ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚೆನ್ನೈನಲ್ಲಿ ಭಾರೀ ಮಳೆ; ತಿಳಿಯಬೇಕಾದ 10 ಅಂಶಗಳು

|
Google Oneindia Kannada News

ಬೆಂಗಳೂರು, ನವೆಂಬರ್ 08; ತಮಿಳುನಾಡು ರಾಜಧಾನಿ ಚೆನ್ನೈ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ಜನರನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರ ಮಾಡಲಾಗಿದೆ. ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ ಜನರ ರಕ್ಷಣೆಗಾಗಿ ಎನ್‌ಡಿಆರ್‌ಎಫ್ ತಂಡ ಸಹ ನಿಯೋಜನೆ ಮಾಡಲಾಗಿದೆ.

ಭಾರೀ ಮಳೆ ಹಿನ್ನಲೆಯಲ್ಲಿ ತಮಿಳುನಾಡು ಸರ್ಕಾರ ಜನರ ರಕ್ಷಣೆಗಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಎರಡು ದಿನಗಳ ಕಾಲ ಚೆನ್ನೈ ಸೇರಿದಂತೆ 3 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ದೀಪಾವಳಿ ಹಬ್ಬಕ್ಕೆ ಹೊರಗಡೆ ಹೋದವರು ಚೆನ್ನೈಗೆ ವಾಪಸ್ ಆಗುವುದನ್ನು ಒಂದು ದಿನ ಮುಂದೂಡಿ ಎಂದು ಮನವಿ ಮಾಡಲಾಗಿದೆ.

ಚೆನ್ನೈ ಮಳೆ; 2 ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಚೆನ್ನೈ ಮಳೆ; 2 ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಸೋಮವಾರ ಹಲವು ಸರ್ಕಾರಿ ಕಚೇರಿಗಳು ಮುಚ್ಚಿರಲಿವೆ. ಭಾನುವಾರ ಪ್ರವಾಹ ಪರಿಸ್ಥಿತಿ ಪರಿಶೀಲಿಸಿದ ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್ ಖಾಸಗಿ ಕಂಪನಿಗಳು ರಜೆ ಘೋಷಣೆ ಮಾಡುವಂತೆ ಅಥವ ಮನೆಯಿಂದಲೇ ಕೆಲಸ ಮಾಡುವ ಆಯ್ಕೆ ನೀಡುವಂತೆ ಸೂಚನೆ ನೀಡಿದ್ದಾರೆ.

ಕರ್ನಾಟಕದಲ್ಲಿ 48 ಗಂಟೆಗಳ ಕಾಲ ಭಾರೀ ಮಳೆ ಮುನ್ಸೂಚನೆ ಕರ್ನಾಟಕದಲ್ಲಿ 48 ಗಂಟೆಗಳ ಕಾಲ ಭಾರೀ ಮಳೆ ಮುನ್ಸೂಚನೆ

Heavy Rain In Chennai 10 Points To Know

ಚೆನ್ನೈನ ವಿವಿಧ ಭಾಗಗಳಲ್ಲಿ ಮಳೆಯಾಗುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಮಳೆ ಸುರಿಯುತ್ತಿದೆ. ಭಾರತೀಯ ಹವಾಮಾನ ಇಲಾಖೆ ಸೋಮವಾರ ಸಹ ಮಳೆ ಮುಂದುವರೆಯಲಿದೆ ಎಂದು ಮುನ್ಸೂಚನೆ ನೀಡಿದೆ.

ಮುಂದಿನ 2 ದಿನ ರಾಜ್ಯದ 7 ಜಿಲ್ಲೆಗಳಲ್ಲಿ ಭಾರಿ ಮಳೆಮುಂದಿನ 2 ದಿನ ರಾಜ್ಯದ 7 ಜಿಲ್ಲೆಗಳಲ್ಲಿ ಭಾರಿ ಮಳೆ

ಭಾರೀ ಮಳೆಯ ಕಾರಣ ಚೆಂಬರಂಬಕ್ಕಂ ಜಲಾಶಯದಿಂದ ನೀರು ಹೊರ ಬಿಡಲಾಗಿದೆ. 85.4 ಅಡಿ ಜಲಾಶಯದಲ್ಲಿ 82.35 ಅಡಿ ನೀರಿನ ಸಂಗ್ರಹವಿದೆ. ಸತತವಾಗಿ ಸುರಿಯುತ್ತಿರುವ ಮಳೆಯ ಕಾರಣ ಚೆನ್ನೈ ನಗರದ ಹಲವು ಪ್ರದೇಶಗಳು ಜಲಾವೃತವಾಗಿವೆ.

