ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶೀಘ್ರದಲ್ಲಿ ದೇಶದ ಪ್ರತಿಯೊಬ್ಬ ನಾಗರಿಕನಿಗೂ ಕೊರೊನಾ ಲಸಿಕೆ ದೊರೆಯಲಿದೆ: ಹರ್ಷವರ್ಧನ್

|
Google Oneindia Kannada News

ಚೆನ್ನೈ, ಜನವರಿ 08: ಅತಿ ಶೀಘ್ರದಲ್ಲಿ ದೇಶದ ಪ್ರತಿಯೊಬ್ಬ ನಾಗರಿಕನಿಗೂ ಕೊರೊನಾ ಲಸಿಕೆ ಲಭ್ಯವಾಗಲಿದೆ ಎಂದು ಆರೋಗ್ಯ ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ.
ದೇಶದಾದ್ಯಂತ ಇಂದು 2ನೇ ಸುತ್ತಿನ ಲಸಿಕೆ ತಾಲೀಮು ಕಾರ್ಯಕ್ರಮ ಆರಂಭವಾಗಿರುವ ಹಿನ್ನೆಲೆಯಲ್ಲಿ ಸಚಿವ ಹರ್ಷವರ್ಧನ್ ಅವರು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇನ್ನು ಕೆಲವೇ ದಿನಗಳಲ್ಲಿ ದೇಶದ ಪ್ರತೀ ನಾಗರೀಕನಿಗೂ ಕೊರೊನಾ ಲಸಿಕೆ ಲಭ್ಯವಾಗಲಿದೆಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಅವರು ಶುಕ್ರವಾರ ಹೇಳಿದ್ದಾರೆ.

ಲಸಿಕೆ ಕುರಿತು ಯಾವುದೇ ಮಾಹಿತಿಯನ್ನು ಸರ್ಕಾರ ತಳಮಟ್ಟದಿಂದ ರಾಷ್ಟ್ರೀಯ ಮಟ್ಟದವರೆಗೂ ಜನರಿಗೆ ನೀಡಲಿದೆ. ಲಸಿಕೆ ತಾಲೀಮು ಮೂಲಕ ಲಕ್ಷಾಂತರ ಆರೋಗ್ಯ ಕಾರ್ಯಕರ್ತರಿಗೆ ತರಬೇತಿ ನೀಡಲಾಗಿದೆ. ಪ್ರಕ್ರಿಯೆಗಳು ಇನ್ನೂ ಮುಂದುವರೆದಿವೆ ಎಂದು ತಿಳಿಸಿದ್ದಾರೆ.

Harsh Vardhan Says Inoculation To Start In Few Days

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತ್ಯಂತ ಕಡಿಮೆ ಅವಧಿಯಲ್ಲಿ ಲಸಿಕೆ ಅಭಿವೃದ್ಧಿಯಲ್ಲಿ ಭಾರತ ಉತ್ತಮ ಕಾರ್ಯ ಸಾಧಿಸಿದೆ. ಇನ್ನು ಕಳವೇ ದಿನಗಳಲ್ಲಿ ದೇಶದ ಪ್ರತೀ ನಾಗರೀಕರನಿಗೂ ಲಸಿಕೆ ವಿತರಣೆ ಮಾಡಲಾಗುತ್ತದೆ. ಲಸಿಕೆ ಲಭ್ಯವಾಗುತ್ತಿದ್ದಂತೆಯೇ ಆರೋಗ್ಯ ಕಾರ್ಯಕರ್ತರಿಗೆ ಮೊದಲು ಆದ್ಯತೆ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ಕರ್ನಾಟಕದ 263 ಕಡೆಗಳಲ್ಲಿ ಲಸಿಕೆ ವಿತರಣೆಯ ತಾಲೀಮು (ಡ್ರೈ ರನ್) ನಡೆಯಲಿದೆ. ಲಸಿಕೆ ಬಂದ ಬಳಿಕ ವಿತರಣೆಯ ಕಾರ್ಯ ಜನಾಂದೋಲನದಂತೆ ನಡೆಯಬೇಕಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

English summary
In a bid to assess its preparedness, the second dry run for the rollout of coronavirus vaccination began on Friday in all districts across the country – except Uttar Pradesh and Haryana. Union Health Minister Dr Harsh Vardhan today visited Rajiv Gandhi Government General Hospital in Chennai to review the dry run for administering the Covid-19 vaccine.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X