ಹಿಜಾಬ್ ತೀರ್ಪು ನೀಡಿದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗೆ ಜೀವ ಬೆದರಿಕೆ; 3 ವಿರುದ್ಧ ಕೇಸ್
ಮಧುರೈ, ಮಾರ್ಚ್ 19: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಜೀವ ಬೆದರಿಕೆ ಹಾಕಿದ ಹಿನ್ನೆಲೆ ತಮಿಳುನಾಡಿನ ತೌಹೀದ್ ಜಮಾನ್ ಸಂಘಟನೆಯ ಮೂವರು ಪದಾಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಕರ್ನಾಟಕ ಹೈಕೋರ್ಟ್ ನೀಡಿರುವ ಹಿಜಾಬ್ ತೀರ್ಪಿಗೆ ಸಂಬಂಧಿಸಿದಂತೆ ತೌಹೀದ್ ಜಮಾನ್ ಮಧುರೈನ ಕೋರಿಪಾಳ್ಯಂ ಪ್ರದೇಶದಲ್ಲಿ ಸಾರ್ವಜನಿಕ ಸಭೆಯನ್ನು ನಡೆಸಿತು. ಈ ವೇಳೆ ನ್ಯಾಯಮೂರ್ತಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಮೂವರು ಪದಾಧಿಕಾರಿಗಳ ಮೇಲೆ ಕೇಸ್ ದಾಖಲಿಸಲಾಗಿದೆ.
ಜಾರ್ಖಂಡ್ ಹೈಕೋರ್ಟ್ ನ್ಯಾಯಾಧೀಶರ ಸಾವಿನ ಉದಾಹರಣೆ ಉಲ್ಲೇಖಿಸಿದ ಪದಾಧಿಕಾರಿಯೊಬ್ಬ ಹಿಜಾಬ್ ತೀರ್ಪಿನ ಮೇಲೆ ನ್ಯಾಯಾಧೀಶರು ಈಗ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿತ್ತು.

ಮೂವರು ಪದಾಧಿಕಾರಿಗಳ ವಿರುದ್ಧ ಪ್ರಕರಣ:
ಮಧುರೈನ ಕೋರಿಪಾಳ್ಯಂ ಪ್ರದೇಶದಲ್ಲಿ ತೌಹೀದ್ ಜಮಾನ್ ನಡೆಸಿದ ಕಾರ್ಯಕ್ರಮದ ನಂತರದಲ್ಲೂ ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಲಾಗಿತ್ತು. ಅಲ್ಲದೇ ನ್ಯಾಯಾಧೀಶರಿಗೆ ಜೀವ ಬೆದರಿಕೆ ಹಾಕಲಾಗಿತ್ತು ಎಂದು ಆರೋಪಿಸಿ ಪದಾಧಿಕಾರಿಗಳ ವಿರುದ್ಧ ದೂರು ದಾಖಲಿಸಲಾಗಿದೆ.
ಬಿಜೆಪಿಯ ನಾಯಕಿ ವನತಿ ಶ್ರೀನಿವಾಸನ್ ಟ್ವೀಟ್:
ಬಿಜೆಪಿಯ ಹಿರಿಯ ನಾಯಕಿ ವನತಿ ಶ್ರೀನಿವಾಸನ್ ಟ್ವಿಟರ್‌ನಲ್ಲಿ ವೀಡಿಯೋವನ್ನು ಪೋಸ್ಟ್ ಮಾಡಿದ್ದು, ಇದರ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ.
ದೂರಿನ ಮೇರೆಗೆ ಮಧುರೈ ಪೊಲೀಸರು ಮೂವರು ಟಿಎನ್‌ಟಿಜೆ ಪದಾಧಿಕಾರಿಗಳ ವಿರುದ್ಧ ಐಪಿಸಿಯ 153(ಎ),505(1)(ಸಿ),505(2),506(1) ಆರ್/ಡಬ್ಲ್ಯು 109 ಐಪಿಸಿ ಸೇರಿದಂತೆ ಐದು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮೂವರು ಆರೋಪಿಗಳ ಪತ್ತೆಗೆ ಮಧುರೈ ಪೊಲೀಸರು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications