ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತಮಿಳುನಾಡಿನಲ್ಲಿ ಭಾರಿ ಮಳೆ: 22 ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ

|
Google Oneindia Kannada News

ಚೆನ್ನೈ, ನವೆಂಬರ್ 26: ತಮಿಳುನಾಡಿನಲ್ಲಿ ಮಳೆಯ ರೌದ್ರನರ್ತನ ಮುಂದುವರಿದಿದೆ. ರಾಜ್ಯದ ಐದು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.

ತಮಿಳುನಾಡಿನ ತಿರುನೆಲ್ವೇಲಿ, ತೂತುಕುಡಿ, ರಾಮನಾಥಪುರಂ, ಪುದುಕೊಟ್ಟೈ ಮತ್ತು ನಾಗಪಟ್ಟಣಂ ಜಿಲ್ಲೆಗಳಲ್ಲಿ ಅತಿಹೆಚ್ಚು ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. 22 ಜಿಲ್ಲೆಗಳಲ್ಲಿ ಸುರಿದ ಧಾರಾಕಾರ ಮಳೆಯಿಂದ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ-ಕಾಲೇಜುಗಳನ್ನು ಬಂದ್ ಮಾಡಲಾಗಿದೆ.

ಚಂಡಮಾರುತ ಪ್ರಭಾವ: ತಮಿಳುನಾಡಿನಲ್ಲಿ ನ.30ರವರೆಗೆ ಭಾರಿ ಮಳೆಚಂಡಮಾರುತ ಪ್ರಭಾವ: ತಮಿಳುನಾಡಿನಲ್ಲಿ ನ.30ರವರೆಗೆ ಭಾರಿ ಮಳೆ

ರಾಜ್ಯದಲ್ಲಿ ಸುರಿದ ನಿರಂತರ ಮಳೆಯಿಂದಾಗಿ ಸಾಕಷ್ಟು ಪ್ರಮಾಣದ ಬೆಳೆ ಹಾನಿಯಾಗಿದೆ. ಹಲವು ಪ್ರದೇಶಗಳಲ್ಲಿ ಕಟ್ಟಡಗಳು ಮುಳುಗಡೆಯಾಗಿದ್ದರೆ, ರಸ್ತೆಗಳು ಜಲಾವೃತಗೊಂಡಿದ್ದು, ಪ್ರವಾಹ ಪರಿಸ್ಥಿತಿಯನ್ನು ಸೃಷ್ಟಿಸಿವೆ.

Heavy Rain Alert: Schools, Colleges Closed In 22 Tamil Nadu Districts

ತಮಿಳುನಾಡು, ಕೇರಳ, ಕರ್ನಾಟಕದಲ್ಲಿ ಮಳೆ:

ಚಂಡಮಾರುತ ಅಪ್ಪಳಿಸಲಿರುವ ಹಿನ್ನೆಲೆಯಲ್ಲಿ ನವೆಂಬರ್ 30ರವರೆಗೆ ತಮಿಳುನಾಡು, ಕರ್ನಾಟಕ ಹಾಗೂ ಆಂಧ್ರಪ್ರದೇಶದಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶುಕ್ರವಾರ ತಮಿಳುನಾಡು ಮತ್ತು ಕೇರಳದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಡಿಸೆಂಬರ್ 15ರವರೆಗೆ ರಾಜ್ಯಾದ್ಯಂತ ಭಾರೀ ಮಳೆಯಾಗುವ ಮುನ್ಸೂಚನೆಯಿದೆ.

ತಮಿಳು‌ನಾಡು, ಆಂಧ್ರಪ್ರದೇಶದಲ್ಲಿ ಭಾರೀ ಮಳೆಯಾಗಲಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತವಾಗಿ ಬದಲಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ತಮಿಳುನಾಡು, ಕೇರಳ, ಆಂಧ್ರ ಕರಾವಳಿಯಲ್ಲಿ ಹೆಚ್ಚು ಮಳೆಯಾಗಲಿದ್ದು ಪುದುಚೆರಿ, ಚೆನ್ನೈ, ನೆಲ್ಲೂರಿನಲ್ಲಿ‌ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ನೆರೆ ರಾಜ್ಯಗಳಲ್ಲಿ ಮಳೆ ಹಿನ್ನೆಲೆ ಇಂದಿನಿಂದ ಕರ್ನಾಟಕದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ.

22 ಜಿಲ್ಲೆಗಳಲ್ಲಿ ಶಾಲಾ-ಕಾಲೇಜು ರಜೆ ಘೋಷಣೆ:

ತಮಿಳುನಾಡಿನಲ್ಲಿ ಕಳೆದ ತಿಂಗಳಿನಿಂದ ಸುರಿಯುತ್ತಿರುವ ಸತತ ಮಳೆಯ ಹಿನ್ನೆಲೆಯಲ್ಲಿ ತೂತುಕುಡಿ, ಕನ್ಯಾಕುಮಾರಿ, ತಿರುನಲ್ವೇಲಿ, ಕಡಲೂರು, ತಿರುವರೂರು, ತೆಂಕಶಿ ಮತ್ತು ವಿಲ್ಲುಪುರಂ ಸೇರಿದಂತೆ 22 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಶಿಕ್ಷಣ ಸಂಸ್ಥೆಗಳಿಗೂ ರಜೆ ಘೋಷಿಸಲಾಗಿದೆ.

