ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಂದಿನ 5 ದಿನಗಳಲ್ಲಿ ತಮಿಳುನಾಡು, ಪುದುಚೇರಿ ಭಾಗಗಳಲ್ಲಿ ಭಾರೀ ಮಳೆ ಮುನ್ಸೂಚನೆ

|
Google Oneindia Kannada News

ಪುದುಚೇರಿ, ನವೆಂಬರ್ 24: ಕೆಲ ದಿನಗಳಿಂದ ತಮಿಳುನಾಡು ವರುಣನ ಮುನಿಸಿಗೆ ಸಿಲುಕಿ ಹೈರಾಣಾಗಿ ಹೋಗಿದೆ. ಬಿಟ್ಟು ಬಿಡದಂತೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ತಮಿಳಿಗರು ಸುಸ್ತಾಗಿದ್ದಾರೆ. ಅದಾಗಲೇ ಮತ್ತೆ ಐದು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ. ಚೆನ್ನೈನಲ್ಲಿರುವ IMD ಯ ಪ್ರಾದೇಶಿಕ ಹವಾಮಾನ ಕೇಂದ್ರವು ಮುಂದಿನ ಐದು ದಿನಗಳಲ್ಲಿ ತಮಿಳುನಾಡು ಮತ್ತು ಪುದುಚೇರಿಯಲ್ಲಿ ಪ್ರತ್ಯೇಕವಾದ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪ್ರಭಾವದಿಂದ ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳುವ ಸಾಧ್ಯತೆಯಿದೆ ಎಂದು ಐಎಂಡಿ ಬುಧವಾರ ತನ್ನ ಮುನ್ಸೂಚನೆಯಲ್ಲಿ ತಿಳಿಸಿದೆ.

ತಮಿಳುನಾಡಿನಲ್ಲಿ ಮುಂದಿನ 24 ಗಂಟೆಗಳಲ್ಲಿ ರಾಮನಾಥಪುರಂ ಮತ್ತು ನಾಗಪಟ್ಟಣಂ ಜಿಲ್ಲೆಗಳಲ್ಲಿ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬುಧವಾರ ಮತ್ತು ಗುರುವಾರ ಪುದುಚೇರಿಯ ಕಾರೈಕಲ್ ಜೊತೆಗೆ ತಮಿಳುನಾಡಿನ ಮಧುರೈ, ಥೇಣಿ, ಶಿವಗಂಗಾ, ಕನ್ಯಾಕುಮಾರಿ, ಪುತ್ತುಕೊಟ್ಟೈ, ತೆಂಕಶಿ ಮತ್ತು ಕಾವೇರಿ ನದಿ ಮುಖಜ ಭೂಮಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ನವೆಂಬರ್ 27 ಮತ್ತು ನವೆಂಬರ್ 28 ರಂದು ರಾಯಲಸೀಮಾ ಪ್ರದೇಶ ಮತ್ತು ಪೂರ್ವ ಗೋದಾವರಿ ಜಿಲ್ಲೆಯ ಯಾನಂ ಸೇರಿದಂತೆ ಆಂಧ್ರಪ್ರದೇಶದ ದಕ್ಷಿಣ ಕರಾವಳಿಯಲ್ಲಿ ಪ್ರತ್ಯೇಕವಾದ ಅತಿ ಹೆಚ್ಚು ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

"ಇದರ ಪ್ರಭಾವದಿಂದ ಮುಂದಿನ 24 ಗಂಟೆಗಳಲ್ಲಿ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳುವ ಸಾಧ್ಯತೆಯಿದೆ. ಇದು ಪಶ್ಚಿಮ ವಾಯುವ್ಯವಾಗಿ ಶ್ರೀಲಂಕಾ ಮತ್ತು ದಕ್ಷಿಣ ತಮಿಳುನಾಡು ಕರಾವಳಿಯ ಕಡೆಗೆ ಚಲಿಸುವ ಸಾಧ್ಯತೆಯಿದೆ" ಎಂದು IMD ಹೇಳಿಕೆಯಲ್ಲಿ ತಿಳಿಸಿದೆ. IMD ಪ್ರಕಾರ, ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳು, ಕೇರಳ, ತಮಿಳುನಾಡಿನ ಮಾಹೆ ಮತ್ತು ಪುದುಚೇರಿಯ ಕಾರೈಕಾಲ್‌ನಲ್ಲಿ ಮುಂದಿನ ಐದು ದಿನಗಳಲ್ಲಿ ಮಧ್ಯಮ ಮತ್ತು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.

