ತಮಿಳುನಾಡು ಮುಖ್ಯಮಂತ್ರಿಯಾಗಿ ಕೆ ಪಳನಿಸ್ವಾಮಿ

By: ವಿಕಾಸ್ ನಂಜಪ್ಪ
Subscribe to Oneindia Kannada

ಬೆಂಗಳೂರು, ಫೆಬ್ರವರಿ 16: ಶಶಿಕಲಾ ನಂಬಿಕಸ್ಥ ಎಡಪ್ಪಾಡಿ ಕೆ ಪಳನಿಸ್ವಾಮಿ ತಮಿಳುನಾಡಿನ 21ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಸಂಜೆ 4:40ಕ್ಕೆ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಿದ್ಯಾಸಾಗರ ರಾವ್ ನೂತನ ಮುಖ್ಯಮಂತ್ರಿಗೆ ಪ್ರಮಾಣವಚನ ಬೋಧಿಸಿದರು. ಪಳನಿಸ್ವಾಮಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

Here is the List of new ministers in Tamil Nadu government

ಮುಖ್ಯಮಂತ್ರಿಯ ಜತೆ 30 ಜನ ಸಚಿವರೂ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಮೂಲಕ ತಮಿಳುನಾಡಿನಲ್ಲಿ ಹೊಸ ಸರಕಾರ ಅಸ್ತಿತ್ವಕ್ಕೆ ಬಂದಿದೆ.

Here is the List of new ministers in Tamil Nadu government

30 ಸಚಿವರಿಗೂ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಪ್ರಭಾವಿ ಗೃಹ ಖಾತೆ, ಹಣಕಾಸು ಖಾತೆಗಳನ್ನು ಮುಖ್ಯಮಂತ್ರಿ ತಮ್ಮ ಬಳಿಯೇ ಇಟ್ಟುಕೊಂಡಿದ್ದಾರೆ.[ನಿಯೋಜಿತ ಮುಖ್ಯಮಂತ್ರಿ ಇಕೆ ಪಳನಿಸ್ವಾಮಿ ವ್ಯಕ್ತಿಚಿತ್ರ]

Here is the List of new ministers in Tamil Nadu government

ಇತ್ತೀಚೆಗೆ ಎಐಎಡಿಎಂಕೆ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಲಾದ ಕೆ.ಎ ಸೆಂಗೊಟ್ಟಯನ್ ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಕ್ರೀಡಾ ಮತ್ತು ಯುವ ಜನ ಸೇವೆ ಖಾತೆಗಳನ್ನು ನೀಡಲಾಗಿದೆ.[ಅಮ್ಮನಂತೆ ಪರಪ್ಪನ ಅಗ್ರಹಾರ ಜೈಲಿನಿಂದಲೇ ಚಿನ್ನಮ್ಮನ ದರ್ಬಾರ್!]

Here is the List of new ministers in Tamil Nadu government
Here is the List of new ministers in Tamil Nadu government

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Edapaddi Palanisamy is all set to take over the Chief Minister of Tamil Nadu. After a long drawn political battle in the state, EPS will take oath as the CM at 4.30 pm. Along with him there are 30 others who will be sworn in as ministers.
Please Wait while comments are loading...