೆರೆ ರಾಜ್ಯಗಳಾದ ಕರ್ನಾಟಕ, ಆಂಧ್ರ ಪ್ರದೇಸ, ಪುದುಚೇರಿ ಕೇಂದ್ರಾಡಳಿತ ಪ್ರದೇಶಕ್ಕೆ ಬಸ್ ಸಂಚಾರ ನಡೆಯುತ್ತಿದ್ದು, ನಿಂತು ಪ್ರಯಾಣಿಸುವುದಕ್ಕೆ ಅನುಮತಿಯಿಲ್ಲ

- ತರಕಾರಿ ಮಾರುಕಟ್ಟೆ, ದಿನಸಿ ಅಂಗಡಿ, ಶಾಪಿಂಗ್ ಮಾಲ್, ದೊಡ್ಡ ಶೋ ರೂಮ್, ಬಟ್ಟೆ ಅಂಗಡಿ ಮತ್ತು ದೊಡ್ಡ ಪ್ರಮಾಣದ ಚಿನ್ನದ ಅಂಗಡಿಗಳಲ್ಲೂ ಕೂಡಾ ಶೇ.50ರಷ್ಟು ಗ್ರಾಹಕರ ಪ್ರವೇಶಕ್ಕೆ ಮಾತ್ರ ಅವಕಾಶ ನೀಡಲಾಗಿದೆ

- ರಾತ್ರಿ 11 ಗಂಟೆವರೆಗೂ ರೆಸ್ಟೋರೆಂಟ್, ಹೋಟೆಲ್, ಟೀ ಅಂಗಡಿಗಳು ತೆರೆಯಲಿದ್ದು, ಶೇ.50ರಷ್ಟು ಜನರ ಪ್ರವೇಶಕ್ಕೆ ಮಾತ್ರ ಅವಕಾಶವಿದೆ. ಇದರ ಜೊತೆ ಪಾರ್ಸೆಲ್ ತೆಗೆದುಕೊಂಡು ಹೋಗುವುದಕ್ಕೆ ಅನುಮತಿ ನೀಡಲಾಗಿದೆ

- ಮನರಂಜನೆ ಕ್ಲಬ್, ಮ್ಯೂಸಿಂ, ಉದ್ಯಾನವನ, ಶಾಪಿಂಗ್ ಮಾಲ್, ಮಲ್ಟಿಫ್ಲೆಕ್ಸ್, ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಜನರಿಗೆ ಮಾತ್ರ ಅವಕಾಶವಿದೆ

- ಮದುವೆ ಮತ್ತು ಅಂತ್ಯಸಂಸ್ಕಾರಗಳಲ್ಲಿ ಕೇವಲ 100 ಜನರ ಭಾಗವಹಿಸುವಿಕೆಗೆ ಮಾತ್ರ ಅನುಮತಿ

- ಸಾಮಾಜಿಕ, ರಾಜಕೀಯ, ಶಿಕ್ಷಣ, ಮನರಂಜನೆ, ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ 200 ಜನ ಭಾಗವಹಿಸುವುದಕ್ಕೆ ಅವಕಾಶವಿದೆ

- ಟಿವಿ ಮತ್ತು ಸಿನಿಮಾ ಶೂಟಿಂಗ್ ನಡೆಸುವುದಕ್ಕೆ ಅನುಮತಿ ನೀಡಲಾಗಿದೆ. ಆದರೆ ಪ್ರತಿಯೊಬ್ಬರು ಕೊವಿಡ್-19 ಸೋಂಕಿನ ಆರ್ ಟಿ-ಪಿಸಿಆರ್ ಪರೀಕ್ಷೆ ಹಾಗೂ ಲಸಿಕೆ ಪಡೆದುಕೊಂಡಿರುವ ಬಗ್ಗೆ ನಿರ್ಮಾಪಕರು ಖಚಿತಪಡಿಸಬೇಕು

