ಸೇನಾ ಹೆಲಿಕಾಪ್ಟರ್ ಪತನ; ಮೋದಿಗೆ ಮಾಹಿತಿ ನೀಡಿದ ರಾಜನಾಥ್ ಸಿಂಗ್

ಚೆನ್ನೈ, ಡಿಸೆಂಬರ್ 08; ಭಾರತೀಯ ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ ಹಿರಿಯ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ತಮಿಳುನಾಡಿನ ನೀಲಗಿರಿ ಅರಣ್ಯ ವ್ಯಾಪ್ತಿಯ ಕೂನೂರು ಬಳಿ ಪತಗೊಂಡಿವೆ. ರಕ್ಷಣಾ ಕಾರ್ಯ ನಡೆಯುತ್ತಿದ್ದು, ಪ್ರಾಣ ಹಾನಿ ಬಗ್ಗೆ ಮಾಹಿತಿ ಇನ್ನೂ ತಿಳಿದು ಬಂದಿಲ್ಲ.

Recommended Video

      GENERAL Bipin Rawat's Chopper Crashes In Tamil Nadu | Oneindia Kannada

      ಬುಧವಾರ ಮಧ್ಯಾಹ್ನ ಎಂಐ-17ವಿ5 ಹೆಲಿಕಾಪ್ಟರ್ ಪತನಗೊಂಡಿದೆ. ಸೇನಾ ಮುಖ್ಯಸ್ಥ ಬಿಪಿನ್ ರಾವತ್, ಅವರ ಪತ್ನಿ, ಸೇನೆಯ ಹಿರಿಯ ಅಧಿಕಾರಿಗಳು ಸೇರಿದಂತೆ 14 ಜನರು ಪ್ರಯಾಣ ಮಾಡುತ್ತಿದ್ದ ಸೇನಾ ಹೆಲಿಕಾಪ್ಟರ್ ಅಪಘಾತಗೊಂಡಿದೆ.

      ಸಂಸತ್ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ್ದು, ಘಟನೆ ಬಗ್ಗೆ ಮಾಹಿತಿ ನೀಡಿದ್ದಾರೆ. ರಕ್ಷಣಾ ಸಚಿವಾಲಯದ ಹಿರಿಯ ಅಧಿಕಾರಿಗಳ ತುರ್ತು ಸಭೆ ನಡೆಯುತ್ತಿದೆ.

      Helicopter Crash

      ಅಧಿಕಾರಿಗಳ ತುರ್ತು ಸಭೆ ಬಳಿಕ ರಾಜನಾಥ್ ಸಿಂಗ್ ಅಧಿಕಾರಿಗಳ ಜೊತೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್ ಚೆನ್ನೈನಿಂದ ಹೊರಟಿದ್ದು, 5 ಗಂಟೆ ವೇಳೆಗೆ ಅವರು ಘಟನಾ ಸ್ಥಳ ತಲುಪಲಿದ್ದಾರೆ.

      ಕೊಯಮತ್ತೂರು ಜಿಲ್ಲೆಯ ವೆಲಿಂಗ್ಟನ್‌ಲ್ಲಿ ನಿಗದಿಯಾಗಿದ್ದ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಲು ಬಿಪಿನ್ ರಾವತ್ ಹೊರಟಿದ್ದರು. ಅಪಘಾತದಲ್ಲಿ ಗಾಯಗೊಂಡ 4 ಜನರನ್ನು ರಕ್ಷಣೆ ಮಾಡಲಾಗಿದೆ. ನೀಲಗಿರೀಸ್‌ನಲ್ಲಿರುವ ಸೇನಾ ಆಸ್ಸ್ಪತ್ರೆಗೆ ದಾಖಲು ಮಾಡಲಾಗಿದೆ.

      ಮಾಹಿತಿ ಸಿಕ್ಕಿಲ್ಲ; ಪತನಗೊಂಡ ಹೆಲಿಕಾಪ್ಟರ್‌ನಲ್ಲಿ ಸೇನಾ ಮುಖ್ಯಸ್ಥ ಬಿಪಿನ್‌ ರಾವತ್‌ ಮತ್ತು ಅವರ ಪತ್ನಿ ಮಧುಲಿಕಾ ರಾವತ್‌ ಇದ್ದರು. ಆದರೆ ಇಬ್ಬರ ಪರಿಸ್ಥಿತಿ ಏನಾಗಿದೆ? ಎಂಬ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಸ್ಥಳೀಯರು ಹೇಳುವ ಪ್ರಕಾರ ಸುಟ್ಟ ಗಾಯಗಳಾಗಿದ್ದ ನಾಲ್ವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

      ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಾಯುಪಡೆಯ ಮುಖ್ಯಸ್ಥರಾದ ಏರ್ ಮಾರ್ಷಲ್ ವಿವೇಕ್ ರಾಮ್ ಚೌಧರಿಗೆ ಘಟನಾ ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಿದ್ದಾರೆ.

      ಕೇಂದ್ರದ ವಿವಿಧ ಸಚಿವರು, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಸಚಿವರು, ಶಾಸಕರು ಘಟನೆಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಬಿಪಿನ್ ರಾವತ್ ಸುರಕ್ಷಿತವಾಗಿ ಬರಲಿ ಎಂದು ಹಾರೈಸಿದ್ದಾರೆ.

      ಅಮಿತ್ ಶಾ ಆಗಮನ; ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂಸತ್ ಭವನಕ್ಕೆ ಆಗಮಿಸಿದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿರ್ ದೋವಲ್ ಸಂಸತ್ ಭವನದಲ್ಲಿಯೇ ಇದ್ದಾರೆ. ಲೋಕಸಭೆಯಲ್ಲಿ ಅಮಿತ್ ಶಾ ಘಟನೆ ಕುರಿತು ಹೇಳಿಕೆ ನೀಡುವ ನಿರೀಕ್ಷೆ ಇದೆ.

      ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ದೆಹಲಿಯಲ್ಲಿರುವ ಬಿಪಿನ್ ರಾವತ್ ನಿವಾಸಕ್ಕೆ ಆಗಮಿಸಿದ್ದಾರೆ. ರಾವತ್ ಮತ್ತು ಅವರ ಪತ್ನಿ ಹೆಲಿಕಾಪ್ಟರ್‌ನಲ್ಲಿದ್ದ ಕಾರಣ ಘಟನೆ ಬಗ್ಗೆ ಕುಟುಂಬದವರಿಗೆ ಮಾಹಿತಿ ನೀಡಲಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+