Breaking; ಐಐಟಿ ಮದ್ರಾಸ್ ಕೋವಿಡ್ ಸೋಂಕಿತರ ಸಂಖ್ಯೆ 111ಕ್ಕೆ ಏರಿಕೆ
ಚೆನ್ನೈ, ಏಪ್ರಿಲ್ 26; ಮದ್ರಾಸ್ ಐಐಟಿ ಕ್ಯಾಂಪಸ್‌ನಲ್ಲಿ 32 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಕ್ಯಾಂಪಸ್‌ನಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 111ಕ್ಕೆ ಏರಿಕೆಯಾಗಿದೆ.
ತಮಿಳುನಾಡಿನ ಆರೋಗ್ಯ ಇಲಾಖೆ ಮಂಗಳವಾರ ಈ ಕುರಿತು ಮಾಹಿತಿ ನೀಡಿದೆ. ಕ್ಯಾಂಪಸ್‌ನಲ್ಲಿ 32 ಹೊಸ ಪ್ರಕರಣ ದಾಖಲಾಗಿದೆ ಎಂದು ಹೇಳಿದೆ. ಏಪ್ರಿಲ್ 21ರಂದು ಕ್ಯಾಂಪಸ್‌ನಲ್ಲಿ 12 ಕೋವಿಡ್ ಪ್ರಕರಣ ಮೊದಲು ದಾಖಲಾಗಿತ್ತು.
ತಮಿಳುನಾಡಿನ ಆರೋಗ್ಯ ಕಾರ್ಯದರ್ಶಿ ಡಾ. ಜೆ. ರಾಧಾಕೃಷ್ಣ, ಚೆನ್ನೈ ವಲಯದ ವೈದ್ಯಕೀಯ ಕಾರ್ಯದರ್ಶಿಗಳು ಸೋಮವಾರ ಐಐಟಿ ಕ್ಯಾಂಪಸ್‌ಗೆ ಭೇಟಿ ನೀಡಿ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಜೊತೆ ಮಾತುಕತೆ ನಡೆಸಿದ್ದರು.

ಸೋಂಕಿತರು ಕ್ಯಾಂಪಸ್‌ನಿಂದ ಹೊರ ಹೋಗದಂತೆ ವ್ಯವಸ್ಥೆ ಮಾಡಲಾಗಿದೆ. ಸೋಂಕು ತಗುಲಿದ ವಿದ್ಯಾರ್ಥಿಗಳನ್ನು ಕ್ಯಾಂಪಸ್‌ನಲ್ಲಿಯೇ ಐಸೋಲೇಷನ್ ಮಾಡಲು ಕ್ರಮಗಳನ್ನು ಕೈಗೊಳ್ಳಲಾಗಿದೆ.
ಡಾ. ಜೆ. ರಾಧಾಕೃಷ್ಣ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳು ಸಾಮಾಜಿಕ ಅಂತರ ಕಾಪಾಡಬೇಕು, ಆರೋಗ್ಯದ ಬಗ್ಗೆ ನಿಗಾವಹಿಸಬೇಕು ಎಂದು ಮನವಿ ಮಾಡಿದ್ದಾರೆ.
ಐಐಟಿ ಮದ್ರಾಸ್ ಕ್ಯಾಂಪಸ್ ಪರಿಸ್ಥಿತಿ ಕುರಿತು ಪ್ರಕಟಣೆ ಹೊರಡಿಸಿದೆ. ಸಿಬ್ಬಂದಿ, ವಿದ್ಯಾರ್ಥಿಗಳು ಕೋವಿಡ್ ಮಾರ್ಗಸೂಚಿ ಪಾಲನೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಕ್ಯಾಂಪಸ್ ಮೂರು ಅಲೆಯನ್ನು ಯಶಸ್ವಿಯಾಗಿ ನಿರ್ವಹಣೆ ಮಾಡಿದೆ, ಹಿಂದಿನ ಅನುಭವದಿಂದ ಈ ಅಲೆಯನ್ನು ನಿರ್ವಹಣೆ ಮಾಡುತ್ತೇವೆ ಎಂದು ಹೇಳಿದೆ.
4ನೇ ಅಲೆ ಭೀತಿ; ಕೋವಿಡ್ 4ನೇ ಅಲೆ ಭೀತಿ ಹಿನ್ನಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್ ಜಿಲ್ಲಾಧಿಕಾರಿಗಳ ಜೊತೆ ವರ್ಚುವಲ್ ಸಭೆ ನಡೆಸಿದರು. ಜನರು ಕೋವಿಡ್ ಮಾರ್ಗಸೂಚಿ ಪಾಲನೆ ಮಾಡುವ ಕುರಿತು ಗಮನಹರಿಸುವಂತೆ ಸೂಚನೆ ನೀಡಿದರು.
ಕೋವಿಡ್ ಪರಿಸ್ಥಿತಿ ಎದುರಿಸಲು ಸರ್ಕಾರ ಸಿದ್ಧವಾಗಿರಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಸರ್ಕಾರ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಿಲ್ಲ.












Click it and Unblock the Notifications