ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಿಮ್ಮ ಸಮಸ್ಯೆಗಳನ್ನು ಆಲಿಸಲು ಬಂದಿದ್ದೇನೆ,ನನ್ನ ಮನಸ್ಸಿನ ಭಾವನೆಗಳನ್ನು ಹೇಳುವುದಕ್ಕಲ್ಲ:ರಾಹುಲ್ ಗಾಂಧಿ

|
Google Oneindia Kannada News

ಚೆನ್ನೈ, ಜನವರಿ 24: ನಾನಿಲ್ಲಿ ನೀವು ಏನು ಮಾಡಬೇಕು ಎಂದು ಹೇಳಲು ಬಂದಿಲ್ಲ, ಅಥವಾ ನನ್ನ ಮನಸ್ಸಿನಲ್ಲಿರುವ ಮಾತುಗಳನ್ನೂ ವ್ಯಕ್ತಪಡಿಸಲು ಬಂದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ತಮಿಳುನಾಡಿಗೆ ತೆರಳಿರುವ ರಾಹುಲ್ ಗಾಂಧಿ ನಾನಿಲ್ಲಿ ನಿಮ್ಮ ಮಾತುಗಳನ್ನು ಆಲಿಸಲು ಬಂದಿದ್ದೇನೆ, ನಿಮ್ಮ ಕಷ್ಟಗಳನ್ನು ಅರ್ಥಮಾಡಿಕೊಳ್ಳಲು ಅವಕಾಶ ಮಾಡಿಕೊಡಿ, ನಿಮ್ಮ ಕಷ್ಟಗಳನ್ನು ನಿವಾರಿಸಲು ಸಾಧ್ಯವಾದಷ್ಟು ಪ್ರಯತ್ನಪಡುತ್ತೇನೆ ಎಂದಿದ್ದಾರೆ.

"ಸಿಬಿಐ, ಇಡಿ ಮೂಲಕ ಮೋದಿ ತಮಿಳುನಾಡನ್ನು ನಿಯಂತ್ರಿಸುವ ಪ್ರಯತ್ನದಲ್ಲಿದ್ದಾರೆ"

ಇನ್ನೊಂದೆಡೆ ಮೋದಿ ಸರ್ಕಾರದ ವಿರುದ್ಧ ಟ್ವಿಟ್ಟರ್ ಮೂಲಕ ಹರಿಹಾಯ್ದಿದ್ದಾರೆ. ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಗಗನಕ್ಕೇರುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಕೇಂದ್ರ ಸರ್ಕಾರದ ವಿರುದ್ಧ ಭಾನುವಾರ ತೀವ್ರವಾಗಿ ಕಿಡಿಕಾರಿದ್ದಾರೆ.

 I Have Come Here To Listen To You, To Understand Your Problems: Rahul Gandhi

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿಯವರು, ಕೇಂದ್ರ ಸರ್ಕಾರ ಹಣದುಬ್ಬರವನ್ನು ನಿಯಂತ್ರಿಸುವ ಬದಲು ಕೇಂದ್ರ ಸರ್ಕಾರ ತೆರಿಗೆ ಸಂಗ್ರಹಿಸುವ ಕಾರ್ಯದಲ್ಲಿ ಕಾರ್ಯನಿರತವಾಗಿದೆ ಎಂದು ಹೇಳಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಯವರು 'ಜಿಡಿಪಿ'ಯಲ್ಲಿ ಭಾರಿ ಬೆಳವಣಿಗೆಯನ್ನು ಸಾಧಿಸಿದ್ದಾರೆ, ಅಂದರೆ ಗ್ಯಾಸ್-ಡೀಸೆಲ್-ಪೆಟ್ರೋಲ್ ಬೆಲೆಗಳು! ಸಾರ್ವಜನಿಕರು ಹಣದುಬ್ಬರದಿಂದ ಬಳಲುತ್ತಿದ್ದಾರೆ, ಆದರೆ, ಮೋದಿ ಸರ್ಕಾರ ತೆರಿಗೆ ಸಂಗ್ರಹದಲ್ಲಿ ನಿರತವಾಗಿದೆ ಎಂದು ತಿಳಿಸಿದ್ದಾರೆ.

English summary
I have not come here to tell you what to do or tell you my Mann ki Baat, I have come here to listen to you, to understand your problems & try to help resolve them Sas Rahul Gandhi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X