• search
 • Live TV
ಚೆನ್ನೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ತಮಿಳುನಾಡಿನಲ್ಲಿ ನ.12ರವರೆಗೂ ಭಾರಿ ಮಳೆ, ಶಾಲೆಗಳಿಗೆ 2 ದಿನ ರಜೆ ಘೋಷಣೆ

|
Google Oneindia Kannada News

ಚೆನ್ನೈ, ನವೆಂಬರ್ 09: ತಮಿಳುನಾಡಿನಲ್ಲಿ ಕಳೆದ ಎರಡು ದಿನಗಳಿಂದ ಮಳೆಯ ಆರ್ಭಟ ಜೋರಾಗಿದೆ. ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚೆನ್ನೈ, ಕಾಂಚೀಪುರಂ, ತಿರುವಲ್ಲೂರು, ಚೆಂಗಲ್‌ಪಟ್ಟು, ನಾಗಪತ್ತಿನಂ, ತಾಂಜಾವೂರ್, ಚೆನ್ನೈ ಶಾಲೆಗಳಿಗೆ ಎರಡು ದಿನ ರಜೆ ಘೋಷಿಸಲಾಗಿದೆ. ರಾಜ್ಯದ ಹೆಚ್ಚಿನ ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕೆಲವು ಭಾಗಗಳಲ್ಲಿ ಭಾರಿಯಿಂದ ಅತಿ ಹಾಗೂ ವಿಪರೀತ ಮಳೆ ಉಂಟಾಗಲಿದೆ ಎಂದು ಹೇಳಿದೆ.

ಚೆನ್ನೈ ಸೇರಿದಂತೆ 23 ಜಿಲ್ಲೆಗಳಲ್ಲಿ ಶಾಲಾ ಮತ್ತು ಕಾಲೇಜುಗಳನ್ನು ಮಂಗಳವಾರ ಮುಚ್ಚಲಾಗಿತ್ತು. ಇದೇ ಪರಿಸ್ಥಿತಿ ಬುಧವಾರವೂ ಮುಂದುವರಿಯುವ ಸಾಧ್ಯತೆ ಇದೆ.

ತಮಿಳುನಾಡು ಮತ್ತು ಪುದುಚೆರಿ ಕರಾವಳಿಯಲ್ಲಿನ ಮೀನುಗಾರರು ಗುರುವಾರದವರೆಗೂ ಸಮುದ್ರಕ್ಕೆ ಇಳಿಯಬಾರದು. ಪ್ರತಿಕೂಲ ಹವಾಮಾನದಿಂದ ಅಪಾಯ ಎದುರಾಗಬಹುದು ಎಂದು ಐಎಂಡಿ ಸೂಚನೆ ನೀಡಿದೆ.

ಸಮುದ್ರದ ಮಧ್ಯಭಾಗಕ್ಕೆ ತೆರಳಿರುವ ಮೀನುಗಾರು ಮಂಗಳವಾರವೇ ವಾಪಸಾಗುವಂತೆ ಸಂದೇಶ ನೀಡಲಾಗಿದೆ. ಚೆನ್ನೈ ಮತ್ತು ಸುತ್ತಮುತ್ತಲಿನ ಸ್ಥಳಗಳಲ್ಲಿನ ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸುವ ಕಾರ್ಯಗಳ ಮೇಲೆ ನಿಗಾ ಇರಿಸಲು ಐವರು ಐಎಎಸ್ ಅಧಿಕಾರಿಗಳನ್ನು ರಾಜ್ಯ ಡಿಎಂಕೆ ಸರ್ಕಾರ ನಿಯೋಜಿಸಿದೆ. ಮಂಗಳವಾರ ತಮ್ಮ ಕ್ಷೇತ್ರ ಕೊಲ್ಲತ್ತೂರ್‌ಗೆ ಭೇಟಿ ನೀಡಿದ ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಆಹಾರ ಹಾಗೂ ಪರಿಹಾರ ಸಾಮಗ್ರಿಗಳನ್ನು ವಿತರಿಸಿದರು.

