• search
  • Live TV
ಚೆನ್ನೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಶಿವಕುಮಾರ ಶ್ರೀಗಳ ಆರೋಗ್ಯ ವಿಚಾರಿಸಿದ ಎಚ್.ಡಿ.ಕುಮಾರಸ್ವಾಮಿ

|

ಚೆನ್ನೈ, ಡಿಸೆಂಬರ್ 14 : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಶುಕ್ರವಾರ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗಳ ಆರೋಗ್ಯ ವಿಚಾರಿಸಿದರು. ಚೆನ್ನೈನ ರೇಲಾ ಆಸ್ಪತ್ರೆಯಲ್ಲಿ ಶ್ರೀಗಳಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.

ಬೆಳಗಾವಿಯಿಂದ ವಿಶೇಷ ವಿಮಾನದಲ್ಲಿ ಚೆನ್ನೈಗೆ ಎಚ್.ಡಿ.ಕುಮಾರಸ್ವಾಮಿ ತಲುಪಿದರು. ರೇಲಾ ಇನ್ಸ್ಟಿಟ್ಯೂಟ್ ಎಂಡ್ ಮೆಡಿಕಲ್ ಸೆಂಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶ್ರೀ ಶಿವಕುಮಾರ ಮಹಾಸ್ವಾಮಿಗಳ ಆರೋಗ್ಯ ವಿಚಾರಿಸಿದರು.

ನಾಲ್ಕು ತಾಸಿನ ಶಸ್ತ್ರಚಿಕಿತ್ಸೆ ತಡೆದುಕೊಂಡ ಸಿದ್ದಗಂಗಾ ಶ್ರೀಗಳು

'ಶ್ರೀಗಳು ಶೀಘ್ರವೇ ಗುಣಮುಖರಾಗಿ ಜನತಾ ಜನಾರ್ದನನ ಸೇವೆಯಲ್ಲಿ ತೊಡಗಲಿ. ಶ್ರೀಗಳು ಮಾಡುತ್ತಿರುವ ತ್ರಿವಿಧ ದಾಸೋಹ ಕೈಂಕರ್ಯ ಇಡೀ ದೇಶಕ್ಕೆ ಮಾದರಿಯಾಗಿದ್ದು ಅವರ ಆಶೀರ್ವಾದ ಎಲ್ಲರ ಮೇಲೂ ನಿರಂತರವಾಗಿರಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ತಿಳಿಸಿದರು.

ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ, ವಾರ್ಡ್‌ಗೆ ಶಿಫ್ಟ್‌

'ಶ್ರೀಗಳಿಗೆ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ಮಾಡಿ ದೊಡ್ಡ ಸಾಧನೆ ಮಾಡಿರುವ ಡಾ.ರೇಲಾ ಅವರಿಗೆ ನಾನು ನಾಡಿನ ವತಿಯಿಂದ ಅಭಿನಂದನೆ ಸಲ್ಲಿಸುತ್ತೇನೆ. ಶ್ರೀಗಳು ಎಂಟು ಹತ್ತು ದಿನಗಳಲ್ಲಿ ಚೇತರಿಸಿಕೊಂಡು ತುಮಕೂರಿಗೆ ಮರಳಲಿದ್ದಾರೆ' ಎಂದು ಕುಮಾರಸ್ವಾಮಿ ಹೇಳಿದರು.

ಮತ್ತೆ ಐಸಿಯೂಗೆ ಶಿಫ್ಟ್‌ : ಶಿವಕುಮಾರ ಶ್ರೀಗಳನ್ನು ಗುರುವಾರ ಸ್ಪೆಷಲ್ ವಾರ್ಡ್‌ಗೆ ಶಿಫ್ಟ್ ಮಾಡಲಾಗಿತ್ತು. ಆದರೆ, ಶುಕ್ರವಾರ ಪುನಃ ಶ್ರೀಗಳನ್ನು ಐಸಿಯೂಗೆ ಶಿಫ್ಟ್‌ ಮಾಡಲಾಗಿದೆ.

English summary
Karnataka Chief Minister H.D.Kumaraswamy on December 14, 2018 visited Rela hospital Chennai to enquire about health of Shivakumar Swamiji of the Siddaganga Mutt.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X