- ಆಟೋ ರಿಕ್ಷಾದಲ್ಲಿ ಕೇವಲ ಇಬ್ಬರು ಹಾಗೂ ಟ್ಯಾಕ್ಸಿಗಳಲ್ಲಿ ಮೂವರ ಪ್ರಯಾಣಕ್ಕೆ ಮಾತ್ರ ಅನುಮತಿ

- ಬೇರೆ ರಾಜ್ಯಗಳಿಂದ ಆಗಮಿಸುವ ಪ್ರಯಾಣಿಕರಿಗೆ ಈ-ಪಾಸ್ ವ್ಯವಸ್ಥೆ ಜಾರಿ

ಅಪಾಯಕಾರಿ ವಲಯಗಳಲ್ಲಿ ಲಾಕ್‌ಡೌನ್ ನಿಯಮ ಜಾರಿ

ಅಪಾಯಕಾರಿ ವಲಯಗಳಲ್ಲಿ ಲಾಕ್‌ಡೌನ್ ನಿಯಮ ಜಾರಿ

ಕೊರೊನಾವೈರಸ್ ಸೋಂಕಿನ 2ನೇ ಅಲೆಯು ವೇಗವಾಗಿ ಹರಡುತ್ತಿರುವ ಹಿನ್ನೆಲೆ ಅಂತಾರಾಷ್ಟ್ರೀಯ ವಿಮಾನಗಳ ಮೇಲಿನ ನಿರ್ಬಂಧವನ್ನು ಮುಂದುವರಿಸಲಾಗಿದೆ. ಇನ್ನೊಂದು ಕಡೆ ಕಂಟೇನ್ಮೆಂಟ್ ಝೋನ್ ಗಳಲ್ಲಿ ಸಂಪೂರ್ಣ ಲಾಕ್‌ಡೌನ್ ನಿಯಮವನ್ನು ಜಾರಿಗೊಳಿಸಲಾಗುವುದು ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಕೊರೊನಾ ಲಸಿಕೆ ಹಾಕಿಸಿಕೊಂಡವರಿಗೆ ಬಂಗಾರದ ಮೂಗುತಿ ಉಚಿತ!

ಏಳು ರಾಜ್ಯಗಳಲ್ಲಿ ಅತಿಹೆಚ್ಚು ಕೊರೊನಾ ಅಪಾಯ

ಏಳು ರಾಜ್ಯಗಳಲ್ಲಿ ಅತಿಹೆಚ್ಚು ಕೊರೊನಾ ಅಪಾಯ

ಭಾರತದಲ್ಲಿ ಏಳು ರಾಜ್ಯಗಳು ಕೊರೊನಾವೈರಸ್ ಸೋಂಕಿನಿಂದ ಹೆಚ್ಚು ಅಪಾಯವನ್ನು ಎದುರಿಸುತ್ತಿವೆ. ಮಹಾರಾಷ್ಟ್ರ, ಪಂಜಾಬ್, ಮಧ್ಯಪ್ರದೇಶ, ಗುಜರಾತ್, ಕರ್ನಾಟಕ, ಛತ್ತೀಸ್ ಗಢ, ತಮಿಳುನಾಡು ಮತ್ತು ದೆಹಲಿಯಲ್ಲಿ ಅತಿಹೆಚ್ಚು ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗುತ್ತಿವೆ. ಸಾಮಾಜಿಕ ಅಂತರ ಕಾಯ್ದುಕೊಳ್ಳದಿರುವುದು, ಮಾಸ್ಕ್ ಧರಿಸುವ ಬಗ್ಗೆ ತೋರಿದ ನಿರ್ಲಕ್ಷ್ಯದಿಂದ ಸೋಂಕು ಹರಡುವಿಕೆ ಪ್ರಮಾಣ ಗಣನೀಯವಾಗಿ ಏರಿಕೆ ಕಂಡಿದೆ.

ಮನೆ ಬಾಗಿಲಿಗೆ ತೆರಳಿ ಕೊವಿಡ್-19 ತಪಾಸಣೆ

ಮನೆ ಬಾಗಿಲಿಗೆ ತೆರಳಿ ಕೊವಿಡ್-19 ತಪಾಸಣೆ

ತಮಿಳುನಾಡಿನಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ನಿಯಮಗಳನ್ನು ಜಾರಿಗೊಳಿಸುತ್ತೇವೆ. ನಿಯಮಗಳ ಜಾರಿಗೊಳಿಸುವುದಕ್ಕೆ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ. ತಜ್ಞರ ಸಮಿತಿ ಸಭೆ ನಂತರ ತೀರ್ಮಾನ ತೆಗೆದುಕೊಳ್ಳಲಿದ್ದು, ನಾಗರಿಕರು ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ರಾಜ್ಯದಲ್ಲಿ ಪ್ರತಿ ಮನೆ ಮನೆಗೆ ತೆರಳಿ ಕೊರೊನಾವೈರಸ್ ಸೋಂಕಿನ ತಪಾಸಣೆ ನಡೆಸಲಾಗುವುದು. ಇದರ ಜೊತೆ ಅಗತ್ಯ ವಸ್ತುಗಳನ್ನು ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಮಿಳುನಾಡು ಆರೋಗ್ಯ ಕಾರ್ಯದರ್ಶಿ ಜೆ ರಾಧಾಕೃಷ್ಣನ್ ಸ್ಪಷ್ಟವಾಗಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಹತ್ತೇ ದಿನದಲ್ಲಿ ಸೋಂಕಿತರ ಸಂಖ್ಯೆ ಇಮ್ಮಡಿ

ರಾಜ್ಯದಲ್ಲಿ ಹತ್ತೇ ದಿನದಲ್ಲಿ ಸೋಂಕಿತರ ಸಂಖ್ಯೆ ಇಮ್ಮಡಿ

ಕೊರೊನಾವೈರಸ್ ಸೋಂಕಿನ ಹರಡುವಿಕೆ ವೇಗ ಹೆಚ್ಚುತ್ತಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ. ತಮಿಳುನಾಡಿನಲ್ಲಿ ಮಾರ್ಚ್ 28ರಂದು 13,070 ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿದ್ದು, ಏಪ್ರಿಲ್ 7ರ ವೇಳೆಗೆ ಈ ಸಂಖ್ಯೆ ಡಬಲ್ ಆಗಿದೆ. ಕೊವಿಡ್-19 ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ ಇದೀಗ 27,743ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಕೊರೊನಾವೈರಸ್ ಸೋಂಕಿನ ಹೊಸ ದಾಖಲೆ

ದೇಶದಲ್ಲಿ ಕೊರೊನಾವೈರಸ್ ಸೋಂಕಿನ ಹೊಸ ದಾಖಲೆ

ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಹೊಸ ದಾಖಲೆ ಬರೆದಿದೆ. ಕಳೆದ 24 ಗಂಟೆಗಳಲ್ಲಿ 1,26,789 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1,29,28,574ಕ್ಕೆ ಏರಿಕೆಯಾಗಿದೆ. ಒಂದು ದಿನದಲ್ಲಿ 59,258 ಮಂದಿ ಗುಣಮುಖರಾಗಿದ್ದು, ಈವರೆಗೂ 1,18,51,393 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಂದು ದಿನದಲ್ಲಿ 685 ಮಂದಿ ಕೊವಿಡ್-19 ಸೋಂಕಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 1,66,862ಕ್ಕೆ ಏರಿಕೆಯಾಗಿದೆ. ಉಳಿದಂತೆ ಸಕ್ರಿಯ ಪ್ರಕರಣಗಳ ಸಂಖ್ಯೆ 9,10,319ಕ್ಕೆ ಏರಿಕೆಯಾಗಿದೆ.

English summary
Govt Announces Stricter Corona Curbs From April 10 In This State: Here's What's Allowed And What's Not.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X