ತಮಿಳುನಾಡಿನ ಪ್ರವಾಹ ಸ್ಥಿತಿಯು ರಾಜಕೀಯ ಕೆಸರೆರಚಾಟಕ್ಕೆ ಎಡೆಮಾಡಿಕೊಟ್ಟಿದೆ. ಮುಂಗಾರಿನಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಲ್ಲಿ ಡಿಎಂಕೆ ಸರ್ಕಾರ ವಿಫಲವಾಗಿದೆ ಎಂದು ಮಾಜಿ ಸಿಎಂ, ಎಐಎಡಿಎಂಕೆ ನಾಯಕ ಎಡಪ್ಪಾಡಿ ಕೆ ಪಳನಿಸ್ವಾಮಿ ಆರೋಪಿಸಿದ್ದಾರೆ.

IMD Warns of Extremely Heavy Rainfall During During Next 3 Days

ಬಂಗಾಳ ಕೊಲ್ಲಿಯ ಆಗ್ನೇಯ ಮತ್ತು ನೈಋತ್ಯ ಭಾಗಗಳಲ್ಲಿ, ಕ್ಯಾಮೊರಿನ್ ಪ್ರದೇಶದಲ್ಲಿ, ಮುನ್ನಾರ್ ಕೊಲ್ಲಿಯಲ್ಲಿ ಮತ್ತು ತಮಿಳುನಾಡಿ ಕರಾವಳಿಯ ಮೇಲೆ 40-50 ಕಿಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಇದು 60 ಕಿಮೀ ವೇಗದಲ್ಲಿ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸಿದೆ.

ಬಾರಿ ಮಳೆ ಮುನ್ಸೂಚನೆ: ಚೆನ್ನೈ,ಕಡಲೂರು, ವಿಲ್ಲುಪುರಂ, ಕಾಂಚಿಪುರಂ, ಚೆಂಗಲಪಟ್ಟು, ತಿರುವಳ್ಳೂರು, ವೆಲ್ಲೂರು, ರಾಣಿಪೇಟೆ, ತಿರುಪ್ಪತ್ತೂರು, ನಾಗಪಟ್ಟಣಂ,ಕಲ್ಲಕುರುಚಿ, ತಿರುವಣ್ಣಾಮಲೈ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬಾರಿ ಮಳೆಯಾಗುವ ನಿರೀಕ್ಷೆ ಇದೆ. ಹೀಗಾಗಿ ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ.

ಮುಂದಿನ 24 ಗಂಟೆಗಳ ಅವಧಿಯಲ್ಲಿ ತಮಿಳುನಾಡಿನ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾದ್ಯತೆ ಇದೆ, ಹೀಗಿ ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಾರಿ ಮಳೆಯಿಂದ ತಮಿಳುನಾಡಿನ ಬಹುತೇಕ ನಗರ ಮತ್ತು ಜಿಲ್ಲೆಗಳು ತತ್ತರಿಸಿ ಹೋಗಿದ್ದು ಜನರ ಸಂಕಷ್ಟ ಹೇಳ ತೀರದಾಗಿದೆ.ರಸ್ತೆಗಳು ಜಲಾವೃತ: ಬಾರಿ ಮಳೆಯಿಂದ ಚೆನ್ನೈ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ತಗ್ಗು ಪ್ರದೇಶದಲ್ಲಿ ಸಂಪೂರ್ಣ ಜಲಾವೃತವಾಗಿದ್ದು ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ರಸ್ತೆಯಲ್ಲಿ ನೀರು ನಿಂತ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ವಿಮಾನ ನಿಲ್ದಾಣದಲ್ಲಿ ನೀರು ನಿಂತ ಹಿನ್ನೆಲೆಯಲ್ಲಿ ವಿಮಾನಗಳ ಟೇಕಾಫ್ ಮತ್ತು ಲ್ಯಾಂಡಿಂಗೆ ವಿಳಂಬವಾಗಿದೆ.

ತಗ್ಗು ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.ಬಾರಿ ಮಳೆಯಿಂದ ಭೂಕುಸಿತ ವಾಗುತ್ತಿರುವ ಹಿನ್ನೆಲೆಯಲ್ಲಿ ಜನರು ಎಚ್ಚರಿಕೆಯಿಂದ ಇರುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.

   Team India ಹೊಸ ರೂಪ ಪಡೆದುಕೊಂಡಿದೆ | Oneindia Kannada
   English summary
   The Tamil Nadu government has declared a holiday on November 10 and November 11 for schools and colleges in nine districts of the state owing to the IMD's prediction of heavy to extremely heavy rainfall.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X
   Desktop Bottom Promotion