ತಮಿಳುನಾಡಿನಲ್ಲಿ ಸುರಿಯುತ್ತಿರುವ ಮಳೆ:

ತಮಿಳುನಾಡಿನ ತೂತುಕುಡಿ ನಗರದಲ್ಲಿ ಶುಕ್ರವಾರ ಬೆಳಗ್ಗೆ 5:30 ರವರೆಗೆ 25.9 ಸೆಂ.ಮೀ ಮಳೆಯಾಗಿದ್ದರೆ, ಪುದುಚೇರಿಯ ಕಾರೈಕಲ್‌ನಲ್ಲಿ 11.9 ಸೆಂ.ಮೀ ಮಳೆಯಾಗಿದೆ. ತೂತುಕುಡಿಯಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದರ ಹೊರತಾಗಿ ಭಾರಿ ಮಳೆಯ ಎಚ್ಚರಿಕೆ ನೀಡಿದ ಹಿನ್ನೆಲೆ ತೀವ್ರ ಬೆಳೆ ಹಾನಿ, ಮರಗಳ ಬುಡ ಸಮೇತ ಕಿತ್ತುಹಾಕುವುದು, ಜಾನುವಾರುಗಳ ರಕ್ಷಣೆ ಮತ್ತು ನದಿಗಳು ಹಾಗೂ ಕೆರೆಗಳಲ್ಲಿ ನೀರಿನ ಮಟ್ಟ ಹೆಚ್ಚಳದ ಬಗ್ಗೆ ಅಧಿಕಾರಿಗಳು ಕ್ರಮಕ್ಕೆ ಮುಂದಾಗಿದ್ದಾರೆ.

ರಾಜ್ಯದಲ್ಲಿ ಶೇ.68ರಷ್ಟು ಹೆಚ್ಚುವರಿ ಮಳೆ:

ತಮಿಳುನಾಡಿನಲ್ಲಿ ಪ್ರತಿಬಾರಿ ಮುಂಗಾರು ಸಮಯದಲ್ಲಿ ಸುರಿಯುತ್ತಿದ್ದ ಮಳೆಗಿಂತ ಈ ಬಾರಿ ಶೇ.68ರಷ್ಟು ಹೆಚ್ಚುವರಿ ಮಳೆಯಾಗಿದೆ. ಇದರಿಂದಾಗಿ ರಾಜ್ಯದ 50,000 ಹೆಕ್ಟೇರ್‌ಗಿಂತಲೂ ಹೆಚ್ಚು ಪ್ರದೇಶದಲ್ಲಿ ಬೆಳೆದ ಬೆಳೆಗಳು ಸಂಪೂರ್ಣ ಹಾನಿಗೊಳಗಾಗಿವೆ. ಅಕ್ಟೋಬರ್‌ನಿಂದ ಸುರಿಯುತ್ತಿರುವ ಭಾರೀ ಮಳೆಗೆ 2,300 ಕ್ಕೂ ಹೆಚ್ಚು ಮನೆಗಳು ಹಾನಿಗೊಳಗಾಗಿವೆ. ನವೆಂಬರ್ ಎರಡನೇ ವಾರದಲ್ಲಿ ಸತತ ಎರಡು ಬಾರಿ ಮಳೆ ಸುರಿದಿದ್ದರಿಂದ ರಾಜ್ಯದ ಮೂರನೇ ಎರಡರಷ್ಟು ಭಾಗ ಜಲಾವೃತಗೊಂಡಿದೆ.

2,600 ಕೋಟಿ ಪರಿಹಾರ ಕೋರಿದ ರಾಜ್ಯ:

ಭಾರಿ ಮಳೆಯಿಂದ ರಾಜ್ಯದಲ್ಲಿ ಸೃಷ್ಟಿಯಾಗಿರುವ ಪ್ರವಾಹ ಪರಿಸ್ಥಿತಿ ಹಿನ್ನೆಲೆ ಕೇಂದ್ರದಿಂದ 2600 ಕೋಟಿ ರೂಪಾಯಿ ಪರಿಹಾರ ನೀಡುವಂತೆ ತಮಿಳುನಾಡು ಸರ್ಕಾರ ಕೇಳಿದೆ. ಈ ಹಿನ್ನೆಲೆ ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಿಗೆ ಕೇಂದ್ರದ ತಂಡವು ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಇನ್ನು, ನೆರೆಯ ರಾಜ್ಯಗಳ ನೀರು ಕೂಡ ತಮಿಳುನಾಡಿನಲ್ಲಿ ಪ್ರವಾಹ ಪರಿಸ್ಥಿತಿ ಹೆಚ್ಚಾಗುವುದಕ್ಕೆ ಕಾರಣವಾಗಿದೆ. ಏಕೆಂದರೆ ನೆರೆಯ ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಭಾರಿ ಮಳೆಯಾದ ಹಿನ್ನೆಲೆ ಜಲಾಶಯಗಳಿಂದ ನೀರು ಹೊರ ಬಿಟ್ಟಿದ್ದು, ಹಲವು ಪ್ರದೇಶಗಳ ಮೇಲೆ ಪರಿಣಾಮ ಬೀರಿದೆ.

Recommended Video

ಪಾಕ್ ಸಚಿವನ ಅತಿ ಬುದ್ಧಿವಂತಿಕೆಗೆ ಶೋಕಸಾಗರದಲ್ಲಿ ಮುಳುಗಿದ ಶುಂಠಿ | Oneindia Kannada

English summary
Heavy Rain Alert: Schools, Colleges Closed In 22 Tamil Nadu Districts.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X