ಚೆನ್ನೈ ಮಾತ್ರವಲ್ಲ ಆಡ್ಯಾರ್ ನದಿ ಪಾತ್ರದ ಕಾಂಚಿಪುರಂ, ಚೆಂಗಲ್‌ಪಟ್ಟು ಜಿಲ್ಲೆಗಳಲ್ಲಿ ಸಹ ಪ್ರವಾಹ ಮುನ್ಸೂಚನೆ ನೀಡಲಾಗಿದೆ. ಎರಡು ದಿನಗಳ ಕಾಲ ಶಾಲಾ-ಕಾಲೇಜುಗಳನ್ನು ತಿರುವಳ್ಳೂರು, ಚೆಂಗಲ್‌ಪಟ್ಟು, ಕಾಂಚಿಪುರಂನಲ್ಲಿ ಬಂದ್ ಮಾಡಲು ಆದೇಶ ನೀಡಲಾಗಿದೆ.

ಭಾರೀ ಮಳೆ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್ ಪ್ರವಾಹ ಪೀಡಿತ ಪ್ರದೇಶಗಳ ಬಗ್ಗೆ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಜಲಾವೃತವಾಗಿರುವ 14 ಪ್ರದೇಶಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜನರ ಸ್ಥಳಾಂತರಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದು, ತಮಿಳುನಾಡು ಮುಖ್ಯಮಂತ್ರಿಗಳ ಜೊತೆ ಮಳೆ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಿದ್ದೇನೆ. ಕೇಂದ್ರ ಸರ್ಕಾರದಿಂದ ಅಗತ್ಯವಿರುವ ಎಲ್ಲಾ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

ಪ್ರವಾಹದಲ್ಲಿ ಸಿಲುಕಿದ ಜನರ ರಕ್ಷಣೆಗಾಗಿ 4 ಎನ್‌ಡಿಆರ್‌ಎಫ್ ತಂಡಗಳನ್ನು ನಿಯೋಜನೆ ಮಾಡಲಾಗಿದೆ. ರಸ್ತೆಗಳಲ್ಲಿ ನೀರು ತುಂಬಿಕೊಂಡಿದ್ದು ವಾಹನ ಸವಾರರು ಪರದಾಡುತ್ತಿದ್ದಾರೆ. ರೈಲ್ವೆ ಹಳಿಗಳ ಮೇಲೆ ನೀರು ನಿಂತು ಲೋಕಲ್ ರೈಲುಗಳ ಸಂಚಾರವೂ ವಿಳಂಬವಾಗುತ್ತಿದೆ.

ಭಾನುವಾರ ಸಂಜೆಯ ಮಾಹಿತಿಯಂತೆ ಚೆನ್ನೈ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ 10 ಸೆಂ. ಮೀ.ನಷ್ಟು ಮಳೆಯಾಗಿದೆ. ಮಳೆ ಕಾರಣ ಜಲಾಶಯಕ್ಕೆ ಒಳಹರಿವು ಹೆಚ್ಚಿದೆ. ಪೂಂಡಿ, ಫುಜಲ್ ಜಲಾಶಯಗಳಿಂದ ನೀರು ಹೊರ ಬಿಡಲು ಸಿದ್ಧತೆ ನಡೆಸಲಾಗುತ್ತಿದೆ.

ಚೆಂಗಲ್‌ಪೇಟ್ ಮತ್ತು ತಿರುವಳ್ಳುರ್‌ಗೆ ತಲಾ ಒಂದು ಮತ್ತು ಮಧುರೈನಲ್ಲಿ 2 ಎನ್‌ಡಿಆರ್‌ಎಫ್ ತಂಡಗಳನ್ನು ನಿಯೋಜನೆ ಮಾಡಲಾಗಿದೆ. ವೆಲಾಚೆರಿ, ಅದಂಬಕ್ಕಂ, ಮಡಿಪಕ್ಕಂ ಭಾಗದಲ್ಲಿ ತಗ್ಗು ಪ್ರದೇಶಗಳು ಜಲಾವೃತವಾಗಿದೆ. ನಿವಾಸಿಗಳನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರ ಮಾಡಲಾಗಿದೆ.

ಎ. ಕೆ. ಸ್ಟಾಲಿನ್ ಸಚಿವರ ಜೊತೆ ಕಾಳಜಿ ಕೇಂದ್ರಗಳಿಗೆ ಭೇಟಿ ನೀಡಿ ಸಂತ್ರಸ್ತರಿಗೆ ಆಹಾರ, ಹೊದಿಕೆ ವಿತರಣೆ ಮಾಡಿದರು. 2015ರಲ್ಲಿಯೂ ಚೆನ್ನೈನಲ್ಲಿ ಭಾರೀ ಮಳೆಯಾಗಿತ್ತು. ಈಗಲೂ ಅದೇ ರೀತಿಯ ಪರಿಸ್ಥಿತಿ ನಿರ್ಮಾಣವಾಗುತ್ತಿದೆ.

English summary
Heavy rain in Chennai and nearby areas. School and College in four districts to stay shut for the next two days. Most government offices will remain shut on Monday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X