ಸೇನಾ ಮುಖ್ಯಸ್ಥರಿದ್ದ ಹೆಲಿಕಾಪ್ಟರ್ ಪತನ, ಇಲ್ಲಿಯವರೆಗೆ ಲಭ್ಯವಾಗಿರುವ ಮಾಹಿತಿ

ಚೆನ್ನೈ, ಡಿಸೆಂಬರ್ 08: ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ ಒಟ್ಟು 14 ಮಂದಿ ಇದ್ದ ಭಾರತೀಯ ಸೇನೆಯ ಹೆಲಿಕಾಪ್ಟರ್ ತಮಿಳುನಾಡಿನಲ್ಲಿ ಪತನಗೊಂಡಿದ್ದು, ಇಲ್ಲಿಯವರೆಗೆ ಲಭ್ಯವಾಗಿರುವ ಮಾಹಿತಿಯನ್ನು ನೀಡುತ್ತಿದ್ದೇವೆ.

ತಮಿಳುನಾಡಿನ ಕುನೂರಿನಲ್ಲಿ ಬುಧವಾರ ಅಪಘಾತ ಸಂಭವಿಸಿದೆ. ತಮಿಳು ನಾಡಿನ ಕೂನೂರು ಬಳಿ ಎಂಐ-17ವಿ5 ಹೆಲಿಕಾಪ್ಟರ್( Mi-17V5 helicopter) ಪತನಕ್ಕೀಡಾಗಿರುವ ಘಟನೆಗೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಭಾರತೀಯ ವಾಯುಪಡೆ ರಕ್ಷಣಾ ಪಡೆ ಮುಖ್ಯಸ್ಥ ಬಿಪಿನ್ ರಾವತ್, ಅವರ ಕುಟುಂಬ ಮತ್ತು ಇತರ ಉನ್ನತ ಮಟ್ಟದ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ದುರಂತಕ್ಕೀಡಾಗಿದ್ದು, ಘಟನೆಗೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದೆ.

ಸೇನಾ ಅಧಿಕಾರಿಗಳು ಹೋಗುವ ಹೆಲಿಕಾಪ್ಟರ್ ಟ್ವಿನ್ ಇಂಜಿನ್ ಹೊಂದಿದೆ. ಅಪಘಾತ ನಡೆದ ಎಂಐ 17ರಲ್ಲಿ ಪ್ರಧಾನಿ, ರಕ್ಷಣಾ ಸಚಿವರಂತಹ ವಿವಿಐಪಿಗಳೂ ಸವಾರಿ ಮಾಡುತ್ತಾರೆ. ಸೇನೆ ಮತ್ತು ವಾಯುಪಡೆ ಈ ಹೆಲಿಕಾಪ್ಟರ್ ಅನ್ನು ವಿವಿಐಪಿಗಾಗಿ ಬಳಸುತ್ತವೆ. ಇದರಲ್ಲಿ ಎರಡು ಎಂಜಿನ್ ಗಳಿದ್ದು, ಯಾವುದೇ ಸಂದರ್ಭದಲ್ಲೂ ಮತ್ತೊಂದು ಎಂಜಿನ್ ಬಳಸಿ ಸರಿಯಾದ ಜಾಗಕ್ಕೆ ತರಬಹುದು ಎನ್ನಲಾಗಿದೆ.

IAF Chopper With CDS Bipin Rawat On Board Crash What We Know So Far

ಎಂಐ-17 ಹೆಲಿಕಾಪ್ಟರ್ ಪತನವಾಗಿರುವುದನ್ನು ಭಾರತೀಯ ವಾಯುಪಡೆ ಖಚಿತಪಡಿಸಿದೆ. ಈ ಅಪಘಾತದ ಬಗ್ಗೆ ವಾಯುಪಡೆ ಟ್ವೀಟ್‌ನಲ್ಲಿ ಮಾತ್ರ ಮಾಹಿತಿ ನೀಡಿದೆ. ಅದನ್ನು ಬಿಟ್ಟರೆ ಯಾವುದೇ ಮಾಹಿತಿ ನೀಡಿಲ್ಲ.

ದಟ್ಟ ಮಂಜು ಕವಿದ ವಾತಾವರಣ ನಡುವೆ ನಂಜಪ್ಪಂಚತಿರಂ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಸಂಭವನೀಯ ಸಾವು ನೋವುಗಳು ಅಥವಾ ಗಾಯಗಳ ಬಗ್ಗೆ ತಕ್ಷಣದ ಮಾಹಿತಿ ಇಲ್ಲ.