Heavy rain forecast for Tamil Nadu and Puducherry areas over the next 5 days

ಜೊತೆಗೆ ನವೆಂಬರ್ 24 ಮತ್ತು ನವೆಂಬರ್ 25 ರಂದು ಗಂಟೆಗೆ 40-50 ಕಿಮೀ ವೇಗದಲ್ಲಿ ಗಂಟೆಗೆ 60 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯನ್ನು ಉಲ್ಲೇಖಿಸಿ ಹವಾಮಾನ ಇಲಾಖೆ ಮೀನುಗಾರರಿಗೆ ನೈಋತ್ಯ ಬಂಗಾಳ ಕೊಲ್ಲಿ, ಮನ್ನಾರ್ ಕೊಲ್ಲಿ ಮತ್ತು ದಕ್ಷಿಣ ತಮಿಳುನಾಡು ಕರಾವಳಿಗೆ ತೆರಳದಂತೆ ಸೂಚಿಸಿದೆ.

ಇನ್ನೂ ಕಳೆದ ದಿನ ಭಾರೀ ಮಳೆಗೆ ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ 4 ಮನೆಗಳು ಕುಸಿದಿದೆ. ಮಂಗಳವಾರ ಬೆಳಿಗ್ಗೆ ಸುರಿದ ಭಾರೀ ಮಳೆಗೆ ತಮಿಳುನಾಡಿನ ಸೇಲಂ ಜಿಲ್ಲೆಯ ಕರುಂಗಲ್‌ಪಟ್ಟಿಯಲ್ಲಿ ನಾಲ್ಕು ಮನೆಗಳು ಕುಸಿದಿವೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಹದಿಮೂರು ಜನರನ್ನು ರಕ್ಷಿಸಿ ಸೇಲಂನ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ಅಗ್ನಿಶಾಮಕ ದಳದವರು ಅವಶೇಷಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಈಶಾನ್ಯ ಮಾನ್ಸೂನ್‌ನ ಈ ಸಮಯದಲ್ಲಿ ತಮಿಳುನಾಡು ಶೇಕಡಾ 61 ರಷ್ಟು ಅಧಿಕ ಮಳೆಯನ್ನು ದಾಖಲಿಸಿದೆ. ಪುದುಚೇರಿಯಲ್ಲಿ ಅಭೂತಪೂರ್ವ ಮಳೆಯಾಗಿದ್ದು 7,000 ಹೆಕ್ಟೇರ್ ಭತ್ತದ ಗದ್ದೆಗಳು, ತೋಟಗಾರಿಕೆ ಬೆಳೆ ಮತ್ತು ಇತರ ಕೃಷಿ ಉತ್ಪನ್ನಗಳು ಹಾನಿಗೊಳಗಾಗಿವೆ. ಈ ಋತುವಿನಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯು ದಕ್ಷಿಣ ಭಾರತದ ಕೆಲವು ಭಾಗಗಳನ್ನು ಆವರಿಸಿದೆ. ತಮಿಳುನಾಡು ಮತ್ತು ಪುದುಚೇರಿಯನ್ನು ಹೊರತುಪಡಿಸಿ ಆಂಧ್ರಪ್ರದೇಶ, ಕೇರಳ ಮತ್ತು ಕರ್ನಾಟಕದಲ್ಲೂ ಭಾರೀ ಮಳೆಯಾಗುತ್ತಿದೆ. ತಮಿಳುನಾಡಿನಲ್ಲಿ ಮಳೆಯಿಂದ ಆಗುವ ಅನಾಹುತ, ಅವಘಡಗಳು ಹೆಚ್ಚುತ್ತಲೇ ಇವೆ. ಕಳೆದ ಎರಡು ದಿನದಲ್ಲಿ ಮೂವರು ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಇನ್ನು 300ಕ್ಕೂ ಹೆಚ್ಚು ಜಾನುವಾರಗಳು ಸಾವನ್ನಪ್ಪಿವೆ ಎಂದು ಸರ್ಕಾರ ಮಾಹಿತಿ ನೀಡಿದೆ.

English summary
IMD's regional meteorological centre in Chennai has predicted isolated very heavy rainfall in Tamil Nadu and Puducherry over the next five days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X