ಹೆಲಿಕಾಪ್ಟರ್ ನಲ್ಲಿ 14 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಅವರಲ್ಲಿ ಜನರಲ್ ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ರಾವತ್, ಬ್ರಿಗೇಡಿಯರ್ ಎಲ್ಎಸ್ ಲಿಡರ್, ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್, ನಾಯಕ್ ಗುರ್ಸೇವಕ್ ಸಿಂಗ್, ನಾಯಕ್ ಜಿತೇಂದ್ರ ಕುಮಾರ್, ಲ್ಯಾನ್ಸ್ ನಾಯಕ್ ವಿವೇಕ್ ಕುಮಾರ್, ಲ್ಯಾನ್ಸ್ ನಾಯಕ್ ಬಿ ಸಾಯಿ ತೇಜಾ ಮತ್ತು ಹವಾಲ್ದಾರ್ ಸತ್ಪಾಲ್ ಸೇರಿದ್ದಾರೆ ಎಂದು ಮೂಲಗಳು ತಿಳಿಸಿವೆ.

*ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು ವೆಲ್ಲಿಂಗ್ಟನ್‌ನಲ್ಲಿರುವ ಸೇನಾ ಕಾಲೇಜಿನಲ್ಲಿ ಉಪನ್ಯಾಸ ನೀಡಲು ತೆರಳುತ್ತಿದ್ದರು.
*Mi-17V5 ಹೆಲಿಕಾಪ್ಟರ್ ಸೇನಾ ಬೇಸ್‌ನಿಂದ ಹೊರಟಿತ್ತು, ತಮಿಳುನಾಡಿನ ಕುನೂರ್‌ಬಳಿ ಅಪಘಾತಕ್ಕೀಡಾಗಿದೆ.
*ಕುನೂರ್‌ನಿಂದ 7 ಕಿ.ಮೀ ದೂರದ ಕಟ್ಟೇರಿ ಬಳಿ ಇರುವ ಟೀ ಎಸ್ಟೇಟ್‌ ಬಳಿ ಹೆಲಿಕಾಪ್ಟರ್ ಪತನವಾಗಿದೆ
*ಅಪಘಾತವಾದ ಸ್ಥಳದಿಂದ ನಾಲ್ಕು ಮಂದಿಯನ್ನು ರಕ್ಷಿಸಲಾಗಿದೆ
*ತೀವ್ರ ಗಾಯಗಳಿಂದ ನರಳುತ್ತಿರುವವರನ್ನು ಕೂಡಲೇ ಆಸ್ಪತ್ರೆಗೆ ಕಳುಹಿಸಲಾಗಿದೆ.
*ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಆರೋಗ್ಯದ ಕುರಿತು ಯಾವುದೇ ಮಾಹಿತಿ ಲಭ್ಯವಾಗಿದೆ.
*ಬಿಪಿನ್ ರಾವತ್, ಮಧುಲಿಕಾ ರಾವತ್, ಬ್ರಿಗೆಡಿಯರ್ ಎಲ್‌ಎಸ್ ಲಿಡ್ಡರ್, ಲೆಫ್ಟಿನೆಂಟ್ ಕೊಲೊನಲ್ ಹರಿಜಿಂದರ್ ಸಿಂಗ್, ನಾಯ್ಕ್ ಗುರುಸೇವಕ್ ಸಿಂಗ್, ನಾಯ್ಕ್ ಜಿತೇಂದರ್ ಕುಮಾರ್, ನಾಯ್ಕ್ ವಿವೇಕ್ ಕುಮಾರ್, ನಾಯ್ಕ್ ಬಿ ಸಾಯಿ ತೇಜ, ಹವಲ್ದಾರ್ ಸತ್ಪಾಲ್ ಹಾಗೂ ಪೈಲಟ್‌ಗಳು ಹೆಲಿಕಾಪ್ಟರ್‌ನಲ್ಲಿ ತೆರಳುತ್ತಿದ್ದರು
*ಭಾರತೀಯ ಸೇನೆಯು ಪತನ ಕುರಿತು ತನಿಖೆಗೆ ಮುಂದಾಗಿದೆ
*12 ಮಂದಿ ಇರುವ ಆರು ಆಂಬ್ಯುಲೆನ್ಸ್‌ಗಳು ಸ್ಥಳಕ್ಕೆ ತಲುಪಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+